5 ಲಕ್ಷದ ಈ Maruti Suzuki ಕಾರಂದ್ರೆ ಗ್ರಾಹಕರಿಗೆ ಬಲು ಪ್ರೀತಿ.. ಆದ್ರೂ ಖರೀದಿಸಲು ಮನಸಿಲ್ಲ, ಕಾರಣವೇನು?
ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದೆ. ಇದು ಹೆಚ್ಚು ಆಕರ್ಷಕವಾಗಿದ್ದು, ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಶ್ರೀಮಂತರಿಂದ ಹಿಡಿದು ಎಲ್ಲ ವರ್ಗದ ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಆದರೂ ತಿಂಗಳಿಂದ ತಿಂಗಳಿಗೆ 'ವ್ಯಾಗನ್ಆರ್' ಮಾರಾಟ ಸಂಖ್ಯೆ ಮಾತ್ರ ಕುಸಿತವಾಗುತ್ತಲೇ ಇದೆ. ಅದಕ್ಕೆ ಈ ಏಪ್ರಿಲ್ ಸಹ ಹೊರತಾಗಿಲ್ಲ. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ಕಳೆದ ತಿಂಗಳು (ಏಪ್ರಿಲ್-2025) ಮಾರುತಿ ಸುಜುಕಿ ಕಂಪನಿಯು ಸರಿ ಸುಮಾರು 13,413 ಯುನಿಟ್ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್‌ಗಳನ್ನು ಮಾರಾಟಗೊಳಿಸಿದೆ. ಅದೇ ಮಾರ್ಚ್ ತಿಂಗಳಲ್ಲಿ ಮಾರಲ್ಪಟ್ಟ 17,175 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣವು ಸಾಕಷ್ಟು ಇಳಿಕೆಯಾಗಿದೆ. ಆದರೂ ಏಪ್ರಿಲ್‌ನಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿಯಲ್ಲಿ ಇದೇ 'ವ್ಯಾಗನ್ಆರ್' 9ನೇ ಸ್ಥಾನದಲ್ಲಿದೆ.

ಈ ವರ್ಷದ ಮೊದಲೆರಡು ತಿಂಗಳು ಕೂಡ ಮಾರುತಿ ಸುಜುಕಿ ವ್ಯಾಗನ್ಆರ್ ಮಾರಾಟದಲ್ಲಿ ಹಾವು - ಏಣಿ ಆಟ ಮುಂದುವರಿದಿತ್ತು. ಫೆಬ್ರವರಿಯಲ್ಲಿ 19,879 ಯುನಿಟ್ ಹಾಗೂ ಜನವರಿಯಲ್ಲಿ 24,078 ಯುನಿಟ್‌ಗಳನ್ನು ಮಾರಲಾಗಿತ್ತು. ಹಾಗೆಯೇ 2024ರ ಕೊನೆಯ ಎರಡು ತಿಂಗಳಲ್ಲೂ ವ್ಯಾಗನ್ಆರ್ ಮಾರಾಟದಲ್ಲಿ ಏಳುಬೀಳನ್ನು ಕಾಣಲಾಗಿತ್ತು. ಡಿಸೆಂಬರ್‌ನಲ್ಲಿ 17,303 ಯುನಿಟ್ ಮತ್ತು ನವೆಂಬರ್‌ನಲ್ಲಿ 13,982 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು.
ಮಾರುತಿ ಸುಜುಕಿ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್ ಮಾರಾಟ ಸಂಖ್ಯೆ ಕುಸಿತವಾಗುತ್ತಿರುವ ಬಗ್ಗೆ ಕಂಪನಿಯು ಯಾವುದೇ ನಿಖರವಾದ ಕಾರಣವನ್ನು ಬಹಿರಂಗಪಡಿಸಿಲ್ಲ. ಆದರೂ ಈ ಕಾರಿನ ಆಸುಪಾಸು ಬೆಲೆಗೆ ನಾನಾ ವೈಶಿಷ್ಟ್ಯಗಳನ್ನು ಹೊಂದಿರುವ ಹಲವು ಎಸ್‌ಯುವಿಗಳು ಖರೀದಿ ಲಭ್ಯವಿವೆ. ಇದರಿಂದಾಗಿಯೇ ವ್ಯಾಗನ್ಆರ್ ಮಾರಾಟದಲ್ಲಿ ಇಳಿಮುಖವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಮಾರುತಿ ಸುಜುಕಿ ವ್ಯಾಗನ್ಆರ್ ವಿಶೇಷತೆಗಳೇನು..
ಈ ಹ್ಯಾಚ್‌ಬ್ಯಾಕ್ ಅತ್ಯಂತ ಬಜೆಟ್ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ಮಧ್ಯಮ ವರ್ಗದ ಗ್ರಾಹಕರ ನೆಚ್ಚಿನ ಕಾರಾಗಿ ಹೊರಹೊಮ್ಮಿದೆ. ಇದು ಕನಿಷ್ಠ ರೂ.5.78 ಲಕ್ಷ ಮತ್ತು ಗರಿಷ್ಠ ರೂ.7.61 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 312 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ನೂತನ ವ್ಯಾಗನ್ಆರ್ ಬೆಲೆಗೆ ತಕ್ಕಂತೆ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದ್ದು, ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 23.56 ರಿಂದ 34.05 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. ಈ ಹ್ಯಾಚ್‌ಬ್ಯಾಕ್ ಹೊರಭಾಗದಲ್ಲೂ ಆಕರ್ಷಕವಾದ ವಿನ್ಯಾಸವನ್ನು ಪಡೆದಿದ್ದು, ಪೂಲ್‌ಸೈಡ್ ಬ್ಲೂ, ಸುಪೀರಿಯರ್ ವೈಟ್, ಸಿಲ್ಕಿ ಸಿಲ್ವರ್ ಮತ್ತು ಮ್ಯಾಗ್ಮಾ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಹೊಸ ವ್ಯಾಗನ್ಆರ್ ಕಾರು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (7-ಇಂಚು) ಮತ್ತು ಸ್ಟೀರಿಂಗ್ ಮೌಂಟೆಡ್ ಆಡಿಯೋ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications