34 ಕಿ.ಮೀ ಮೈಲೇಜ್.. 5-ಸೀಟರ್, ಬೆಲೆಯೂ ಅಗ್ಗ.. ಡಾಕ್ಟರ್ & ಎಂಜಿನಿಯರ್‌ಗಳ ಮೆಚ್ಚಿನ ಕಾರಿದು.. ಹೊಸ ದರವೆಷ್ಟು?
ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಜನಾಕರ್ಷಣೆಯ ಹ್ಯಾಚ್‌ಬ್ಯಾಕ್ ಆಗಿದೆ. ಡಾಕ್ಟರ್ ಹಾಗೂ ಎಂಜಿನಿಯರ್‌ಗಳು ಸೇರಿದಂತೆ ಎಲ್ಲ ವರ್ಗದ ಗ್ರಾಹಕರು ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸೆ.22 ರಿಂದ ಪರಿಷ್ಕೃತ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳು ಜಾರಿಗೊಂಡಿವೆ. ಇದರ ಸಂಪೂರ್ಣ ಪ್ರಯೋಜನವು 'ವ್ಯಾಗನ್ಆರ್' ಕಾರಿಗೂ ದೊರೆಯುತ್ತಿತ್ತು. ರೂ.79,600 ವರೆಗೆ ಬೆಲೆ ಇಳಿಕೆಯಾಗಿದೆ. ನಾವಿಲ್ಲಿ ಈ ಹ್ಯಾಚ್‌ಬ್ಯಾಕ್‌ನ ಪ್ರತಿಯೊಂದು ರೂಪಾಂತರಗಳ (ವೇರಿಯೆಂಟ್) ಹೊಸ ಎಕ್ಸ್-ಶೋರೂಂ ದರ ಎಷ್ಟಾಗಿದೆ ಎಂಬುದರ ಕುರಿತಂತೆ ಸಂಪೂರ್ಣವಾಗಿ ವಿವರಿಸಿದ್ದೇವೆ.
ಇದರ ಎಲ್ಎಕ್ಸ್ಐ ಮ್ಯಾನುವಲ್ ಟ್ರಾಸ್ಮಿಷನ್ (ಪೆಟ್ರೋಲ್) ರೂಪಾಂತರ ರೂ.4,98,900, ವಿಎಕ್ಸ್ಐ ಮ್ಯಾನುವಲ್ ಟ್ರಾಸ್ಮಿಷನ್ (ಪೆಟ್ರೋಲ್) ರೂಪಾಂತರ ರೂ.5,51,900, ಎಲ್ಎಕ್ಸ್ಐ (ಸಿಎನ್‌ಜಿ) ರೂಪಾಂತರ ರೂ.5,88,900, ಜಡ್ಎಕ್ಸ್ಐ ಮ್ಯಾನುವಲ್ ಟ್ರಾಸ್ಮಿಷನ್ (ಪೆಟ್ರೋಲ್) ರೂಪಾಂತರ ರೂ.5,95,900 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.

