34 Km ಮೈಲೇಜ್, 5 ಲಕ್ಷ.. ಡಾಕ್ಟರ್, ಎಂಜಿನಿಯರ್‌ಗಳಿಗೂ ಇಷ್ಟ ಈ ಮಾರುತಿ ಕಾರು.. ಭಾರೀ ಸಂಖ್ಯೆಯಲ್ಲಿ ಮಾರಾಟ!

ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಡಾಕ್ಟರ್ ಹಾಗೂ ಎಂಜಿನಿಯರ್‌ಗಳು ಸೇರಿದಂತೆ ಎಲ್ಲ ವರ್ಗದ ಜನರು ಇಷ್ಟಪಟ್ಟು ಖರೀದಿ ಮಾಡುತ್ತಾರೆ. ಇತ್ತೀಚೆಗೆ ಎಲ್ಲ ಕಾರು ತಯಾರಕ ಕಂಪನಿಗಳು ಫೆಬ್ರವರಿ ತಿಂಗಳ ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿವೆ. ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ಫ್ರಾಂಕ್ಸ್ ಬಳಿಕ, ವ್ಯಾಗನ್ಆರ್ ಎರಡನೇ ಸ್ಥಾನದಲ್ಲಿದೆ.

ಕಳೆದ ತಿಂಗಳು (ಫೆಬ್ರವರಿ - 2025) ಮಾರುತಿ ಸುಜುಕಿ ಕಂಪನಿಯು ಬರೋಬ್ಬರಿ 19,879 ಯುನಿಟ್ ವ್ಯಾಗನ್ಆರ್ ಕಾರುಗಳನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ ಮಾರಾಟಗೊಳಿಸಿದ 19,412 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 2% ಬೆಳವಣಿಗೆಯಾಗಿದೆ. ಜನವರಿಯಲ್ಲಿಯೂ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್‌ಗಳು ಅತ್ಯಧಿಕ ಸಂಖ್ಯೆಯಲ್ಲಿ ಅಂದರೆ 24,078 ಯುನಿಟ್‌ಗಳು ಮಾರಾಟಗೊಂಡಿವೆ.

Maruti Suzuki WagonR February 2025 Sales Report This Car Also Likes Doctor And Engineers Details

2024ರಲ್ಲಿಯೂ ಮಾರುತಿ ಸುಜುಕಿ ವ್ಯಾಗನ್ಆರ್ ಕಾರುಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡಿದ್ದವು. ಡಿಸೆಂಬರ್‌ನಲ್ಲಿ 17,303 ಯುನಿಟ್, ನವೆಂಬರ್‌ನಲ್ಲಿ 13,982 ಯುನಿಟ್, ಅಕ್ಟೋಬರ್‌ನಲ್ಲಿ 13,922 ಮತ್ತು ಸೆಪ್ಟೆಂಬರ್‌ನಲ್ಲಿ 13,339 ಯುನಿಟ್‌ಗಳು ಮಾರಾಟವಾಗಿದ್ದವು. ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್, ರೂ.5.64 ಲಕ್ಷದಿಂದ ರೂ.7.47 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.

ಈ ಕಾರು ಎಲ್ಎಕ್ಸ್ಐ, ವಿಎಕ್ಸ್ಐ ಮತ್ತು ಝಡ್ಎಕ್ಸ್ಐ ಸೇರಿದಂತೆ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಜೊತೆಗೆ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ಗ್ಯಾಲಂಟ್ ರೆಡ್, ಪೂಲ್‌ಸೈಡ್ ಬ್ಲೂ, ಸುಪೀರಿಯರ್ ವೈಟ್, ಸಿಲ್ಕಿ ಸಿಲ್ವರ್ ಮತ್ತು ಮ್ಯಾಗ್ಮಾ ಗ್ರೇ ಒಳಗೊಂಡಂತೆ ಹಲವು ಹಲವು ಆಕರ್ಷಕ ಬಣ್ಣಗಳೊಂದಿಗೂ ದೊರೆಯುತ್ತದೆ.

Maruti Suzuki WagonR February 2025 Sales Report This Car Also Likes Doctor And Engineers Details

ನೂತನ ಮಾರುತಿ ಸುಜುಕಿ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್ 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣ ಮಾಡಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 312 - ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಈ ಕಾರು 1-ಲೀ. ಪೆಟ್ರೋಲ್, 1.2-ಲೀ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. ಪೆಟ್ರೋಲ್ ರೂಪಾಂತರಗಳು 23.56 ರಿಂದ 25.19 ಕೆಎಂಪಿಎಲ್, ಸಿಎನ್‌ಜಿ ರೂಪಾಂತರಗಳು 34.05 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ.

Maruti Suzuki WagonR February 2025 Sales Report This Car Also Likes Doctor And Engineers Details

ಹೊಸ ಮಾರುತಿ ಸುಜುಕಿ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿದೆ. 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಡಿಸ್‌ಪ್ಲೇ, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್ & ಸ್ಟೀರಿಂಗ್ ಮೌಂಟೆಡ್ ಆಡಿಯೋನಂತಹ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್ ಪಾರ್ಕಿಂಗ್ ಸೆನ್ಸರ್ಸ್ ಹಾಗೂ ಹಿಲ್-ಹೋಲ್ಡ್ ಅಸಿಸ್ಟ್ ಅನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, March 9, 2025, 10:58 [IST]
English summary
Maruti suzuki wagonr february 2025 sales report this car also likes doctor and engineers details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+