Maruti Suzuki: 29 ಕಿ.ಮೀ ಮೈಲೇಜ್.. 5-ಸೀಟರ್, ಹೊಸ ಮಾರುತಿ ಕಾರು ಬಿಡುಗಡೆ.. ಬೆಲೆ ಎಷ್ಟು, ವಿಶೇಷತೆಗಳೇನು?
ಬಹುನಿರೀಕ್ಷಿತ ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris) ಕಾರು ಸೋಮವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಇದೊಂದು ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ. ಅರೆನಾ ಡೀಲರ್‌ಶಿಪ್ ಮೂಲಕ ಗ್ರಾಹಕರ ಖರೀದಿ ಲಭ್ಯವಿದೆ. ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸ ಹಾಗೂ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಕೈಗೆಟುಕುವ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ. ಬನ್ನಿ, ನೂತನ 'ವಿಕ್ಟೋರಿಸ್'ನ ಬೆಲೆ, ಕಾರ್ಯಕ್ಷಮತೆ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಹೊಚ್ಚ ಹೊಸ 'ಮಾರುತಿ ಸುಜುಕಿ ವಿಕ್ಟೋರಿಸ್' ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿದೆ. ಕನಿಷ್ಠ ರೂ.10.50 ಲಕ್ಷ ಹಾಗೂ ಗರಿಷ್ಠ ರೂ.19.99 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. ಈಗಾಗಲೇ ಬುಕ್ಕಿಂಗ್ ಶುರುವಾಗಿದೆ. ಆಸಕ್ತರು ರೂ.11,000 ಮುಂಗಡ ಹಣ ಪಾವತಿಸುವುರೊಂದಿಗೆ ಆರ್ಡರ್ ಮಾಡಬಹುದು. ಸೆಪ್ಟೆಂಬರ್ 22ರಿಂದ ವಿತರಣೆಗಳು ಪ್ರಾರಂಭವಾಗಲಿದೆ ಎಂದು ವರದಿಯಾಗಿದೆ.

ಈ ಕಾರು ಎಲ್ಎಕ್ಸ್ಐ, ವಿಎಕ್ಸ್ಐ, ಜಡ್ಎಕ್ಸ್ಐ, ಜಡ್ಎಕ್ಸ್ಐ (ಒ), ಜಡ್ಎಕ್ಸ್ಐ ಪ್ಲಸ್ & ಜಡ್ಎಕ್ಸ್ಐ (ಒ) ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ. ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ಶಾರ್ಪ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಸ್ಲಿಮ್ ಪಿಕ್ಸೆಲ್ ಟೈಪ್ ಎಲ್ಇಡಿ ಡಿಆರ್‌ಎಲ್‌ಗಳು, ಸ್ಕ್ವೇರ್ಡ್-ಆಫ್ ವೀಲ್ ಆರ್ಚ್‌ಗಳು, ಶಾರ್ಕ್-ಫಿನ್ ಆಂಟೆನಾ, ಕನೆಕ್ಟ್ಡ್ ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು 18 ಇಂಚಿನ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿದೆ.
ಇದು ಸ್ಪ್ಲೆಂಡಿಡ್ ಸಿಲ್ವರ್, ಎಟರ್ನಲ್ ಬ್ಲೂ, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ, ಆರ್ಕ್ಟಿಕ್ ವೈಟ್ & ಮಿಸ್ಟಿಕ್ ಗ್ರೀನ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 4,360 ಎಂಎಂ ಉದ್ದ, 1,655 ಎಂಎಂ ಅಗಲ ಹಾಗೂ 1,795 ಎಂಎಂ ಎತ್ತರ ಕೂಡ ಇದೆ. 210 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,600 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.
| ಪವರ್‌ಟ್ರೇನ್ | ಬೆಲೆ |
| ಮೈಲ್ಡ್ ಹೈಬ್ರಿಡ್ | ರೂ.10.50 ಲಕ್ಷದಿಂದ ರೂ.17.77 ಲಕ್ಷ |
| ಸಿಎನ್‌ಜಿ | ಸಿಎನ್‌ಜಿ ರೂ.14.57 ಲಕ್ಷದಿಂದ ರೂ.18.64 ಲಕ್ಷ |
| ಸ್ಟ್ರಾಂಗ್ ಹೈಬ್ರಿಡ್ | ರೂ.16.38 ಲಕ್ಷದಿಂದ ರೂ.19.99 ಲಕ್ಷ |
ನೂತನ ವಿಕ್ಟೋರಿಸ್ ಎಸ್‌ಯುವಿ ಬಲಿಷ್ಠವಾದ 3 ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಎಂಜಿನ್, 103 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 137 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಇನ್ನೊಂದು 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್, 116 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 141 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ.
ಮತ್ತೊಂದು 1.5-ಲೀಟರ್ ಸಿಎನ್‌ಜಿ ಎಂಜಿನ್, 88 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 121 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಮಾತ್ರ ಪಡೆದಿದೆ. ಈ ಕಾರು ರೂಪಾಂತರಗಳಿಗೆ ತಕ್ಕಂತೆ 19 ರಿಂದ 28.65 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.
ನೂತನ ವಿಕ್ಟೋರಿಸ್ 5 ಆಸನಗಳನ್ನು ಹೊಂದಿದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 373 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 10 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, 64 ಕಲರ್ ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಇದು ಸುರಕ್ಷತೆಗೂ ಹೆಸರುವಾಗಿಯಾಗಿದೆ. ಗ್ಲೋಬಲ್ ಎನ್‌ಸಿಎಪಿ ಹಾಗೂ ಭಾರತ್ ಎನ್‌ಸಿಎಪಿಯಿಂದ 5 ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications








