ಅಬ್ಬರಿಸಿದ ಮಾರುತಿ ಕಾರು.. ಹೆಚ್ಚಾಯ್ತು ಕ್ರೇಜ್, ಮುಗಿಬಿದ್ದ ಗ್ರಾಹಕರು.. 34 Km ಮೈಲೇಜ್, 4.99 ಲಕ್ಷ!

ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಪ್ರಮುಖ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ದಶಕಗಳಿಂದ ಅಭಿಮಾನಿ ಬಳಗವನ್ನು ಹೊಂದಿದೆ. ಈಗಲೂ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಈ ನವೆಂಬರ್ ತಿಂಗಳು 'ವ್ಯಾಗನ್ಆರ್' ಮಾರಾಟವು ತುಂಬಾ ಚೆನ್ನಾಗಿದೆ. ಒಟ್ಟು 14,619 ಯುನಿಟ್‌ಗಳನ್ನು ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 13,982 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 5% ಅಧಿಕಗೊಂಡಿದೆ.

ಇದೇ ನವೆಂಬರ್‌ನಲ್ಲಿ 'ಮಾರುತಿ ವ್ಯಾಗನ್ಆರ್' ಮಾರಾಟವು ಹೆಚ್ಚಳಗೊಳ್ಳಲು ಹಲವು ಕಾರಣಗಳಿವೆ. ಈ ಕಾರು ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದ್ದು, ಡಾಕ್ಟರ್ ಹಾಗೂ ಎಂಜಿನಿಯರ್‌ಗಳು ಮಾತ್ರವಲ್ಲದೆ, ಎಲ್ಲ ವರ್ಗದ ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ನೂತನ 'ವ್ಯಾಗನ್ಆರ್' ಹ್ಯಾಚ್‌ಬ್ಯಾಕ್ ಆಗಿದ್ದರೂ ಮೈಕ್ರೋ ಎಸ್‌ಯುವಿಯಂತೆ ಭಾಸವಾಗುತ್ತದೆ. ಹೀಗಾಗಿ, ದೊಡ್ಡ ಸಂಖ್ಯೆಯಲ್ಲಿ ಮಾರಾಟಗೊಂಡಿದೆ ಎಂದು ವಿಶ್ಲೇಷಿಸಲಾಗಿದೆ.

Maruti Suzuki WagonR Hatchback November 2025 Sales Report

ಈ ವರ್ಷದ ಜೂನ್‌ನಿಂದ ಅಕ್ಟೋಬರ್ ತಿಂಗಳವರೆಗೂ 'ಮಾರುತಿ ಸುಜುಕಿ ವ್ಯಾಗನ್ಆರ್' ಹ್ಯಾಚ್‌ಬ್ಯಾಕ್ ಮಾರಾಟದಲ್ಲಿ ಸಾಕಷ್ಟು ಏರಿಳಿತಗಳನ್ನು ಕಾಣಲಾಗಿದೆ. ಬರೋಬ್ಬರಿ 76,550 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಇದರೊಂದಿಗೆ ಪ್ರತಿ ತಿಂಗಳು ಸರಾಸರಿ 15,310 ಯುನಿಟ್‌ಗಳು ಮಾರಾಟವಾಗಿವೆ.

ಸದ್ಯ, ದೇಶೀಯವಾಗಿ ಖರೀದಿಗೆ ಲಭ್ಯವಾಗಿರುವ ಹೊಚ್ಚ ಹೊಸ 'ಮಾರುತಿ ವ್ಯಾಗನ್ಆರ್' ರೂಪಾಂತರಗಳನ್ನು (ವೇರಿಯೆಂಟ್) ಅವಲಂಭಿಸಿ, ರೂ.4.99 ಲಕ್ಷದಿಂದ ರೂ.6.95 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲೈಟ್‌ಗಳು & ದೊಡ್ಡ ಗಾತ್ರದ ಅಲಾಯ್ ವೀಲ್‌ಗಳನ್ನು ಪಡೆದಿದೆ.

Maruti Suzuki WagonR Hatchback November 2025 Sales Report

ಇದು ಪುಟ್ಟ ಹ್ಯಾಚ್‌ಬ್ಯಾಕ್ ಆಗಿದ್ದರೂ ಹೆಚ್ಚು ವಿಶಾಲವಾಗಿದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,435 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಪರ್ಲ್ ಬ್ಲೂಯಿಶ್ ಬ್ಲ್ಯಾಕ್, ಪರ್ಲ್ ಮೆಟಾಲಿಕ್ ಪೂಲ್‌ಸೈಡ್ ಬ್ಲೂ, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಮೆಟಾಲಿಕ್ ಸಿಲ್ಕಿ ಸಿಲ್ವರ್ ಹಾಗೂ ಪರ್ಲ್ ಮೆಟಾಲಿಕ್ ಗ್ಯಾಲಂಟ್ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಹೊಸ 'ಮಾರುತಿ ವ್ಯಾಗನ್ಆರ್' ಬೆಲೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 1-ಲೀಟರ್ ಪೆಟ್ರೋಲ್, 1.2-ಲೀಟರ್ ಪೆಟ್ರೋಲ್ ಹಾಗೂ 1-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಸಾಮಾನ್ಯ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 23 ರಿಂದ 34 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.

Maruti Suzuki WagonR Hatchback November 2025 Sales Report

ಈ ಕಾರು 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 341 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್, ರೂಫ್ ಆಂಟೆನಾ, ಐಡಲ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್, ಸ್ಟೀರಿಂಗ್-ಮೌಂಟೆಡ್ ಕಂಟೋಲ್ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ನೂತನ 'ವ್ಯಾಗನ್ಆರ್' ಪ್ರಯಾಣಿಕರಿಗೂ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹೈ ಸ್ಪೀಡ್ ಅಲರ್ಟ್ ಸಿಸ್ಟಮ್, ಹಿಲ್ ಡಿಸೆಂಟ್ ಕಂಟ್ರೋಲ್, ಸೀಟ್ ಬೆಲ್ಟ್ ವಾರ್ನಿಂಗ್ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ. ಇದಕ್ಕೆ ಟಾಟಾ ಟಿಯಾಗೊ, ರೆನಾಲ್ಟ್ ಕ್ವಿಡ್, ಟಾಟಾ ಆಲ್ಟ್ರೋಜ್ ಹಾಗೂ ಹ್ಯುಂಡೈ ಐ20ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Friday, December 12, 2025, 11:09 [IST]
English summary
Maruti suzuki wagonr hatchback november 2025 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+