26.32 ಕಿ.ಮೀ ಮೈಲೇಜ್.. 6-ಸೀಟರ್, 11 ಲಕ್ಷ.. ಈ ಜನಪ್ರಿಯ ಮಾರುತಿ ಎಂಪಿವಿಗೆ ಮನಸೋತ ಗ್ರಾಹಕರು!

ಮಾರುತಿ ಸುಜುಕಿ ಎಕ್ಸ್ಎಲ್6 (Maruti Suzuki XL6) ಜನಮೆಚ್ಚಿದ ಎಂಪಿವಿಯಾಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಆಗಸ್ಟ್ ತಿಂಗಳಲ್ಲೂ ಇದೇ 'ಎಕ್ಸ್ಎಲ್6' ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 2,973 ಯುನಿಟ್‌ಗಳನ್ನು ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 2,740 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 8.50% ಪ್ರಗತಿಯಾಗಿದೆ.

ಮಾರುತಿ ಸುಜುಕಿ ಎಕ್ಸ್ಎಲ್6 ವಿಶೇಷತೆಗಳೇನು:

ಈ ಎಂಪಿವಿಯು ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಿದ್ದು, ಎಲ್ಲ ವರ್ಗದ ಖರೀದಿದಾರರು ಸುಲಭವಾಗಿ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ಕನಿಷ್ಠ ರೂ.11.52 ಲಕ್ಷ ಹಾಗೂ ಗರಿಷ್ಠ ರೂ.14.48 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಜಿಟಾ, ಆಲ್ಫಾ ಮತ್ತು ಆಲ್ಫಾ ಪ್ಲಸ್ ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ.

Maruti Suzuki XL6 Mpv August 2025 Sales Report

ಇದು ಹೊರ ಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ನೆಕ್ಸಾ ಬ್ಲೂ, ಬ್ರೇವ್ ಖಾಕಿ, ಗ್ರ್ಯಾಂಡಿಯರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಹಾಗೂ ಪರ್ಲ್ ಮಿಡ್‌ನೈಟ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ನೂತನ ಮಾರುತಿ ಎಕ್ಸ್ಎಲ್6 ಎಂಪಿವಿ ವಿಶಾಲ ಗಾತ್ರದಲ್ಲಿದೆ. 4,445 ಎಂಎಂ ಉದ್ದ, 1775 ಎಂಎಂ ಅಗಲ ಹಾಗೂ 1755 ಎಂಎಂ ಎತ್ತರವಿದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2740 ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1,765 ಕೆಜಿ ತೂಕವಿದೆ.

Maruti Suzuki XL6 Mpv August 2025 Sales Report

ಈ ಕಾರು 6 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 318 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.5-ಲೀಟರ್ ಪೆಟ್ರೋಲ್ ಹಾಗೂ 1.5-ಲೀಟರ್ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದಂತೆ 20.97 ರಿಂದ 26.32 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 45 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ.

Maruti Suzuki XL6 Mpv August 2025 Sales Report

ಹೊಸ ಎಕ್ಸ್ಎಲ್6 ಎಂಪಿವಿ 170 ಕೆಎಂಪಿಎಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 12 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 6 ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಹಾಗೂ ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸಿತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಸೀಟ್ ಬೆಲ್ಟ್ ವಾರ್ನಿಂಗ್, ಕ್ರೂಸ್ ಕಂಟ್ರೋಲ್, ಹಿಲ್ ಹೋಲ್ಡ್ ಅಸಿಸ್ಟ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಇದಕ್ಕೆ ಟೊಯೊಟಾ ರೂಮಿಯನ್ & ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಎಂಪಿವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Monday, September 22, 2025, 19:12 [IST]
English summary
Maruti suzuki xl6 mpv august 2025 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+