6-ಸೀಟರ್.. 26 ಕಿ.ಮೀ ಮೈಲೇಜ್, 11.93 ಲಕ್ಷ.. ಈ ಜನಪ್ರಿಯ ಎಂಪಿವಿಯನ್ನು ಗ್ರಾಹಕರು ಹೆಚ್ಚು ಕೊಳ್ಳುತ್ತಿಲ್ಲ.. ಯಾಕೆ ಗೊತ್ತಾ?

ಮಾರುತಿ ಸುಜುಕಿ ಎಕ್ಸ್ಎಲ್6 (Maruti Suzuki XL6) ವಿಶ್ವಾಸಾರ್ಹ ಎಂಪಿವಿಯಾಗಿದೆ. ಇದನ್ನು ಪ್ರೀಮಿಯಂ ನೆಕ್ಸಾ ಡೀಲರ್‌ಶಿಪ್‌ ಮೂಲಕ ಮಾರಾಟಗೊಳಿಸಲಾಗುತ್ತದೆ. ಇದು ಆಕರ್ಷಕವಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಆದರೂ ಈ ಕಾರಿನ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಅದು ಈ ಜುಲೈ ತಿಂಗಳಲ್ಲೂ ಮುಂದಿವರಿದಿದೆ. ಒಟ್ಟು 2,146 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 26.58% ಇಳಿಕೆಯಾಗಿದೆ. 2024ರ ಇದೇ ಅವಧಿಯಲ್ಲಿ 2,923 ಯುನಿಟ್‌ಗಳನ್ನು ಮಾರಲಾಗಿತ್ತು.

ಈ ವರ್ಷದ ಫೆಬ್ರವರಿಯಿಂದ ಜೂನ್ ತಿಂಗಳವರೆಗೂ 'ಮಾರುತಿ ಸುಜುಕಿ ಎಕ್ಸ್ಎಲ್6' ಎಂಪಿವಿಯು ಸ್ಪರ್ಧಾತ್ಮಕ ಸಂಖ್ಯೆಯಲ್ಲಿಯೂ ಮಾರಾಟವಾಗಿದೆ. ಬರೋಬ್ಬರಿ 14,641 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಅಂಕಿ ಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಪ್ರತಿ ತಿಂಗಳು ಸರಾಸರಿ 2,928 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ.

Maruti Suzuki XL6 Mpv July 2025 Sales Report

ಮಾರುತಿ ಎಕ್ಸ್ಎಲ್6 ಕಾರಿನ ಮಾರಾಟ ಪ್ರಮಾಣವು ಕಡಿಮೆಯಾಗುತ್ತಿರುವುದಕ್ಕೆ ವಿವಿಧ ಕಾರಣಗಳನ್ನು ಪಟ್ಟಿ ಮಾಡಬಹುದು. ಬಹುಮುಖ್ಯವಾಗಿ ಈ ಕಾರಿನ ಬೆಲೆಕ್ಕಿಂತ ಅಗ್ಗದ ದರಕ್ಕೆ ಮಾರುತಿ ಸುಜುಕಿ ಎರ್ಟಿಗಾ, ಟೊಯೊಟಾ ರೂಮಿಯನ್ ಹಾಗೂ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಎಂಪಿವಿಗಳು ಖರೀದಿಗೆ ಲಭ್ಯವಿವೆ. ಖರೀದಿದಾರರು ಸಹ ಅವುಗಳನ್ನು ಕೊಂಡುಕೊಳ್ಳುವತ್ತ ಮನಸ್ಸು ಮಾಡುತ್ತಿದ್ದಾರೆ. ಹೀಗಾಗಿ 'ಎಕ್ಸ್ಎಲ್6' ಮಾರಾಟ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಮಾರುತಿ ಸುಜುಕಿ ಎಕ್ಸ್ಎಲ್6 ವಿಶೇಷತೆಗಳೇನು:

ಇದು ಕನಿಷ್ಠ ರೂ.11.93 ಲಕ್ಷ ಹಾಗೂ ರೂ.14.99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಖರೀದಿ ಮಾಡಬಹುದು. ಜೊತೆಗೆ ಜಿಟಾ, ಆಲ್ಫಾ ಹಾಗೂ ಆಲ್ಫಾ ಪ್ಲಸ್ ಎಂಬ ರೂಪಾಂತರಗಳೊಂದಿಗೂ (ವೇರಿಯೆಂಟ್) ದೊರೆಯುತ್ತದೆ.

Maruti Suzuki XL6 Mpv July 2025 Sales Report

ಈ ಎಂಪಿವಿಯು ಹೊರಭಾಗದಲ್ಲಿ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿದೆ. ನೆಕ್ಸಾ ಬ್ಲೂ, ಬ್ರೇವ್ ಖಾಕಿ, ಗ್ರ್ಯಾಂಡಿಯರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಮತ್ತು ಆರ್ಕ್ಟಿಕ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ನೂತನ ಎಕ್ಸ್ಎಲ್6 ಕಾರು 6 ಆಸನಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 318 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 4,445 ಎಂಎಂ ಉದ್ದ, 1775 ಎಂಎಂ ಅಗಲ & 1755 ಎಂಎಂ ಎತ್ತರವು ಇದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2740 ವೀಲ್‌ಬೇಸ್‌ನ್ನು ಒಳಗೊಂಡಿದೆ.

Maruti Suzuki XL6 Mpv July 2025 Sales Report

ಇದು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್/ಸಿಎನ್‌ಜಿ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 20 ರಿಂದ 26 ಕಿ.ಮೀ ವರೆಗೂ ಮೈಲೇಜ್ ನೀಡುತ್ತದೆ. 45 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ.

ಈ ಕಾರು 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 13 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಕ್ಯಾಬಿನ್ ಕೂಡ ಚೆನ್ನಾಗಿದೆ. 7-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 6-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು, ಪ್ಯಾಡಲ್ ಶಿಫ್ಟರ್ಸ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಹೊಸ ಎಕ್ಸ್ಎಲ್6 ಎಂಪಿವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಪಿ (ಎಲೆಕ್ಟ್ರಾನಿಕ್ - ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

More from DriveSpark

Article Published On: Tuesday, August 26, 2025, 7:30 [IST]
English summary
Maruti suzuki xl6 mpv july 2025 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+