ಡಾಕ್ಟರ್ & ಎಂಜಿನಿಯರ್‌ಗಳಿಗೂ ಇಷ್ಟ.. 34 ಕಿ.ಮೀ ಮೈಲೇಜ್, 4.99 ಲಕ್ಷ.. ಈ ಮಾರುತಿ ಕಾರಿನ ಕುರಿತ ಪ್ರಮುಖಾಂಶಗಳಿವು!
ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ವಿಶ್ವಾಸಾರ್ಹ ಹ್ಯಾಚ್‌ಬ್ಯಾಕ್ ಎಂದೇ ಮನೆ ಮಾತಾಗಿದೆ. ಅತಿ ಹೆಚ್ಚಿನ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ವೈದ್ಯರು ಮತ್ತು ಎಂಜಿನಿಯರ್‌ಗಳು ಒಳಗೊಂಡಂತೆ ಎಲ್ಲ ವರ್ಗದ ಗ್ರಾಹಕರ ನೆಚ್ಚಿನ ಕಾರಾಗಿದ್ದು, ನಾ ಮುಂದು - ತಾ ಮುಂದು ಎಂಬಂತೆ ಕೊಂಡುಕೊಳ್ಳುತ್ತಿದ್ದಾರೆ. ನೀವು ನೂತನ ಹ್ಯಾಚ್‌ಬ್ಯಾಕ್‌ನ್ನು ಖರೀದಿ ಮಾಡಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ 'ವ್ಯಾಗನ್ಆರ್' ಹೆಚ್ಚು ಸೂಕ್ತವಾಗಬಲ್ಲದು. ಇಲ್ಲಿ ಈ ಕಾರಿನ ಬೆಲೆ, ವಿನ್ಯಾಸ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.
ಬೆಲೆ & ರೂಪಾಂತರಗಳು (Price & Variants):
ಈ ಹ್ಯಾಚ್‌ಬ್ಯಾಕ್ ಅತಿ ಕಡಿಮೆ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.4.99 ಲಕ್ಷ ಹಾಗೂ ಗರಿಷ್ಠ ರೂ.6.95 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಒಳಗೊಂಡಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಮತ್ತು ಝಡ್ಎಕ್ಸ್ಐ ಪ್ಲಸ್ ಎಂಬ ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colors):
ಇದು ತುಂಬಾ ಸರಳವಾದ ವಿನ್ಯಾಸ ಹೊಂದಿದೆ. ಆದರೂ ನೋಡಲು ಮಿನಿ ಎಸ್‌ಯುವಿಯಂತೆ ಭಾಸವಾಗುತ್ತದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಜೊತೆಗೆ ಸಾಲಿಡ್ ವೈಟ್, ಪೂಲ್‌ಸೈಡ್ ಬ್ಲೂ, ಸಿಲ್ಕಿ ಸಿಲ್ವರ್, ಮಿಡ್‌ನೈಟ್ ಬ್ಲ್ಯಾಕ್ ಹಾಗೂ ಪ್ರೈಮ್ ಗ್ಯಾಲಂಟ್ ರೆಡ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ.
ಸುತ್ತಳತೆ (Dimensions):
ನೂತನ 'ವ್ಯಾಗನ್ಆರ್' ಸ್ವಲ್ಪ ಮಟ್ಟಿಗೆ ದೊಡ್ಡ ಗಾತ್ರದಲ್ಲಿದೆ. 3,665 ಎಂಎಂ ಉದ್ದ, 1,620 ಎಂಎಂ ಅಗಲ ಮತ್ತು 1,675 ಎಂಎಂ ಎತ್ತರವಿದೆ. 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2,435 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 850 ಕೆಜಿ ತೂಕವಿದೆ.

ಕಾರ್ಯಕ್ಷಮತೆ (Performance):
ಈ ಕಾರು ಶಕ್ತಿಶಾಲಿಯಾದ ಮೂರು ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 67 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 89 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಇನ್ನೊಂದು 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 90 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ & 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ.

ಮತ್ತೊಂದು 1-ಲೀಟರ್ ಪೆಟ್ರೋಲ್ + ಸಿಎನ್‌ಜಿ ಎಂಜಿನ್, 57 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 82 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಈ ಕಾರು 23 ರಿಂದ 34 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 32 ಲೀ.ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ.
ಆಸನ ಆಯ್ಕೆ, ಬೂಟ್ ಸ್ಪೇಸ್ & ವೈಶಿಷ್ಟ್ಯಗಳು (Seating Capacity, Boot Space & Features):
ಇದರ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಜಾಸ್ತಿ ಲಗೇಜ್ ಕೊಂಡೊಯ್ಯಲು 341 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 140 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಮ್ಯೂಸಿಕ್ ಸಿಸ್ಟಮ್, ಕೀಲೆಸ್ ಎಂಟ್ರಿ, ಪವರ್ ವಿಂಡೋಗಳು, ಐಡಲ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ ಮತ್ತು ಸ್ಟೀರಿಂಗ್ ಮೌಂಟೆಡ್ ಕಂಟೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಹೊಸ 'ವ್ಯಾಗನ್ಆರ್' ಪುಟ್ಟ ಕಾರಾಗಿದ್ದರೂ ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ಸಲುವಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಸೀಟ್ ಬೆಲ್ಟ್ ವಾರ್ನಿಂಗ್, ಹಿಲ್-ಹೋಲ್ಡ್ ಅಸಿಸ್ಟ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.


Click it and Unblock the Notifications








