26 ಕಿ.ಮೀ ಮೈಲೇಜ್, 11 ಲಕ್ಷ.. 6 ಸೀಟರ್, ಈ 'Maruti Mpv'ಗೆ ಮುಗಿಬಿದ್ದ ಗ್ರಾಹಕರು.. ರೆಕಾರ್ಡ್ ಸಂಖ್ಯೆಯಲ್ಲಿ ಸೇಲ್ಸ್!

ಮಾರುತಿ ಸುಜುಕಿ ಎಕ್ಸ್ಎಲ್6 (Maruti Suzuki XL6) ಪ್ರಮುಖ ಎಂಪಿವಿಯಾಗಿದೆ. ಈ ಕಾರು ಹೆಚ್ಚು ಆಕರ್ಷಕವಾಗಿದ್ದು, ಬೆಜೆಟ್ ಬೆಲೆಯಲ್ಲಿಯೂ ಖರೀದಿಗೆ ದೊರೆಯುತ್ತದೆ. ಈಚೆಗೆ ಏಪ್ರಿಲ್ ತಿಂಗಳ 'ಮಾರುತಿ ಸುಜುಕಿ' ಕಂಪನಿಯ ಎಲ್ಲ ಕಾರುಗಳ ಮಾರಾಟದ ಅಂಕಿಅಂಶಗಳ ವರದಿ ಪ್ರಕಟಗೊಂಡಿದೆ. ಅದರಲ್ಲೂ 'ಎಕ್ಸ್ಎಲ್6' ಎಂಪಿವಿ ದಾಖಲೆ ಸಂಖ್ಯೆಯಲ್ಲಿ ಮಾರಾಟಗೊಂಡಿದ್ದು, ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಂಡಿದ್ದಾರೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಹೋದ ತಿಂಗಳು (ಏಪ್ರಿಲ್-2025) ಮಾರುತಿ ಸುಜುಕಿಯು ಸರಿ ಸುಮಾರು 4140 ಯುನಿಟ್ 'ಎಕ್ಸ್ಎಲ್6' ಎಂಪಿವಿಗಳನ್ನು ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ 3509 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಅದಕ್ಕೆ ಹೋಲಿಸಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ 17.98% ಬೆಳವಣಿಗೆಯಾಗಿದೆ.

Maruti Suzuki XL6 Mpv April 2025 Sales Details

ಇದರ ಹೊರತಾಗಿಯೂ ಈ ವರ್ಷದ ಮೊದಲ ತಿಂಗಳಲ್ಲೂ 'ಮಾರುತಿ ಸುಜುಕಿ ಎಕ್ಸ್ಎಲ್6' ಎಂಪಿವಿ ಮಾರಾಟದಲ್ಲಿ ಹಾವು - ಏಣಿ ಆಟ ಮುಂದುವರಿದಿತ್ತು. ಮಾರ್ಚ್‌ನಲ್ಲಿ 3,105 ಯುನಿಟ್, ಫೆಬ್ರವರಿಯಲ್ಲಿ 1,878 ಯುನಿಟ್ ಮತ್ತು ಜನವರಿ ತಿಂಗಳಲ್ಲಿ 4,403 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು.

ಜನವರಿಯಿಂದ ಮಾರ್ಚ್‌ವರೆಗೆ 'ಮಾರುತಿ ಎಕ್ಸ್ಎಲ್6' ಕಾರಿನ ಮಾರಾಟದಲ್ಲಿ ನಾನಾ ಕಾರಣಗಳಿಗೆ ಏರಿಳಿತವನ್ನು ಕಾಣಲಾಗಿದೆ. ಆದರೆ, ಏಪ್ರಿಲ್‌ನಲ್ಲಿ ಮಾತ್ರ ಮಾರಾಟ ಸಂಖ್ಯೆ ದಿಢೀರನೇ ಅಧಿಕಗೊಂಡಿದೆ. ಈ ಎಂಪಿವಿ ಹೆಚ್ಚಿನ ಆಸನಗಳನ್ನು ಒಳಗೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯುತ್ತಿರುವುದರಿಂದ ಗ್ರಾಹಕರು ಕೂಡ ಇಷ್ಟಪಟ್ಟು ತೆಗೆದುಕೊಂಡಿದ್ದಾರೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

Maruti Suzuki XL6 Mpv April 2025 Sales Details

ಮಾರುತಿ ಸುಜುಕಿ ಎಕ್ಸ್ಎಲ್6 ವಿಶೇಷತೆಗಳೇನು..

ಈ ಎಂಪಿವಿ ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯಲಿದ್ದು, ಮಧ್ಯಮ ವರ್ಗದ ಜನರು ಕೂಡ ಸುಲಭವಾಗಿ ಖರೀದಿ ಮಾಡಬಹುದು. ಇದು ರೂ.11.84 ಲಕ್ಷದಿಂದ ರೂ.14.84 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಜಿಟಾ ಮತ್ತು ಆಲ್ಫಾ ಒಳಗೊಂಡಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ ಮಾರುತಿ ಎಕ್ಸ್ಎಲ್6 ಎಂಪಿವಿಯು 6 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಕುಳಿತುಕೊಂಡು ಓಡಾಟ ಮಾಡಬಹುದು. ದೂರದ ಊರುಗಳಿಗೆ ಹೆಚ್ಚಿನ ಲಗೇಜ್ ಸಾಗಿಸಲು 209 ಲೀ.ನ ಬೂಟ್ ಸ್ಪೇಸ್‌ನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ನೆಕ್ಸಾ ಬ್ಲೂ, ಒಪ್ಯುಲೆಂಟ್ ರೆಡ್, ಬ್ರೇವ್ ಖಾಖಿ, ಗ್ರ್ಯಾಂಡ್ಯೂರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಮತ್ತು ಆರ್ಕ್ಟಿಕ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Maruti Suzuki XL6 Mpv April 2025 Sales Details

ಹೊಸ ಎಕ್ಸ್ಎಲ್6 ಕಾರು 1.5-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 20 ರಿಂದ 26 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಕ್ರೂಸ್ ಕಂಟ್ರೋಲ್ ಹಾಗೂ ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಎಂಪಿವಿಯು ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ಸುರಕ್ಷತೆಯನ್ನು ಒದಗಿಸುತ್ತದೆ. ಬಹುಮುಖ್ಯವಾಗಿ 4 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್, ರೇರ್ ವೈಪರ್ ವಾಷರ್ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, May 25, 2025, 9:00 [IST]
English summary
Maruti suzuki xl6 mpv april 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+