ತುಂಬಿವೆ ಶೋರೂಂ.. 29 Km ಮೈಲೇಜ್, ಹೊಸ ಮಾರುತಿ ಕಾರಿಗೆ ಫುಲ್ ಡಿಮ್ಯಾಂಡ್.. ಭಾರೀ ಸಂಖ್ಯೆಯಲ್ಲಿ ಮಾರಾಟ!
ಇತ್ತೀಚೆಗೆ ನೂತನ ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris) ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಲಾಗಿತ್ತು. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿದೆ. ಕೈಗೆಟುಕುವ ಬೆಲೆಯಲ್ಲಿ ಸಿಗುತ್ತದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಕಾರು ಮಾರಾಟಕ್ಕೆ ಬಂದು 1 ತಿಂಗಳು ಕಳೆಯುವ ಮೊದಲೇ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಇದೇ ಸೆಪ್ಟೆಂಬರ್‌ನಲ್ಲಿ ಒಟ್ಟು 4,261 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ.
ಮಾರುತಿ ಸುಜುಕಿ ವಿಕ್ಟೋರಿಸ್ ವಿಶೇಷತೆಗಳೇನು:
ಇದೊಂದು ಕಾಂಪ್ಯಾಕ್ಟ್ ಎಸ್‌ಯುವಿಯಾಗಿದ್ದು, ಅರೆನಾ ಡೀಲರ್‌ಶಿಪ್ ಮೂಲಕ ಮಾರಾಟ ಮಾಡಲಾಗುತ್ತದೆ. ಕನಿಷ್ಠ ರೂ.10.50 ಲಕ್ಷ ಹಾಗೂ ಗರಿಷ್ಠ ರೂ.9.99 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದ್ದು, ಎಲ್ಲ ವರ್ಗದ ಗ್ರಾಹಕರಿಗೂ ಸುಲಭವಾಗಿ ಕೈಗೆಟುಕುತ್ತದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ, ಝಡ್ಎಕ್ಸ್ಐ (ಒ), ಝಡ್ಎಕ್ಸ್ಐ ಪ್ಲಸ್ ಹಾಗೂ ಝಡ್ಎಕ್ಸ್ಐ (ಒ) ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ಗ್ರ್ಯಾಂಡ್ ವಿಟಾರಾ' ಎಸ್‌ಯುವಿ ಪ್ಲಾಟ್‌ಫಾರ್ಮ್‌ನ್ನು ಆಧರಿಸಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಶಾರ್ಕ್ ಫಿನ್ ಆಂಟೆನಾ, ಕನೆಕ್ಟ್ಡ್ ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 18 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಸ್ಪ್ಲೆಂಡಿಡ್ ಸಿಲ್ವರ್, ಎಟರ್ನಲ್ ಬ್ಲೂ, ಸಿಜ್ಲಿಂಗ್ ರೆಡ್, ಮ್ಯಾಗ್ಮಾ ಗ್ರೇ ಮತ್ತು ಮಿಸ್ಟಿಕ್ ಗ್ರೀನ್ ಸೇರಿದಂತೆ ವಿವಿಧ ಬಣ್ಣಗಳನ್ನು ಪಡೆದಿದೆ.
ನೂತನ 'ವಿಕ್ಟೋರಿಸ್' ದೊಡ್ಡ ಗಾತ್ರದಲ್ಲಿದೆ. 4,360 ಮಿ.ಮೀ ಉದ್ದ, 1,655 ಮಿ.ಮೀ ಅಗಲ ಹಾಗೂ 1,795 ಮಿ.ಮೀ ಎತ್ತರವಿದೆ. 210 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,600 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1,305 ಕೆಜಿ ತೂಕವಿದೆ.
ಇದು ಬಲಿಷ್ಠವಾದ 3 ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ.
ಈ ಕಾರು ಅತ್ಯುತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. 21 ರಿಂದ 28.65 ಕಿ.ಮೀ ವರಗೆ ಮೈಲೇಜ್ ಕೊಡುತ್ತದೆ. 45 ಲೀಟರ್‌ನಷ್ಟು ಪೆಟ್ರೋಲ್ ಟ್ಯಾಂಕ್ ಮತ್ತು 55 ಲೀಟರ್‌ನಷ್ಟು ಸಿಎನ್‌ಜಿ ಟ್ಯಾಂಕ್‍ನ್ನು ಹೊಂದಿದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 14.17 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಹೊಸ 'ವಿಕ್ಟೋರಿಸ್' ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ ಸ್ಟ್ಯಾಂಡರ್ಡ್ ಆಗಿ 373 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಬಹುಮುಖ್ಯವಾಗಿ 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪನೋರಮಿಕ್ ಸನ್‌ರೂಫ್, 64 ಕಲರ್ ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಆಟೋ ಎಸಿಯನ್ನು ತನ್ನದಾಗಿಸಿಕೊಂಡಿದೆ.
ಇದು ಸುರಕ್ಷತೆಗೂ ಹೆಸರುವಾಗಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ ಗ್ಲೋಬಲ್ ಎನ್‌ಸಿಎಪಿ & ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾ ಸೇರಿದಂತೆ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications








