Maruti Suzuki: 29 ಕಿ.ಮೀ ಮೈಲೇಜ್.. 5-ಸೀಟರ್, 10.50 ಲಕ್ಷ.. ಹೊಸ ಮಾರುತಿ ಕಾರು ಬೇಕೆಂದು ಹಠ ಹಿಡಿದ ಗ್ರಾಹಕರು!
ಸೆಪ್ಟೆಂಬರ್ 16 ರಂದು ಬಹುನಿರೀಕ್ಷಿತ ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris) ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಯಿತು. ಈ ಕಾರು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಆಕರ್ಷಕವಾದ ವೈಶಿಷ್ಟ್ಯಗಳನ್ನು ಪಡೆದಿದೆ. ಅದಕ್ಕೆ ತಕ್ಕಂತೆ ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಲಭ್ಯವಾಗಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಸದ್ಯ, ಈ 'ವಿಕ್ಟೋರಿಸ್' ಬುಕ್ಕಿಂಗ್‌ನಲ್ಲಿ ಹೊಸ ಇತಿಹಾಸ ಬರೆಯಲಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ನೂತನ 'ಮಾರುತಿ ಸುಜುಕಿ ವಿಕ್ಟೋರಿಸ್' ಎಸ್‌ಯುವಿಯು 33,000ಕ್ಕೂ ಅಧಿಕ ಸಂಖ್ಯೆಯಲ್ಲಿ ಬುಕ್ಕಿಂಗ್‌ಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಸೆಪ್ಟೆಂಬರ್ 3 ರಿಂದ ಈ ಕಾರಿಗಾಗಿ ಆರ್ಡರ್ ತೆಗೆದುಕೊಳ್ಳುವ ಕಾರ್ಯಕ್ಕೆ ಕಂಪನಿಯು ಚಾಲನೆ ನೀಡಿತ್ತು. ಕೇವಲ 2 ತಿಂಗಳಲ್ಲಿ ಸಾಧನೆಯನ್ನು ಮಾಡಲಾಗಿದೆ.

ವಿಶೇಷವಾಗಿ ವಿಕ್ಟೋರಿಸ್‌ನ ಸ್ಟ್ಯಾಂಡರ್ಡ್ ಪೆಟ್ರೋಲ್ ಮಾಡೆಲ್‌ನಂತೆ, ಸಿಎನ್‌ಜಿ ಮಾಡೆಲ್‌ಗಳು ಸಹ ದೊಡ್ಡ ಸಂಖ್ಯೆಯಲ್ಲಿ ಬುಕ್ಕಿಂಗ್‌ಗಳನ್ನು ಗಳಿಸಿವೆ. ಇಲ್ಲಿಯವರೆಗೆ 11,000 ಕಾರುಗಳನ್ನು ಕಾಯ್ದಿರಿಸಲಾಗಿದೆ. ಗ್ರಾಹಕರು ಆರ್ಡರ್ ಮಾಡುವ ಪ್ರತಿ 3 'ವಿಕ್ಟೋರಿಸ್' ಎಸ್‌ಯುವಿಗಳಲ್ಲಿ 1 ಸಿಎನ್‌ಜಿ ಮಾಡೆಲ್ ಆಗಿದೆ.
'ಮಾರುತಿ ಸುಜುಕಿ ವಿಕ್ಟೋರಿಸ್' ವಿಶೇಷತೆಗಳೇನು:
ಈ ಎಸ್‌ಯುವಿಯು ಕನಿಷ್ಠ ರೂ.10.50 ಲಕ್ಷ ಹಾಗೂ ಗರಿಷ್ಠ ರೂ.19.99 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಜಡ್ಎಕ್ಸ್ಐ, ಜಡ್ಎಕ್ಸ್ಐ (ಒ), ಜಡ್ಎಕ್ಸ್ಐ ಪ್ಲಸ್ ಮತ್ತು ಜಡ್ಎಕ್ಸ್ಐ (ಒ) ಪ್ಲಸ್ ಎಂಬ 6 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.
ಹೊಸ 'ವಿಕ್ಟೋರಿಸ್' ಉತ್ತಮವಾಗಿ ವಿನ್ಯಾಸ ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಶಾರ್ಕ್ ಫಿನ್ ಆಂಟೆನಾ, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು18 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಸಿಜ್ಲಿಂಗ್ ರೆಡ್, ಮಿಸ್ಟಿಕ್ ಗ್ರೀನ್, ಬ್ಲ್ಯೂಯಿಸ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಹಾಗೂ ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 210 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,600 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.
ಇದು 1.5-ಲೀ. ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಮತ್ತು 1.5-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 21 ರಿಂದ 29 ಕಿ.ಮೀ ವರಗೆ ಮೈಲೇಜ್ ಕೊಡುತ್ತದೆ.
ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 373 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 14.17 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ನೂತನ 'ಮಾರುತಿ ವಿಕ್ಟೋರಿಸ್' ವಿವಿಧ ಅತ್ಯಾಧುನಿಕವಾದ ವೈಶಿಷ್ಟ್ಯಗಳನ್ನು ಹೊಂದಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, ಕಪ್ ಹೋಲ್ಡರ್‌ಗಳು, 64-ಕಲರ್ ಆಂಬಿಯೆಂಟ್ ಲೈಟಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ ಸಾಕಷ್ಟು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ. 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) & 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications








