ಕಡಿಮೆ ಬೆಲೆಯ ಮಾರುತಿ ವ್ಯಾಗನ್ಆರ್ ಕಾರು ಖರೀದಿಸಬೇಕೇ.. ಆನ್-ರೋಡ್ ದರವೆಷ್ಟು, EMI ಏನು?
ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಪ್ರಖ್ಯಾತ ಹ್ಯಾಚ್‌ಬ್ಯಾಕ್ ಆಗಿದೆ. ಈ ಕಾರಿನ ದರ ಫೆ.1ಕ್ಕೆ ಅನ್ವಯವಾಗುವಂತೆ ಬರೋಬ್ಬರಿ ರೂ.13,000 ವರೆಗೆ ಹೆಚ್ಚಳಗೊಂಡಿದೆ. ಬೆಲೆ ಏರಿಕೆ ನಂತರ, ಈ ಹೊಸ ಹ್ಯಾಚ್‌ಬ್ಯಾಕ್ ರೂ.5.64 ಲಕ್ಷದಿಂದ ರೂ.7.47 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. ನೀವು ಅತಿ ಕಡಿಮೆ ಬೆಲೆಗೆ ನೂತನ ಕಾರೊಂದನ್ನು ಮನೆಗೆ ತರಲು ಆಲೋಚಿಸಿದ್ದೀರಾ.. ಹಾಗಾದರೆ, ಮಾರುತಿ ವ್ಯಾಗನ್ಆರ್ ಉತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ ಈ ಹ್ಯಾಚ್‌ಬ್ಯಾಕ್‌ನ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಬಗ್ಗೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಬೆಂಗಳೂರಿನಲ್ಲಿ ಮಾರುತಿ ಸುಜುಕಿ ವ್ಯಾಗನ್ಆರ್ ಕಾರು ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಸಿಗುತ್ತದೆ. ಇದರ ಎಲ್ಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.6.80 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಈ ಕಾರನ್ನು ಕೊಂಡುಕೊಂಡರೆ, ರೂ.4.80 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.10,000 ವರೆಗೆ ಇಎಂಐ ಕಟ್ಟಬೇಕು.

ಮಾರುತಿ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್‌ನ ವಿಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.7.33 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ಇದನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಖರೀದಿ ಮಾಡಿದರೆ, ರೂ.5.33 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.11,000 ವರೆಗೆ ಇಎಂಐ ಪಾವತಿ ಮಾಡಬೇಕು.
ವ್ಯಾಗನ್ಆರ್ ಕಾರಿನ ಜಡ್ಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.7.72 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ತೆಗೆದುಕೊಂಡರೆ, ರೂ.5.72 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.12,000 ವರೆಗೆ ಇಎಂಐ ಕಟ್ಟಬೇಕು.

ಮಾರುತಿ ಸುಜುಕಿ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್‌ನ ಎಲ್ಎಕ್ಸ್ಐ (ಸಿಎನ್‌ಜಿ) ರೂಪಾಂತರ, ರೂ.7.86 ಲಕ್ಷವರೆಗೆ ಆನ್-ರೋಡ್ ದರವನ್ನು ಒಳಗೊಂಡಿದೆ. ಇದನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.5.86 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.12,000 ಇಎಂಐ ಪಾವತಿ ಮಾಡಬೇಕು.
ಈ ಕಾರು 1-ಲೀಟರ್ ಪೆಟ್ರೋಲ್, 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 23.56 ರಿಂದ 34.05 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದು 5 ಆಸನ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು.
ನೂತನ ವ್ಯಾಗನ್ಆರ್ ಕಾರು ಗ್ಯಾಲಂಟ್ ರೆಡ್, ಪೂಲ್‌ಸೈಡ್ ಬ್ಲೂ, ಸುಪೀರಿಯರ್ ವೈಟ್, ಸಿಲ್ಕಿ ಸಿಲ್ವರ್ ಮತ್ತು ಮ್ಯಾಗ್ಮಾ ಗ್ರೇ ಬಣ್ಣಗಳೊಂದಿಗೂ ದೊರೆಯುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್ ಹಾಗೂ ಸ್ಟೀರಿಂಗ್ ಮೌಂಟೆಡ್ ಆಡಿಯೋ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಹಿಲ್ ಹೋಲ್ಡ್ ಅಸಿಸ್ಟ್ ಅನ್ನು ಹೊಂದಿದೆ.
ಮಾರುತಿ ಸುಜುಕಿ ವ್ಯಾಗನ್ಆರ್ ಮಾರಾಟ ವಿವರಗಳು: ಕಳೆದ ತಿಂಗಳು (ಜನವರಿ - 2025) ಈ ಹ್ಯಾಚ್‌ಬ್ಯಾಕ್ ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಬರೋಬ್ಬರಿ 24,078 ಯುನಿಟ್‌ಗಳನ್ನು ಮಾರಾಟ ಮಾಡಿಲಾಗಿದೆ. 2024ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 17,756 ಯುನಿಟ್‌ಗಳಿಗೆ ಹೋಲಿಸಿದರೆ, ವರ್ಷದಿಂದ ವರ್ಷಕ್ಕೆ ಶೇಕಡ 36% ಬೆಳವಣಿಯಾಗಿದೆ.
ನಾವಿಲ್ಲಿ ಈ ಕಾರಿನ ಕೆಲವು ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications