ಮಾರುಕಟ್ಟೆ ಶೇಕ್.. 29 Km ಮೈಲೇಜ್, ಹೊಸ ಮಾರುತಿ SUVಗೆ ಭರ್ಜರಿ ಡಿಮ್ಯಾಂಡ್.. 13,000ಕ್ಕೂ ಅಧಿಕ ಜನರಿಂದ ಖರೀದಿ!

ಸೆಪ್ಟೆಂಬರ್ 16 ರಂದು ನೂತನ ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris) ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗಿತ್ತು. ಕೆಲವೇ ದಿನಗಳಲ್ಲಿ ಈ ಕಾರಿಗೆ ಭಾರೀ ಬೇಡಿಕೆ ಸೃಷ್ಟಿಯಾಗಿದ್ದು, ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಇದೇ ಅಕ್ಟೋಬರ್ ತಿಂಗಳಲ್ಲೂ 'ವಿಕ್ಟೋರಿಸ್'ನ್ನು ಕಂಪನಿಯು ದೊಡ್ಡ ಸಂಖ್ಯೆಯಲ್ಲಿ ಮಾರಾಟಗೊಳಿಸಿದೆ. ಸರಿ ಸುಮಾರು 13,496 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಿದೆ.

ಹೊಸ 'ಮಾರುತಿ ವಿಕ್ಟೋರಿಸ್' ಕಾರಿಗಾಗಿ ಸೆಪ್ಟೆಂಬರ್ 3 ರಿಂದಲೇ ಬುಕ್ಕಿಂಗ್ ತೆಗೆದುಕೊಳ್ಳುವ ಕಾರ್ಯಕ್ಕೂ ಕಂಪನಿಯು ಚಾಲನೆ ನೀಡಿತ್ತು. ಅಕ್ಟೋಬರ್ ಅಂತ್ಯದೊಳಗೆ ಬರೋಬ್ಬರಿ 33,000ಕ್ಕೂ ಅಧಿಕ ಸಂಖ್ಯೆಯಲ್ಲಿ ಆರ್ಡರ್‌ನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಈಗಲೂ ಬುಕ್ಕಿಂಗ್ ತೆರೆದಿದ್ದು, ಆಸಕ್ತರು ರೂ.25,000 ಮುಂಗಡ ಹಣ ಪಾವತಿಸುವುದರೊಂದಿಗೆ ಕಾಯ್ದಿರಿಸಬಹುದು.

Maruti Suzuki Victoris October 2025 Sales Report

ನೂತನ 'ವಿಕ್ಟೋರಿಸ್' ವಿತರಣೆಗಳು ಸೆಪ್ಟೆಂಬರ್ ತಿಂಗಳ ಕೊನೆಯಲ್ಲಿ ಭಾಗದಲ್ಲಿ ಶುರುವಾಗಿತ್ತು. ಆದರೂ, ಆ ತಿಂಗಳು 4,261 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಈ ಕಾರು, ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.10.50 ಲಕ್ಷದಿಂದ ರೂ.19.99 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ದರವನ್ನು ಪಡೆದಿದೆ.

ಇದು ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ, ಝಡ್ಎಕ್ಸ್ಐ (ಒ), ಝಡ್ಎಕ್ಸ್ಐ ಪ್ಲಸ್ ಮತ್ತು ಝಡ್ಎಕ್ಸ್ಐ (ಒ) ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ನೋಡುಗರನ್ನು ಸೆಳೆಯಬಲ್ಲದು. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಶಾರ್ಕ್ ಫಿನ್ ಆಂಟೆನಾ, ಎಲ್ಇಡಿ ಟೈಲ್‌ಲ್ಯಾಂಪ್‌ಗಳು & ಅಲಾಯ್ ವೀಲ್‌ಗಳನ್ನು ಪಡೆದಿದೆ.

ಈ ಕಾರು 210 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,600 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸ್ಪ್ಲೆಂಡಿಡ್ ಸಿಲ್ವರ್, ಎಟರ್ನಲ್ ಬ್ಲೂ, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ ಮತ್ತು ಮಿಸ್ಟಿಕ್ ಗ್ರೀನ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು.

ನೂತನ 'ವಿಕ್ಟೋರಿಸ್' 1.5-ಲೀ. ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಮತ್ತು 1.5-ಲೀ. ಪೆಟ್ರೋಲ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. ಸಾಮಾನ್ಯ ಬೈಕ್‌ಗಳಿಗೆ ಕಮ್ಮಿಯಿಲ್ಲದ ರೀತಿಯಲ್ಲಿ 21 ರಿಂದ 29 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 14.17 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಇದು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ವಿಶೇಷವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.1 ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ಆಟೋ ಎಸಿಯನ್ನು ಹೊಂದಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಗ್ಲೋಬಲ್ ಎನ್‌ಸಿಎಪಿ ಮತ್ತು ಭಾರತ್ ಎನ್‌ಸಿಎಪಿಯಿಂದ 5 ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ಪ್ರಯಾಣಿಯರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) & 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಹೊಸ 'ವಿಕ್ಟೋರಿಸ್'ಗೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಕಿಯಾ ಸೊನೆಟ್ (Kia Sonet), ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder), ಟಾಟಾ ನೆಕ್ಸಾನ್ (Tata Nexon), ರೆನಾಲ್ಟ್ ಕೈಗರ್ (Renault Kiger) ಹಾಗೂ ಹ್ಯುಂಡೈ ಕ್ರೆಟಾ (Hyundai Creta) ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.

More from DriveSpark

Article Published On: Tuesday, November 11, 2025, 17:29 [IST]
English summary
Maruti suzuki victoris october 2025 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+