ಬಡವರ ನೆಚ್ಚಿನ ಕಾರಿದು.. 5 ಲಕ್ಷ, 34 ಕಿ.ಮೀ ಮೈಲೇಜ್.. ಆದ್ರೂ ಖರೀದಿಸುತ್ತಿಲ್ಲ, ಕಾರಣವೇನು?
ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಜಗಮೆಚ್ಚಿದ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಆದರೂ ಈ ಆಗಸ್ಟ್ ತಿಂಗಳಲ್ಲಿ 'ವ್ಯಾಗನ್ಆರ್' ಮಾರಾಟ ಸಂಖ್ಯೆ ಇಳಿಮುಖವಾಗಿದೆ. ಒಟ್ಟು 14,552 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 16,450 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -11.54% ಕುಸಿತವಾಗಿದೆ.
ನೂತನ ಮಾರುತಿ ಸುಜುಕಿ ವ್ಯಾಗನ್ಆರ್ ಮಾರಾಟ ಸಂಖ್ಯೆ ಇಳಿಕೆಯಾಗಲು ಹಲವು ಕಾರಣಗಳನ್ನು ಪಟ್ಟಿ ಮಾಡಬಹುದು. ಬಹುಮುಖ್ಯವಾಗಿ ಸೆಪ್ಟೆಂಬರ್‌ನಿಂದ ಕಾರುಗಳ ಖರೀದಿ ಮೇಲೆ ವಿಧಿಸುವ ಜಿಎಸ್‌ಟಿ ಪ್ರಮಾಣವು ಕಡಿಮೆಯಾಗಲಿದೆ ಎಂಬ ಸುಳಿವು ಆಗಸ್ಟ್‌ನಲ್ಲೇ ಖರೀದಿದಾರರಿಗೆ ಲಭ್ಯವಾಗಿತ್ತು. ಇದರೊಂದಿಗೆ ಬಹುತೇಕ ಗ್ರಾಹಕರು ಎಸ್‌ಯುವಿಗಳನ್ನು ಕೊಳ್ಳುವತ್ತ ಆಸಕ್ತಿ ತೋರಿಸುತ್ತಿದ್ದಾರೆ. ಹೀಗಾಗಿ, 'ವ್ಯಾಗನ್ಆರ್ ಮಾರಾಟದಲ್ಲಿ ಕುಂಠಿತವಾಗಿದೆ ಎಂದು ಹೇಳಲಾಗಿದೆ.

ಮಾರುತಿ ವ್ಯಾಗನ್ಆರ್ ವಿಶೇಷತೆಗಳೇನು:
ಸದ್ಯ ಈ ಹ್ಯಾಚ್‌ಬ್ಯಾಕ್ ಕನಿಷ್ಠ ರೂ. 5.79 ಲಕ್ಷ ಹಾಗೂ ಗರಿಷ್ಠ ರೂ.7.62 (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. ಕೇಂದ್ರ ಸರ್ಕಾರವು ಹೊಸ ಕಾರುಗಳಿಗೆ ಹಾಕುತ್ತಿದ್ದ ಜಿಎಸ್‌ಟಿಯನ್ನು ಕಡಿತಗೊಳಿಸಿದೆ. ನೂತನ ತೆರಿಗೆ ದರಗಳು ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿದೆ. ಆ ಬಳಿಕ 'ವ್ಯಾಗನ್ಆರ್' ಬೆಲೆಯು ಮತ್ತಷ್ಟು ಅಗ್ಗವಾಗಲಿದೆ.
ಈ ಕಾರು ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಹಾಗೂ ಝಡ್ಎಕ್ಸ್ಐ ಪ್ಲಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಹ್ಯಾಲೊಜೆನ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು 15 ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಮೆಟಾಲಿಕ್ ಮ್ಯಾಗ್ಮಾ ಗ್ರೇ, ಮೆಟಾಲಿಕ್ ಸಿಲ್ಕಿ ಸಿಲ್ವರ್, ಸುಪೀರಿಯರ್ ವೈಟ್, ಪರ್ಲ್ ಮೆಟಾಲಿಕ್ ಗ್ಯಾಲಂಟ್ ರೆಡ್, ಪರ್ಲ್ ಬ್ಲೂಯಿಶ್ ಬ್ಲ್ಯಾಕ್ ಮತ್ತು ಮಿಡ್‌ನೈಟ್ ಬ್ಲ್ಯಾಕ್ ಎಂಬ ಬಣ್ಣಗಳನ್ನು ಹೊಂದಿದೆ.

ನೂತನ ವ್ಯಾಗನ್ಆರ್ ಸ್ವಲ್ಪ ಮಟ್ಟಿಗೆ ದೊಡ್ಡ ಗಾತ್ರದಲ್ಲಿದೆ. 3665 ಎಂಎಂ ಉದ್ದ, 1620 ಎಂಎಂ ಅಗಲ ಮತ್ತು 1675 ಎಂಎಂ ಎತ್ತರವಿದೆ. 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2435 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 840 ಕೆಜಿ ತೂಕವಿದೆ.
ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀಟರ್ ಪೆಟ್ರೋಲ್/ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 23 ರಿಂದ 34 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 32 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.

ಈ ಕಾರು 140 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 12.4 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್ ಫೋನ್ ಕಂಟ್ರೋಲ್, ಕೀಲೆಸ್ ಎಂಟ್ರಿ, ಪವರ್ ವಿಂಡೋಗಳು ಟಿಲ್ಟ್ ಅಡ್ಜಸ್ಟೇಬಲ್ ಸ್ಟೇರಿಂಗ್ ವೀಲ್, ಐಡಲ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್ ಹಾಗೂ ಸ್ಟೀರಿಂಗ್ ಮೌಂಟೆಡ್ ಆಡಿಯೋದಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಹೊಸ ವ್ಯಾಗನ್ಆರ್ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್ ಪಾರ್ಕಿಂಗ್ ಸೆನ್ಸರ್ಸ್, ಸೀಟ್ ಬೆಲ್ಟ್ ವಾರ್ನಿಂಗ್, ಹಿಲ್ ಹೋಲ್ಡ್ ಅಸಿಸ್ಟ್, ಚೈಲ್ಡ್ ಲಾಕ್, ಓವರ್‌ಸ್ಪೀಡ್ ವಾರ್ನಿಂಗ್ ಮತ್ತು ಸ್ಪೀಡ್ ಸೆನ್ಸಿಂಗ್ ಡೋರ್ ಲಾಕ್ ಸೇರಿದಂತೆ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications








