34 Km ಮೈಲೇಜ್.. 5 ಲಕ್ಷ, 5-ಸೀಟರ್.. ಈ Maruti Car ಮನೆಗೊಂದ್ ಇರಲಿ ಅಂತವ್ರೆ ಗ್ರಾಹಕರು, ಕಾರಣವೇನು?

ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ಈ ಕಾರು ನೋಡುಗರನ್ನು ಸೆಳೆಯುವಂತಿದ್ದು, ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಇತ್ತೀಚೆಗೆ ಈ 'ಮೇ'ನಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಮಾರಾಟ ವರದಿ ಪ್ರಕಟಗೊಂಡಿದೆ. ಅದರಲ್ಲೂ ಇದೇ 'ವ್ಯಾಗನ್ಆರ್' 7ನೇ ಸ್ಥಾನದಲ್ಲಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಕಳೆದ ತಿಂಗಳು (ಮೇ-2025) ಮಾರುತಿ ಸುಜುಕಿಯು ಒಟ್ಟು 13,949 ಯುನಿಟ್ 'ವ್ಯಾಗನ್ಆರ್' ಹ್ಯಾಚ್‌ಬ್ಯಾಕ್‌ಗಳನ್ನು ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ 14,492 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿಸಂಖ್ಯೆಗೆ ಹೋಲಿಸಿದರೆ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಸ್ವಲ್ಪವೇ ಸ್ವಲ್ಪ ಮಟ್ಟಿಗೆ ಅಂದರೆ ಶೇಕಡ -4% ಕುಸಿತವಾಗಿದೆ.

Maruti Suzuki WagonR May 2025 Sales Details

ಅದರ ಹೊರತಾಗಿ ಈ ಏಪ್ರಿಲ್‌ನಲ್ಲಿ ಮಾರಲಾದ 13,413 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ತಿಂಗಳಿಂದ ತಿಂಗಳ (MoM) ಮಾರಾಟ ಸಂಖ್ಯೆಯು ಕೊಂಚವೆಂಬಷ್ಟು ಪ್ರಗತಿಯಾಗಿದೆ. ಇದೇ ವರ್ಷದ ಮೊದಲ 3 ತಿಂಗಳಲ್ಲೂ 'ವ್ಯಾಗನ್ಆರ್' ಕಾರು ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಮಾರ್ಚ್‌ನಲ್ಲಿ 17,175 ಯುನಿಟ್, ಫೆಬ್ರವರಿಯಲ್ಲಿ 19,879 ಯುನಿಟ್ ಹಾಗೂ ಜನವರಿಯಲ್ಲಿ 24,078 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು.

ಮಾರುತಿ ಸುಜುಕಿ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್ ಮಾರಾಟ ಪ್ರಮಾಣ ದಿನದಿಂದ ದಿನಕ್ಕೆ ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಅಧಿಕಗೊಳ್ಳುತ್ತಿದೆ. ಅದಕ್ಕೆ ಹಲವು ಕಾರಣಗಳಿವೆ. ಬಹುಮುಖ್ಯವಾಗಿ ಈ ಕಾರು, ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಜೊತೆಗೆ ಗರಿಷ್ಠ ಮೈಲೇಜ್ ನೀಡುವುದರಿಂದ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

Maruti Suzuki WagonR May 2025 Sales Details

ಮಾರುತಿ ಸುಜುಕಿ ವ್ಯಾಗನ್ಆರ್ ವಿಶೇಷತೆಗಳೇನು..

ಇದೊಂದು ಹ್ಯಾಚ್‌ಬ್ಯಾಕ್ ಆಗಿದ್ದು, ಅತಿ ಕಡಿಮೆ ದರದಲ್ಲೂ ಸಿಗುತ್ತದೆ. ರೂ.5.79 ಲಕ್ಷದಿಂದ ರೂ.7.62 ಲಕ್ಷ ಎಕ್ಸ್-ಶೋರೂಂ (ಬೆಂಗಳೂರು) ದರವನ್ನು ಪಡೆದಿದೆ. ಹೊರಭಾಗದಲ್ಲಿ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದ್ದು, ಪೂಲ್‌ಸೈಡ್ ಬ್ಲೂ, ಸುಪೀರಿಯರ್ ವೈಟ್, ಸಿಲ್ಕಿ ಸಿಲ್ವರ್, ಮ್ಯಾಗ್ಮಾ ಗ್ರೇ ಮತ್ತು ಗ್ಯಾಲಂಟ್ ರೆಡ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. 1-ಲೀಟರ್ ಪೆಟ್ರೋಲ್, 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಪಡೆದಿದೆ. ಸಾಮಾನ್ಯ ಬೈಕ್‌ನಂತೆ 23 ರಿಂದ 34 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Maruti Suzuki WagonR May 2025 Sales Details

ಇದರಲ್ಲಿ 5 ಆಸನಗಳಿವೆ. ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 312 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್ ಮತ್ತು ಸ್ಟೀರಿಂಗ್ ಮೌಂಟೆಡ್ ಆಡಿಯೋ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, June 11, 2025, 18:30 [IST]
English summary
Maruti suzuki wagonr may 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+