ಬಡವರಿಗೆ ಪರ್ಫೆಕ್ಟ್ ಕಾರಿದು.. 34 ಕಿ.ಮೀ ಮೈಲೇಜ್, 4.99 ಲಕ್ಷ.. ಭಾರೀ ಸಂಖ್ಯೆಯಲ್ಲಿ ಮಾರಾಟ!
ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ದೇಶೀಯವಾಗಿ ಡಿಸೆಂಬರ್ 18, 1999ರಲ್ಲಿ ಮೊದಲ ಬಾರಿಗೆ ಈ ಕಾರನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿತ್ತು. ಅಲ್ಲಿಂದ ಇಲ್ಲಿಂದವರೆಗೂ ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಒಟ್ಟು 34 ಲಕ್ಷ ಯುನಿಟ್‌ಗಳನ್ನು ವಿತರಣೆ ಮಾಡಲಾಗಿದೆ.
ವಿಶೇಷವಾಗಿ 1999 ರಿಂದ 2009 ರವರೆಗೆ ಮೊದಲ ತಲೆಮಾರಿನ 'ಮಾರುತಿ ವ್ಯಾಗನ್ಆರ್' ಹ್ಯಾಚ್‌ಬ್ಯಾಕ್‌ಗಳನ್ನು ಮಾರಾಟ ಮಾಡಲಾಗಿತ್ತು. 2010 ರಿಂದ 2018 ರವರೆಗೆ ಎರಡನೇ ತಲೆಮಾರಿನ ಕಾರುಗಳನ್ನು ಮಾರಾಟ ಮಾಡಿದ್ದರೆ, 2019 ರವರಿಗೆ ಈವರೆಗೆ ಮೂರನೇ ತಲೆಮಾರಿನ ಹ್ಯಾಚ್‌ಬ್ಯಾಕ್‌ಗಳನ್ನು ಮಾರಲಾಗುತ್ತಿದೆ.

ನೂತನ 'ಮಾರುತಿ ವ್ಯಾಗನ್ಆರ್' ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ರೂ.4.99 ಲಕ್ಷದಿಂದ ರೂ.6.95 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ದರವನ್ನು ಪಡೆದಿದೆ. ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.
ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ಪ್ರತಿಯೊಬ್ಬರನ್ನು ತನ್ನತ್ತ ಸೆಳೆಯುವಂತಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು & ಅಲಾಯ್ ವೀಲ್‌ಗಳನ್ನು ತನ್ನದಾಗಿಸಿಕೊಂಡಿದೆ. ಸಾಲಿಡ್ ವೈಟ್, ಪೂಲ್‌ಸೈಡ್ ಬ್ಲೂ, ಸಿಲ್ಕಿ ಸಿಲ್ವರ್ ಮತ್ತು ಮಿಡ್‌ನೈಟ್ ಬ್ಲ್ಯಾಕ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ. 165 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,435 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ಇದು 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 341 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.
ಹೊಸ 'ಮಾರುತಿ ಸುಜುಕಿ ವ್ಯಾಗನ್ಆರ್' 3 ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಪೆಟ್ರೋಲ್+ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

ಈ ಕಾರು ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. 23 ರಿಂದ 34 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 32 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. 140 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 12.73 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಇದು ಹತ್ತಾರು ಅತ್ಯಾಕರ್ಷಕವಾದ ಹೊಂದಿದೆ. ಬಹುಮುಖ್ಯವಾಗಿ 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಮ್ಯೂಸಿಕ್ ಸಿಸ್ಟಮ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಪವರ್ ವಿಂಡೋಗಳು, ಐಡಲ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಕಂಟೋಲ್ ಹಾಗೂ ಕೀಲೆಸ್ ಎಂಟ್ರಿಗಳನ್ನು ಒಳಗೊಂಡಿದೆ.
ನೂತನ 'ಮಾರುತಿ ಸುಜುಕಿ ವ್ಯಾಗನ್ಆರ್' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಸೀಟ್ ಬೆಲ್ಟ್ ವಾರ್ನಿಂಗ್ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ. ಇದಕ್ಕೆ ಟಾಟಾ ಟಿಯಾಗೊ ಹಾಗೂ ರೆನಾಲ್ಟ್ ಕ್ವಿಡ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.


Click it and Unblock the Notifications








