ಯಾರು ನೋ ಹೇಳುವಂತಿಲ್ಲ.. 26 Km ಮೈಲೇಜ್, 6-ಸೀಟರ್.. ಈ ಪ್ರಮುಖ ಮಾರುತಿ ಕಾರು 6 ಏರ್‌ಬ್ಯಾಗ್‌ನೊಂದಿಗೆ ಬಿಡುಗಡೆ!

ಮಾರುತಿ ಸುಜುಕಿ ಎಕ್ಸ್ಎಲ್6 (Maruti Suzuki XL6) ಪ್ರಮುಖ ಎಂಪಿವಿಯಾಗಿದೆ. ಇದೊಂದು ಪ್ರೀಮಿಯಂ ಕಾರಾಗಿದ್ದು, ನೆಕ್ಸಾ ಡೀಲರ್‌ಶಿಪ್ ಮೂಲಕ ಮಾರಾಟಗೊಳಿಸಲಾಗುತ್ತದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಈ ವರ್ಷದ ಮೊದಲರ್ಧದಲ್ಲಿ (ಜನವರಿಯಿಂದ ಜೂನ್) ಒಟ್ಟು 19,044 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಸದ್ಯ, ಪ್ರಯಾಣಿಕರ ರಕ್ಷಣೆಗಾಗಿ ಇದೇ 'ಎಕ್ಸ್ಎಲ್6' ಎಂಪಿವಿಯನ್ನು ನವೀಕರಿಸಿಯೂ ಬಿಡುಗಡೆಗೊಳಿಸಲಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಇಂದಿನಿಂದ ಜಾರಿಗೆ ಬರುವಂತೆ ಮಾರುತಿ ಎಕ್ಸ್ಎಲ್6 ಎಂಪಿವಿಯ ಎಲ್ಲ ರೂಪಾಂತರಗಳು (ವೇರಿಯೆಂಟ್ಸ್), ಸ್ಟ್ಯಾಂಡರ್ಡ್ ಆಗಿ 6 ಏರ್‌ಬ್ಯಾಗ್‌ ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯಲಿವೆ. ಈ ಹಿನ್ನೆಲೆ ಎಕ್ಸ್ಎಲ್6 ದರವನ್ನು ಶೇಕಡ 0.8% ಏರಿಕೆ ಮಾಡಲಾಗಿದ್ದು, ಕನಿಷ್ಠ ರೂ.12 ಲಕ್ಷ ಹಾಗೂ ಗರಿಷ್ಠ ರೂ.15 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

Maruti Suzuki XL6 Launched With Six Airbags As Standard Details

ಈ ಕಾರು ಜಿಟಾ, ಆಲ್ಫಾ ಹಾಗೂ ಆಲ್ಫಾ ಪ್ಲಸ್ ಸೇರಿದಂತೆ ವಿವಿಧ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಇದರೊಂದಿಗೆ ನೋಡಗರನ್ನು ಸೆಳೆಯುವಂತಹ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಇಂಟಿಗ್ರೇಟೆಡ್ - ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 16-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ.

ನೂತನ ಎಕ್ಸ್ಎಲ್6 ಎಂಪಿವಿಯು ಆರ್ಕ್ಟಿಕ್ ವೈಟ್, ಒಪುಲೆಂಟ್ ರೆಡ್, ಸ್ಪ್ಲೆಂಡಿಡ್ ಸಿಲ್ವರ್, ಪರ್ಲ್ ಮಿಡ್‌ನೈಟ್‌ ಬ್ಲ್ಯಾಕ್, ಬ್ರೇವ್ ಖಾಕಿ, ಗ್ರ್ಯಾಂಡಿಯರ್ ಗ್ರೇ ಹಾಗೂ ನೆಕ್ಸಾ ಬ್ಲೂ ಬಣ್ಣಗಳೊಂದಿಗೂ ದೊರೆಯುತ್ತದೆ. ಜೊತೆಗೆ 4,445 ಎಂಎಂ ಉದ್ದ, 1775 ಎಂಎಂ ಅಗಲ, 1755 ಎಂಎಂ ಎತ್ತರವು ಇದೆ. ಜೊತೆಗೆ 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2740 ವೀಲ್‌ಬೇಸ್‌ನ್ನು ಒಳಗೊಂಡಿದೆ.

Maruti Suzuki XL6 Launched With Six Airbags As Standard Details

ಇದು ಬಲಿಷ್ಠವಾದ 2 ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ದೊಡ್ಡ ಗಾತ್ರದ ಕಾರಾಗಿದ್ದರೂ ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 20 ರಿಂದ 26 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.

ಹೊಸ ಮಾರುತಿ ಎಕ್ಸ್ಎಲ್6 ಎಂಪಿವಿಯು 6 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 209 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 45 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ.

Maruti Suzuki XL6 Launched With Six Airbags As Standard Details

ಈ ಕಾರಿನ ಕ್ಯಾಬಿನ್ ವಿನ್ಯಾಸವು ತುಂಬಾ ಅಚ್ಚುಕಟ್ಟಾಗಿದೆ. 7-ಇಂಚಿರುವ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 6 ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು, ಪ್ಯಾಡಲ್ ಶಿಫ್ಟರ್ಸ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಕ್ರೂಸ್ ಕಂಟ್ರೋಲ್ ಹಾಗೂ ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ನೂತನ ಎಕ್ಸ್ಎಲ್6 ಎಂಪಿವಿಯು ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು ಮಾತ್ರವಲ್ಲದೆ, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಸೆಂಟ್ರಲ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಡೋರ್ ಲಾಕ್, ಸೀಟ್ ಬೆಲ್ಟ್ ವಾರ್ನಿಂಗ್, ಹಿಲ್ ಹೋಲ್ಡ್ ಅಸಿಸ್ಟ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

Article Published On: Thursday, July 24, 2025, 13:16 [IST]
English summary
Maruti suzuki xl6 launched with 6 airbags as standard details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+