ಅದೇ ರೀತಿಯಲ್ಲಿ ವಿಎಕ್ಸ್ಐ ಆಟೋಮೆಟಿಕ್ ಟ್ರಾಸ್ಮಿಷನ್ (ಪೆಟ್ರೋಲ್) ರೂಪಾಂತರ ರೂ.5,96,900, ಜಡ್ಎಕ್ಸ್ಐ ಪ್ಲಸ್ ಆಟೋಮೆಟಿಕ್ ಟ್ರಾಸ್ಮಿಷನ್ (ಪೆಟ್ರೋಲ್) ರೂಪಾಂತರ ರೂ.6,38,900, ಜಡ್ಎಕ್ಸ್ಐ ಆಟೋಮೆಟಿಕ್ ಟ್ರಾಸ್ಮಿಷನ್ (ಪೆಟ್ರೋಲ್) ರೂಪಾಂತರ ರೂ.6,40,900, ವಿಎಕ್ಸ್ಐ (ಸಿಎನ್‌ಜಿ) ರೂಪಾಂತರ ರೂ.6,41,900 ಜಡ್ಎಕ್ಸ್ಐ ಪ್ಲಸ್ ಆಟೋಮೆಟಿಕ್ ಟ್ರಾಸ್ಮಿಷನ್ (ಪೆಟ್ರೋಲ್) ರೂಪಾಂತರ ರೂ.6,83,900 (ಎಕ್ಸ್-ಶೋರೂಂ) ದರವನ್ನು ಪಡೆದಿದೆ.
ಮಾರುತಿ ವ್ಯಾಗನ್ಆರ್ ವಿಶೇಷತೆಗಳೇನು:
ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಹ್ಯಾಲೊಜೆನ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ 15 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಮೆಟಾಲಿಕ್ ಮ್ಯಾಗ್ಮಾ ಗ್ರೇ, ಮೆಟಾಲಿಕ್ ಸಿಲ್ಕಿ ಸಿಲ್ವರ್, ಸುಪೀರಿಯರ್ ವೈಟ್, ಪರ್ಲ್ ಮೆಟಾಲಿಕ್ ಗ್ಯಾಲಂಟ್ ರೆಡ್ ಮತ್ತು ಪರ್ಲ್ ಬ್ಲೂಯಿಶ್ ಬ್ಲ್ಯಾಕ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.

ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 341 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2435 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 840 ಕೆಜಿ ತೂಕವಿದೆ.
ನೂತನ ವ್ಯಾಗನ್ಆರ್ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಡಿದೆ 5-ಸ್ಪೀಡ್ ಮ್ಯಾನುವಲ್ ಟ್ರಾಸ್ಮಿಷನ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಟ್ರಾಸ್ಮಿಷನ್ (ಗೇರ್‌ಬಾಕ್ಸ್) ಆಯ್ಕೆಯನ್ನು ಒಳಗೊಂಡಿದೆ. 23 ರಿಂದ 34 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 140 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 12.4 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆದಿದೆ.

ಈ ಕಾರು ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 4 ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಕೀಲೆಸ್ ಎಂಟ್ರಿ, ಪವರ್ ವಿಂಡೋಗಳು, ಟಿಲ್ಟ್ ಅಡ್ಜಸ್ಟೇಬಲ್ ಸ್ಟೇರಿಂಗ್ ವೀಲ್, ಐಡಲ್ ಸ್ಟಾರ್ಟ್- ಸ್ಟಾಪ್ ಸಿಸ್ಟಮ್ ಮತ್ತು ಸ್ಟೀರಿಂಗ್ ಮೌಂಟೆಡ್ ಆಡಿಯೋವನ್ನು ಹೊಂದಿದೆ.
ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್ ಪಾರ್ಕಿಂಗ್ ಸೆನ್ಸರ್ಸ್, ಸೀಟ್ ಬೆಲ್ಟ್ ವಾರ್ನಿಂಗ್, ಹಿಲ್ ಹೋಲ್ಡ್ ಅಸಿಸ್ಟ್, ಚೈಲ್ಡ್ ಲಾಕ್, ಓವರ್‌ಸ್ಪೀಡ್ ವಾರ್ನಿಂಗ್ ಹಾಗೂ ಸ್ಪೀಡ್ ಸೆನ್ಸಿಂಗ್ ಡೋರ್ ಲಾಕ್‌ನ್ನು ಪಡೆದಿದೆ.
ಒಟ್ಟಾರೆಯಾಗಿ 'ಮಾರುತಿ ಸುಜುಕಿ ವ್ಯಾಗನ್ಆರ್' ಕಾರಿನ ಬೆಲೆ ಇಳಿಕೆಯಾಗಿರುವುದು ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇದು ಉತ್ತಮವಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಈ ಹಬ್ಬದ ಋತುವಿಲ್ಲಿ 'ವ್ಯಾಗನ್ಆರ್' ಹ್ಯಾಚ್‌ಬ್ಯಾಕ್ ಹೇಗೆ ಮಾರಾಟವಾಗುತ್ತಿದೆ ಎಂಬುದನ್ನು ಕಾದು ನೋಡಬೇಕಾಗಿದೆ.


Click it and Unblock the Notifications








