ಡಾಕ್ಟರ್ & ಎಂಜಿನಿಯರ್‌ಗಳ ನೆಚ್ಚಿನ ಕಾರಿದು.. 34 Km ಮೈಲೇಜ್, 4.99 ಲಕ್ಷ.. ದಾಖಲೆ ಸಂಖ್ಯೆಯಲ್ಲಿ ಮಾರಾಟ!

ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ವಿಶ್ವಾಸಾರ್ಹ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಈ ಕಾರನ್ನು ಡಾಕ್ಟರ್ ಹಾಗೂ ಎಂಜಿನಿಯರ್‌ಗಳು ಮಾತ್ರವಲ್ಲದೆ, ಎಲ್ಲ ವರ್ಗದ ವರ್ಗದ ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಈ ಅಕ್ಟೋಬರ್ ತಿಂಗಳಲ್ಲೂ 'ವ್ಯಾಗನ್ಆರ್' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 18,970 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 13,922 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಈ ಅಂಕಿಸಂಖ್ಯೆಯನ್ನು ವಿಶ್ಲೇಷಿಸಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 36.26% ಬೆಳವಣಿಗೆಯಾಗಿದೆ.

'ಮಾರುತಿ ವ್ಯಾಗನ್ಆರ್' ವಿಶೇಷತೆಗಳೇನು:

ಈ ಕಾರು ಅಗ್ಗದ ದರದಲ್ಲಿ ಖರೀದಿಗೆ ಲಭ್ಯವಿದೆ. ಕನಿಷ್ಠ ರೂ.4.99 ಲಕ್ಷ ಹಾಗೂ ಗರಿಷ್ಠ ರೂ.6.95 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಎಲ್ಎಕ್ಸ್ಐ (LXI), ವಿಎಕ್ಸ್ಐ (VXI), ಝಡ್ಎಕ್ಸ್ಐ (ZXI), ಮತ್ತು ಝಡ್ಎಕ್ಸ್ಐ ಪ್ಲಸ್ (ZXI Plus) ಎಂಬ 4 ಆಕರ್ಷಕ ರೂಪಾಂತರಗಳೊಂದಿಗೂ ಸಿಗುತ್ತದೆ.

maruti-suzuki-wagonr-october-2025-sales-report

ಇದು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ನೋಡುಗರನ್ನು ಕಣ್ಮನ ಸೆಳೆಯುವಂತಿದೆ. ಸಾಕಷ್ಟು ಉತ್ತಮವಾಗಿರುವ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲೈಟ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸಾಲಿಡ್ ವೈಟ್, ಪರ್ಲ್ ಮೆಟಾಲಿಕ್ ಪೂಲ್‌ಸೈಡ್ ಬ್ಲೂ, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಮೆಟಾಲಿಕ್ ಸಿಲ್ಕಿ ಸಿಲ್ವರ್, ಪರ್ಲ್ ಮೆಟಾಲಿಕ್ ಗ್ಯಾಲಂಟ್ ರೆಡ್ ಹಾಗೂ ಪರ್ಲ್ ಬ್ಲೂಯಿಶ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

ಹೊಸ 'ವ್ಯಾಗನ್ಆರ್' ಬಹಳಷ್ಟು ದೊಡ್ಡ ಗಾತ್ರದಲ್ಲಿದೆ. 3,655 ಮಿ.ಮೀ ಉದ್ದ, 1,620 ಮಿ.ಮೀ ಅಗಲ ಹಾಗೂ 1,675 ಮಿ.ಮೀ ಎತ್ತರವಿದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,435 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಬರೋಬ್ಬರಿ 850 ಕೆಜಿ ತೂಕವಿದೆ.

maruti-suzuki-wagonr-october-2025-sales-report

ಈ ಕಾರು 3 ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 67 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 89 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಮತ್ತೊಂದು 1-ಲೀ. ಪೆಟ್ರೋಲ್ + ಸಿಎನ್‌ಜಿ ಎಂಜಿನ್, 57 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 82 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

maruti-suzuki-wagonr-october-2025-sales-report

ಇನ್ನೊಂದು 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 90 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ & 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಈ ಕಾರು 23 ರಿಂದ 34 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

ನೂತನ 'ವ್ಯಾಗನ್ಆರ್'5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 341 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 140 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7 ಇಂಚು), ಮ್ಯೂಸಿಕ್ ಸಿಸ್ಟಮ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್, ಐಡಲ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಕಂಟೋಲ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ಹಿತದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಸ್ಪೀಡ್ ಸೆನ್ಸಿಂಗ್ ಡೋರ್ ಲಾಕ್, ಸೆಂಟ್ರಲ್ ಲಾಕಿಂಗ್, ಹಿಲ್ ಡಿಸೆಂಟ್ ಕಂಟ್ರೋಲ್, ಸೀಟ್ ಬೆಲ್ಟ್ ವಾರ್ನಿಂಗ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Friday, November 14, 2025, 8:30 [IST]
English summary
Maruti suzuki wagonr october 2025 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+