5 ಲಕ್ಷ.. 34 Km ಮೈಲೇಜ್, ಡಾಕ್ಟರ್, ಎಂಜಿನಿಯರ್‌ಗಳಿಗೂ ಈ ಕಾರು ಇಷ್ಟ.. ಆದರೀಗ ಬೆಲೆ ಏರಿಕೆ ಶಾಕ್!
ಭಾರತದ ಪ್ರಖ್ಯಾತ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ ಇಂಡಿಯಾ (Maruti Suzuki India) ಮನೆ ಮಾತಾಗಿದೆ. ದೇಶೀಯವಾಗಿ ಅರೆನಾ ಮತ್ತು ನೆಕ್ಸಾ ಡೀಲರ್‌ಶಿಪ್ ಮೂಲಕ ಹತ್ತಾರು ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ತಯಾರಿಕಾ ವೆಚ್ಚಗಳು ಹೆಚ್ಚಾದ ಹಿನ್ನೆಲೆ, ಮಾರುತಿ ಸುಜುಕಿಯು ನಾಳೆಯಿಂದ (ಫೆ.1) ಎಲ್ಲ ಕಾರುಗಳ ದರವನ್ನು ರೂ.1,500 ರಿಂದ ರೂ.32,500 ವರೆಗೆ ಏರಿಕೆ ಮಾಡುವುದಾಗಿ ಘೋಷಣೆ ಮಾಡಿದೆ. ಈ ಬೆಲೆ ಏರಿಕೆ ಬಿಸಿ ಡಾಕ್ಟರ್ ಹಾಗೂ ಎಂಜಿನಿಯರ್‌ಗಳು ಸೇರಿದಂತೆ ಮಧ್ಯಮ ವರ್ಗದ ಜನರ ನೆಚ್ಚಿನ 'ವ್ಯಾಗನ್ಆರ್' ಹ್ಯಾಚ್‌ಬ್ಯಾಕ್‌ಗೂ ತಟ್ಟಿದೆ.
ನೂತನ ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಕಾರಿನ ಬೆಲೆ ರೂ.13,000 ವರೆಗೆ ಏರಿಕೆಯಾಗಿದೆ. ಸದ್ಯ ಈ ಹ್ಯಾಚ್‌ಬ್ಯಾಕ್ ಕನಿಷ್ಠ ರೂ.5.54 ಲಕ್ಷ ಮತ್ತು ಗರಿಷ್ಠ ರೂ.7.33 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಎಲ್ಎಕ್ಸ್ಐ, ವಿಎಕ್ಸ್ಐ ಮತ್ತು ಝಡ್ಎಕ್ಸ್ಐ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.

ಈ ಕಾರು, ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಗ್ಯಾಲಂಟ್ ರೆಡ್, ಪೂಲ್‌ಸೈಡ್ ಬ್ಲೂ, ಸುಪೀರಿಯರ್ ವೈಟ್, ಸಿಲ್ಕಿ ಸಿಲ್ವರ್ ಮತ್ತು ಮ್ಯಾಗ್ಮಾ ಗ್ರೇ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 341 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ.
ಹೊಸ ಮಾರುತಿ ಸುಜುಕಿ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್, ಮೂರು ಪವರ್‌ಟ್ರೇನ್‌ನೊಂದಿಗೆ ಸಿಗುತ್ತದೆ. ಇದರ ಸಾಮಾನ್ಯ 1-ಲೀಟರ್ ಪೆಟ್ರೋಲ್ ಎಂಜಿನ್, 67 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 89 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.2-ಲೀಟರ್ ಪೆಟ್ರೋಲ್ ಎಂಜಿನ್, 90 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ನೂತನ ಕಾರಿನ 1-ಲೀಟರ್ ಸಿಎನ್‌ಜಿ ಎಂಜಿನ್, 57 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 89 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಈ ಹ್ಯಾಚ್‌ಬ್ಯಾಕ್ ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಜೊತೆಗೆ ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 23.56 ರಿಂದ 34.05 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.
ಈ ಕಾರು 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಡಿಸ್‌ಪ್ಲೇ, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಆಡಿಯೋ ಮತ್ತು ಫೋನ್ ಕಂಟ್ರೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.

ಇನ್ನು, ಆಲ್ಟೊ ಕೆ10 ರೂ.19,500, ಸೆಲೆರಿಯೊ ರೂ.32,500, ಬ್ರೆಝಾ ರೂ.20,000, ಎರ್ಟಿಗಾ ರೂ.15,000, ಗ್ರ್ಯಾಂಡ್ ವಿಟಾರಾ ರೂ.25,000, ಎಸ್-ಪ್ರೆಸ್ಸೊ ರೂ.5,000, ಸ್ವಿಫ್ಟ್ 5,000, ಡಿಜೈರ್ ರೂ.10,500, ಇಕೋ ವ್ಯಾನ್ ರೂ.12,000, ಇಗ್ನಿಸ್ ರೂ.6,000, ಬಲೆನೊ ರೂ.9,000, ಸಿಯಾಜ್ ರೂ.1,500, ಎಕ್ಸ್‌ಎಲ್6 ರೂ.10,000, ಫ್ರಾಂಕ್ಸ್ ರೂ.5,500, ಇನ್ವಿಕ್ಟೋ ರೂ.30,000 ಹಾಗೂ ಜಿಮ್ನಿ ಮಾಡೆಲ್‌ಗಳು ರೂ.1,500 ವರೆಗೆ ಬೆಲೆ ಏರಿಕೆಯನ್ನು ಪಡೆದುಕೊಂಡಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications