ಬಡವರ ಕನಸು ನನಸು.. ಮಾರುತಿಯಿಂದ ಬರಲಿವೆ ಈ ಜಬರ್ದಸ್ತ್ ಕಾರುಗಳು.. ಅತ್ಯಂತ ಕಡಿಮೆ ಬೆಲೆ?

ಮಾರುತಿ ಸುಜುಕಿ ಇಂಡಿಯಾ (Maruti Suzuki India) ನಂಬರ್ 1 ಕಾರು ತಯಾರಕ ಕಂಪನಿಯಾಗಿದೆ. ಕೈಗೆಟುಕುವ ಬೆಲೆಯ ಕಾರುಗಳನ್ನು ಮಾರಾಟಗೊಳಿಸುವ ಮೂಲಕ ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಎಕ್ಸ್‌ಪೋದಲ್ಲಿ ಇ ವಿಟಾರಾ (e Vitara) ಎಲೆಕ್ಟ್ರಿಕ್ ಎಸ್‌ಯುವಿಯನ್ನು ಅನಾವರಣಗೊಳಿಸಿತ್ತು. ಕೆಲವೇ ತಿಂಗಳಲ್ಲಿ ಈ ಕಾರು ಬಿಡುಗಡೆಯಾಗುವ ನಿರೀಕ್ಷೆಯಿದೆ. ಇದೇ ವರ್ಷ ಅಥವಾ ಮುಂದಿನ ವರ್ಷ ವಿವಿಧ ಹೊಚ್ಚ ಹೊಸ ಹ್ಯಾಚ್‌ಬ್ಯಾಕ್, ಎಸ್‌ಯುವಿ ಹಾಗೂ ಎಂಪಿವಿಯನ್ನು ಮಾರಾಟಕ್ಕೆ ತರಲು ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಮಾರುತಿ ಸುಜುಕಿ ಬಲೆನೊ (Maruti Suzuki Baleno): ಇದೊಂದು ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದೆ. ಈ ಕಾರನ್ನು ನವೀಕರಿಸಿದ ಹೊಸ ರೂಪದಲ್ಲಿ ಪರಿಚಯಿಸಲು ಕಂಪನಿಯು ತಯಾರಿಯನ್ನು ಮಾಡಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ. ನೂತನ ಹ್ಯಾಚ್‌ಬ್ಯಾಕ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್ ಹಾಗೂ ಹತ್ತಾರು ನವೀಕರಿಸಿದ ವೈಶಿಷ್ಟ್ಯಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ.

Maruti Suzuki Upcoming New Cars Under 10 Lakhs Baleno Fronx Facelift YBD eWX Details

ಸದ್ಯ, ದೇಶೀಯವಾಗಿ ಗ್ರಾಹಕರ ಖರೀದಿಗೆ ಲಭ್ಯವಿರುವ ಹೊಚ್ಚ ಹೊಸ ಮಾರುತಿ ಸುಜುಕಿ ಬಲೆನೊ ಕಾರು, ಕನಿಷ್ಠ ರೂ.6.66 ಲಕ್ಷ ಮತ್ತು ಗರಿಷ್ಠ ರೂ.9.83 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx): ಈ ಎಸ್‌ಯುವಿ 2023ರ ಏಪ್ರಿಲ್ ತಿಂಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಿತ್ತು. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವುದರಿಂದ ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಇದೇ ಕಾರನ್ನು ಕಂಪನಿಯು ನವೀಕರಿಸಿಯೂ ಮಾರಾಟಕ್ಕೆ ತರಲು ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ. ಹೊಸ ಕಾರು, 2026 ಅಥವಾ 2027 ಬಿಡುಗಡೆಯಾಗುವ ಸಾಧ್ಯತೆಯಿದೆ.

Maruti Suzuki Upcoming New Cars Under 10 Lakhs Baleno Fronx Facelift YBD eWX Details

ಪ್ರಸ್ತುತ ಸಿಗುವ ನೂತನ ಮಾರುತಿ ಸುಜುಕಿ ಫ್ರಾಂಕ್ಸ್ ಕಾರು, ಕನಿಷ್ಠ ರೂ.7.51 ಲಕ್ಷ ಹಾಗೂ ಗರಿಷ್ಠ ರೂ.13.04 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್ ಮತ್ತು ಹೆಡ್ಸ್-ಅಪ್ ಡಿಸ್‌ಪ್ಲೇಯಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಮಾರುತಿ ಸುಜುಕಿ ವೈಡಿಬಿ (Maruti Suzuki YBD): ಈ ಎಂಪಿವಿಯನ್ನು 2026ರಲ್ಲಿ ಮಾರಾಟಕ್ಕೆ ತರಲು ಕಂಪನಿಯು ಎಲ್ಲ ರೀತಿಯ ತಯಾರಿಯನ್ನು ಮಾಡಿಕೊಳ್ಳುತ್ತಿದೆ. 'ವೈಡಿಬಿ' ಎಂಬುದು ಈ ಕಾರಿನ ಕೋಡ್ ನೇಮ್ ಆಗಿದೆ. ಇದು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ 'ಸುಜುಕಿ ಸ್ಪೇಸಿಯಾ' ರೀತಿಯಲ್ಲಿರಲಿದೆ. ರೂ.6.5 ಲಕ್ಷ ದರದಲ್ಲಿ ಖರೀದಿಗೆ ದೊರೆಯುವ ನಿರೀಕ್ಷೆ ಕೂಡ ಇದೆ.

Maruti Suzuki Upcoming New Cars Under 10 Lakhs Baleno Fronx Facelift YBD eWX Details

ಮಾರುತಿ ಸುಜುಕಿ ಇಡಬ್ಲ್ಯೂಎಕ್ಸ್ (Maruti Suzuki eWX): ಇದೊಂದು ಪುಟ್ಟ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಆಗಿದ್ದು, ತಯಾರಿಕೆ ಹಂತದಲ್ಲಿದೆ ಎನ್ನಲಾಗಿದೆ. ಮುಂಬರುವ ವರ್ಷಗಳಲ್ಲಿ ಬಿಡುಗಡೆಯಾಗಬಹುದು ಎಂದು ಅಂದಾಜಿಸಲಾಗಿದೆ. ಈ ಕಾರು ಶಕ್ತಿಯುತವಾದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿರಬಹುದು. ಸಂಪೂರ್ಣ ಚಾರ್ಜ್‌ನಲ್ಲಿ 500 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಬಹುದು. ಜೊತೆಗೆ 10 ಲಕ್ಷದೊಳಗೆ ಖರೀದಿಗೆ ದೊರೆಯಬಹುದು ಎಂದು ಹೇಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, January 24, 2025, 17:04 [IST]
English summary
Maruti suzuki upcoming new cars under 10 lakhs baleno fronx facelift ybd ewx details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+