29 ಕಿ.ಮೀ ಮೈಲೇಜ್.. ಹೊಸ ಮಾರುತಿ ಕಾರಿನ ವಿತರಣೆ ಶುರು, ಸಂಭ್ರಮದಲ್ಲಿ ಗ್ರಾಹಕ.. ಬೆಲೆ ಎಷ್ಟು, ವಿಶೇಷತೆಗಳೇನು?

ಇದೇ ತಿಂಗಳಾರಂಭದಲ್ಲಿ ನೂತನ ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris) ಕಾರನ್ನು ಬಿಡುಗಡೆಗೊಳಿಸಲಾಯಿತು. ಇದೊಂದು ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ. ಆಧುನಿಕ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಗ್ಲೋಬಲ್ ಎನ್‌ಸಿಎಪಿ ಹಾಗೂ ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದುವಲ್ಲಿಯೂ ಯಶಸ್ವಿಯಾಗಿದೆ. ಅರೆನಾ ಡೀಲರ್‌ಶಿಪ್‌ ಮೂಲಕ ಮಾರಾಟ ಮಾಡಲಾಗುತ್ತಿದೆ. ಸದ್ಯ ಮೊದಲ ಬ್ಯಾಚ್ ಗ್ರಾಹಕರಿಗಾಗಿ 'ವಿಕ್ಟೋರಿಸ್'ನ ವಿತರಣೆಯನ್ನು ಶುರು ಮಾಡಲಾಗಿದೆ. ಅದಕ್ಕೆ ಸಂಬಂಧಿಸಿದ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲೂ ಹರಿದಾಡುತ್ತಿವೆ.

ಹೊಚ್ಚ ಹೊಸ 'ಮಾರುತಿ ವಿಕ್ಟೋರಿಸ್' ಕೈಗೆಟುಕುವ ಬೆಲೆಯಲ್ಲಿ ಖರೀದಿದಾರರಿಗೆ ಲಭ್ಯವಿದೆ. ರೂ.10.50 ಲಕ್ಷದಿಂದ ರೂ.19.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ, ಝಡ್ಎಕ್ಸ್ಐ (ಒ), ಝಡ್ಎಕ್ಸ್ಐ ಪ್ಲಸ್ ಹಾಗೂ ಝಡ್ಎಕ್ಸ್ಐ (ಒ) ಪ್ಲಸ್ ಎಂಬ 6 ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.

Maruti Suzuki Victoris Suv Deliveries Began Price Mileage And Features Details

ಈ ಕಾರು ಉತ್ತಮವಾದ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಶಾರ್ಕ್ ಫಿನ್ ಆಂಟೆನಾ, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 18 ಇಂಚಿನ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿದೆ. ಸ್ಪ್ಲೆಂಡಿಡ್ ಸಿಲ್ವರ್, ಸಿಜ್ಲಿಂಗ್ ರೆಡ್, ಮ್ಯಾಗ್ಮಾ ಗ್ರೇ, ಆರ್ಕ್ಟಿಕ್ ವೈಟ್ ಹಾಗೂ ಮಿಸ್ಟಿಕ್ ಗ್ರೀನ್ ಎಂಬ ಆಕರ್ಷಕ ಬಣ್ಣಗಳೊಂದಿಗೂ ಗ್ರಾಹಕರ ಖರೀದಿಗೆ ಲಭ್ಯವಿದೆ.

ಇದು ದೊಡ್ಡ ಗಾತ್ರದ ಕಾರಾಗಿದೆ. 210 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,600 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 1305 ಕೆಜಿ ತೂಕವಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಜಾಸ್ತಿ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 373 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ನೂತನ ಮಾರುತಿ ವಿಕ್ಟೋರಿಸ್ ಅತ್ಯುತ್ತಮವಾಗಿರುವ 3 ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀಟರ್ ಸಾಮರ್ಥ್ಯದ ಮೈಲ್ಡ್ ಹೈಬ್ರಿಡ್ ಪೆಟ್ರೋಲ್, ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ.

ಈ ಕಾರು 45 ಲೀಟರ್‌ನಷ್ಟು ಪೆಟ್ರೋಲ್ ಫ್ಯುಯೆಲ್ ಟ್ಯಾಂಕ್‍ ಮತ್ತು 55 ಲೀಟರ್‌ನಷ್ಟು ಸಿಎನ್‌ಜಿ ಟ್ಯಾಂಕ್‍ನ್ನು ಪಡೆದಿದೆ. 21.06 ರಿಂದ 28.65 ಕಿ.ಮೀ ವರಗೆ ಮೈಲೇಜ್ ನೀಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 14.17 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಇದು ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪನೋರಮಿಕ್ ಸನ್‌ರೂಫ್, ಪ್ಯಾಸೆಂಜರ್ ಹೆಡ್‌ರೆಸ್ಟ್‌ಗಳು, ಕಪ್ ಹೋಲ್ಡರ್‌ಗಳು, 64 ಕಲರ್ ಆಂಬಿಯೆಂಟ್ ಲೈಟಿಂಗ್, ಫೋನ್ ಚಾರ್ಜರ್ ಮತ್ತು ಆಟೋ ಎಸಿಯನ್ನು ಒಳಗೊಂಡಿದೆ.

ಹೊಸ ವಿಕ್ಟೋರಿಸ್ ಪ್ರಯಾಣಿಕರಿಗೂ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಒಟ್ಟಾರೆಯಾಗಿ ನೂತನ 'ಮಾರುತಿ ಸುಜುಕಿ ವಿಕ್ಟೋರಿಸ್' ವಿತರಣೆ ಪ್ರಾರಂಭವಾಗಿರುವುದು ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇದು ಹಲವು ಹೊಸತನಗಳಿಗೂ ಸಾಕ್ಷಿಯಾಗಿದೆ. ನಿಮಗೂ ಈ ಕಾರನ್ನು ಖರೀದಿಸುವ ಮನಸಿದ್ದರೆ, ರೂ.11,000 ಮುಂಗಡ ಹಣವನ್ನು ಪಾವತಿಸುವ ಮೂಲಕ ಸಮೀಪದ ಡೀಲರ್‌ಶಿಪ್‌ ಅಥವಾ ಕಂಪನಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆರ್ಡರ್ ಮಾಡಬಹುದು.

More from DriveSpark

Article Published On: Tuesday, September 30, 2025, 16:44 [IST]
English summary
Maruti suzuki victoris suv deliveries began price mileage and features details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+