29 Km ಮೈಲೇಜ್.. 10.50 ಲಕ್ಷ, ಜನಮನ ಗೆದ್ದ ಹೊಸ ಮಾರುತಿ SUV.. 25,000 ಬುಕ್ಕಿಂಗ್, ಕಾಯುವಿಕೆ ಅವಧಿ ಎಷ್ಟಿದೆ?

ಸೆ.15ರಂದು ಹೊಸ ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris) ಕಾರನ್ನು ಮಾರಾಟಕ್ಕೆ ತರಲಾಗಿತ್ತು. ಇದು ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ. ಉತ್ತಮವಾದ ವಿನ್ಯಾಸ ಮತ್ತು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಅರೆನಾ ಡೀಲರ್‌ಶಿಪ್ ಮೂಲಕ ಗ್ರಾಹಕರ ಖರೀದಿ ಲಭ್ಯವಿದೆ. ಆಸಕ್ತರು ರೂ.11,000 ಮುಂಗಡ ಹಣವನ್ನು ಪಾವತಿವುದರೊಂದಿಗೆ ಕಂಪನಿಯ ಅಧಿಕೃತ ವೆಬ್‌ಸೈಟ್ ಅಥವಾ ಸಮೀಪದ ಶೋರೂಂಗೆ ಭೇಟಿ ನೀಡಿ, ಆರ್ಡರ್ ಮಾಡಬಹುದು.

ಸದ್ಯ 'ಮಾರುತಿ ಸುಜುಕಿ ವಿಕ್ಟೋರಿಸ್' ಎಸ್‌ಯುವಿ ಬುಕ್ಕಿಂಗ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ಈ ಕಾರು ಬಿಡುಗಡೆಗೊಂಡ 2 ವಾರದಲ್ಲಿ 25,000 ಬುಕ್ಕಿಂಗ್‌ಗಳನ್ನು ಪಡೆದುಕೊಂಡಿದೆ. ಗ್ರಾಹಕರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆ, 10 ವಾರಗಳವರೆಗೆ ಕಾಯುವಿಕೆ ಅವಧಿಯನ್ನು ಹೊಂದಿದೆ.

Maruti Suzuki Victoris Suv Get 25 000 Booking 10 Week Waiting Period Details

ಈ ಕಾರು ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ. ಕನಿಷ್ಠ ರೂ.10.50 ಲಕ್ಷ ಹಾಗೂ ಗರಿಷ್ಠ ರೂ.19.99 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ, ಝಡ್ಎಕ್ಸ್ಐ (ಒ), ಝಡ್ಎಕ್ಸ್ಐ ಪ್ಲಸ್ ಹಾಗೂ ಝಡ್ಎಕ್ಸ್ಐ (ಒ) ಪ್ಲಸ್ ಎಂಬ 6 ಅತ್ಯಾಧುನಿಕವಾದ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ. 'ಗ್ರ್ಯಾಂಡ್ ವಿಟಾರಾ' ಕಾರಿನ ಪ್ಲಾಟ್‌ಫಾರ್ಮ್‌ನ್ನು ಆಧರಿಸಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ ಲ್ಯಾಂಪ್‌ಗಳು & 18 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್ ಮತ್ತು ಮ್ಯಾಗ್ಮಾ ಗ್ರೇ ಬಣ್ಣಗಳೊಂದಿಗೂ ಲಭ್ಯವಿದೆ.

Maruti Suzuki Victoris Suv Get 25 000 Booking 10 Week Waiting Period Details

ನೂತನ ವಿಕ್ಟೋರಿಸ್ ದೊಡ್ಡ ಗಾತ್ರದಲ್ಲಿದೆ. 210 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2,600 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1305 ಕೆಜಿ ತೂಕವಿದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 373 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಈ ಕಾರು 3 ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. 21.06 ರಿಂದ 28.65 ಕಿ.ಮೀ ವರಗೆ ಮೈಲೇಜ್ ನೀಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 14.17 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

Maruti Suzuki Victoris Suv Get 25 000 Booking 10 Week Waiting Period Details

ಇದರ ಕ್ಯಾಬಿನ್ ವಿನ್ಯಾಸವು ಅತ್ಯಾಧುನಿಕವಾಗಿದೆ. 45 ಲೀಟರ್‌ನಷ್ಟು ಪೆಟ್ರೋಲ್ ಮತ್ತು 55 ಲೀಟರ್‌ನಷ್ಟು ಸಿಎನ್‌ಜಿ ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ. 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪನೋರಮಿಕ್ ಸನ್‌ರೂಫ್, ಹೆಡ್‌ರೆಸ್ಟ್‌ಗಳು, ಕಪ್ ಹೋಲ್ಡರ್‌ಗಳು, 64 ಕಲರ್ ಆಂಬಿಯೆಂಟ್ ಲೈಟಿಂಗ್ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಈ ಕಾರು ಪ್ರಯಾಣಿಕರ ರಕ್ಷಣೆಗಾಗಿ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಗ್ಲೋಬಲ್ ಎನ್‌ಸಿಎಪಿ & ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡಿವೆ. 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಒಟ್ಟಾರೆಯಾಗಿ, ಮಾರುತಿ ಸುಜುಕಿ ವಿಕ್ಟೋರಿಸ್ ಭಾರೀ ಸಂಖ್ಯೆಯಲ್ಲಿ ಬುಕ್ಕಿಂಗ್ ಪಡೆದುಕೊಳ್ಳುತ್ತಿರುವುದು ಉತ್ತಮವಾದ ಬೆಳವಣಿಗೆಯಾಗಿದೆ. ಇದು ಅತ್ಯಾಕರ್ಷಕವಾದ ವಿನ್ಯಾಸ ಮತ್ತು ವಿವಿಧ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಸಿಗುತ್ತದೆ. ದೀಪಾವಳಿ ಹಬ್ಬದ ವೇಳೆಗೆ ಮತ್ತಷ್ಟು ಸಂಖ್ಯೆಯಲ್ಲಿ ಖರೀದಿದಾರರು ಆರ್ಡರ್ ಮಾಡುವ ನಿರೀಕ್ಷೆಯಿದೆ.

More from DriveSpark

Article Published On: Friday, October 3, 2025, 8:30 [IST]
English summary
Maruti suzuki victoris suv get 25000 booking 10 week waiting period details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+