Maruti: ಮೂಗು ಮುರಿಯುವವರಿಗೆ ತಕ್ಕ ಉತ್ತರ.. 5 ಲಕ್ಷದ ಈ ಮಾರುತಿ ಕಾರು 6-ಏರ್‌ಬ್ಯಾಗ್‌ನೊಂದಿಗೆ ಬಂದೇಬಿಡ್ತು!
ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಪ್ರಖ್ಯಾತ ಹ್ಯಾಚ್‌ಬ್ಯಾಕ್ ಆಗಿದೆ. ಈ ಕಾರನ್ನು ಡಾಕ್ಟರ್ ಹಾಗೂ ಎಂಜಿನಿಯರ್‌ಗಳು ಸೇರಿದಂತೆ ಎಲ್ಲ ವರ್ಗದ ಗ್ರಾಹಕರು ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಕಳೆದ ತಿಂಗಳು (ಮಾರ್ಚ್-2025) ದೇಶೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ ಕಾರುಗಳ ಪಟ್ಟಿಯಲ್ಲಿ ಇದೇ ವ್ಯಾಗನ್ಆರ್ ನಾಲ್ಕನೇ ಸ್ಥಾನದಲ್ಲಿದೆ. ಬರೋಬ್ಬರಿ 17,175 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. 2024ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 16,368 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ ಶೇಕಡ 5% ಬೆಳವಣಿಗೆಯನ್ನು ಸಾಧಿಸಲಾಗಿದೆ.
ಸದ್ಯ, ನೂತನ ಮಾರುತಿ ಸುಜುಕಿ ವ್ಯಾಗನ್ಆರ್ ಕಾರನ್ನು ಕೊಂಚ ಮಟ್ಟಿಗೆ ನವೀಕರಣ ಮಾಡಲಾಗಿದೆ. ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಇದರ ಎಲ್ಲ ರೂಪಾಂತರಗಳಲ್ಲಿ (ವೇರಿಯೆಂಟ್) ಸ್ಟ್ಯಾಂಡರ್ಡ್ ಆಗಿ 6-ಏರ್‌ಬ್ಯಾಗ್‌ಗಳನ್ನು ನೀಡಲಾಗಿದೆ. ಜೊತೆಗೆ ಈ ಹಿಂದಿನ ಎಲ್ಲ ಸುರಕ್ಷತಾ ವೈಶಿಷ್ಟ್ಯಗಳನ್ನು ಹಾಗೆಯೇ ಮುಂದುವರಿಸಿಕೊಂಡು ಹೋಗಲಾಗಿದೆ.

ಈ ಹ್ಯಾಚ್‌ಬ್ಯಾಕ್ ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್ ಪಾರ್ಕಿಂಗ್ ಸೆನ್ಸರ್ಸ್, ಹಿಲ್-ಹೋಲ್ಡ್ ಅಸಿಸ್ಟ್, ಸೀಟ್ ಬೆಲ್ಟ್ ವಾರ್ನಿಂಗ್, ಚೈಲ್ಡ್ ಲಾಕ್, ಓವರ್‌ಸ್ಪೀಡ್ ವಾರ್ನಿಂಗ್, ಸ್ಪೀಡ್ ಸೆನ್ಸಿಂಗ್ ಡೋರ್ ಲಾಕ್ ಮತ್ತು ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಸೇರಿದಂತೆ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ.
ಹೊಸ ಮಾರುತಿ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ಲಭ್ಯವಿದೆ. ಇದು ಕನಿಷ್ಠ ರೂ.5.64 ಲಕ್ಷ ಮತ್ತು ಗರಿಷ್ಠ ರೂ.7.47 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಎಲ್ಎಕ್ಸ್ಐ, ವಿಎಕ್ಸ್ಐ ಮತ್ತು ಜಡ್ಎಕ್ಸ್ಐ ಸೇರಿದಂತೆ ವಿವಿಧ ಅತ್ಯಾಧುನಿಕ ರೂಪಾಂತರಗಳ ಆಯ್ಕೆಯಲ್ಲಿಯೂ ಗ್ರಾಹಕರಿಗೆ ದೊರೆಯುತ್ತದೆ.

ನೂತನ ವ್ಯಾಗನ್ಆರ್ ಕಾರು, ಹೊರಭಾಗದಲ್ಲಿ ನೋಡುಗರನ್ನು ಸೆಳೆಯುವಂತಹ ಉತ್ತಮವಾದ ವಿನ್ಯಾಸವನ್ನು ಹೊಂದಿದೆ. ಗ್ಯಾಲಂಟ್ ರೆಡ್, ಪೂಲ್‌ಸೈಡ್ ಬ್ಲೂ, ಸುಪೀರಿಯರ್ ವೈಟ್, ಸಿಲ್ಕಿ ಸಿಲ್ವರ್ & ಮ್ಯಾಗ್ಮಾ ಗ್ರೇ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಈ ಹ್ಯಾಚ್‌ಬ್ಯಾಕ್ 2435 ಎಂಎಂ ವೀಲ್‌ಬೇಸ್ ಹಾಗೂ 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಅನ್ನು ಒಳಗೊಂಡಿದೆ.
ಈ ಮಾರುತಿ ಸುಜುಕಿ ವ್ಯಾಗನ್ಆರ್ ಕಾರು, 1.2-ಲೀಟರ್ ಸಾಮರ್ಥ್ಯದ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಜೊತೆಗೆ ಯಾವ ಬೈಕ್‌ಗೂ ಕಡಿಮೆ ಇಲ್ಲದ ರೀತಿಯಲ್ಲಿ ಇಂಧನ ದಕ್ಷತೆಯನ್ನು ಹೊಂದಿದೆ. ಇದರ ಪೆಟ್ರೋಲ್ ಮಾಡೆಲ್‌ಗಳು, 23.56 ರಿಂದ 25.19 ಕೆಎಂಪಿಎಲ್ ಮತ್ತು ಸಿಎನ್‌ಜಿ ಮಾಡೆಲ್‌ಗಳು 34.05 ಕೆಎಂ/ಕೆಜಿ ಮೈಲೇಜ್ ನೀಡುತ್ತವೆ.
ಹೊಸ ಮಾರುತಿ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್‌ನಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚಾರ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 341 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಈ ಕಾರು 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್ & ಸ್ಟೀರಿಂಗ್ ಮೌಂಟೆಡ್ ಆಡಿಯೋ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications