26 Km ಮೈಲೇಜ್, 11 ಲಕ್ಷ.. 6 ಜನ ಹೋಗಬಹುದು.. Maruti XL6 ಖರೀದಿಸಲು ಗ್ರಾಹಕರು ನೋ.. ನೋ.. ಅಂತಾರೆ!
ಮಾರುತಿ ಸುಜುಕಿ ಎಕ್ಸ್ಎಲ್6 (Maruti Suzuki XL6) ಜನಪ್ರಿಯ ಎಂಪಿವಿಯಾಗಿದೆ. ಇದನ್ನು ನೆಕ್ಸಾ ಡೀಲರ್‌ಶಿಪ್ ಮೂಲಕ ಮಾರಾಟಗೊಳಿಸಲಾಗುತ್ತದೆ. ಈ ಕಾರು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಇದು ಫ್ಯಾಮಿಲಿ ಕಾರಾಗಿದ್ದರೂ ಮಾರಾಟ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಕುಸಿತವಾಗಿದೆ. ಈ ಮಾರ್ಚ್ ತಿಂಗಳಲ್ಲೂ ಅದು ಮುಂದುವರಿದಿದೆ.
ಕಳೆದ ತಿಂಗಳು (ಮಾರ್ಚ್-2025) ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್, ಬರೋಬ್ಬರಿ 3,105 ಯುನಿಟ್ 'ಎಕ್ಸ್ಎಲ್6' ಎಂಪಿವಿಗಳನ್ನು ಮಾರಾಟ ಮಾಡಿದೆ. 2024ರ ಇದೇ ಸಮಯದಲ್ಲಿ 4505 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಈ ಅಂಕಿಸಂಖ್ಯೆಗಳಿಗೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ -31% ಕುಸಿತವಾಗಿದೆ.

ಮಾರುತಿ ಸುಜುಕಿ ಎಕ್ಸ್ಎಲ್6 ಪ್ರಖ್ಯಾತ ಎಂಪಿವಿಯಾಗಿದ್ದರೂ ಮಾರಾಟ ಸಂಖ್ಯೆ ಇಳಿಮುಖವಾಗುತ್ತಿರುವ ಬಗ್ಗೆ ಕಂಪನಿಯು ಯಾವುದೇ ಸ್ಪಷ್ಟವಾದ ಕಾರಣವನ್ನು ಬಹಿರಂಗಪಡಿಸಲ್ಲ. ಆದರೂ ಈ ಕಾರು ಕೊಂಚ ಹೆಚ್ಚಿನ ಬೆಲೆಯನ್ನು ಹೊಂದಿದೆ. ಅದಕ್ಕಾಗಿ ಮಾರಾಟ ಸಂಖ್ಯೆಯ ಕುಸಿತವಾಗಿದೆ ಎಂದು ಹೇಳಲಾಗಿದೆ. ಈ ಏಪ್ರಿಲ್ ತಿಂಗಳು ಮಾರಾಟ ಪ್ರಮಾಣ ಸುಧಾರಿಸಿಕೊಳ್ಳುವ ನಿರೀಕ್ಷೆಯಿದೆ.
ಸದ್ಯ ಗ್ರಾಹಕರ ಖರೀದಿಗೆ ಲಭ್ಯವಿರುವ ಮಾರುತಿ ಸುಜುಕಿ ಎಕ್ಸ್ಎಲ್6 ಎಂಪಿವಿ ವಿಶೇಷತೆಗಳೇನು: ಈ ಕಾರು ಕನಿಷ್ಠ ರೂ.11.83 ಲಕ್ಷ ಹಾಗೂ ಗರಿಷ್ಠ ರೂ.14.83 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದರಲ್ಲಿ 6 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚರಿಸಬಹುದು. ದೂರದ ಊರುಗಳಿಗೆ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 209 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಈ ಕಾರು ಶಕ್ತಿಯುತವಾದ ಎರಡು ಪವರ್‌ಟ್ರೇನ್‌ನ್ನು ಪಡೆದಿದೆ. 1.5-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಜೊತೆಗೆ ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 20.27 ರಿಂದ 26.32 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ನೂತನ ಮಾರುತಿ ಎಕ್ಸ್ಎಲ್6 ಎಂಪಿವಿ ಜಿಟಾ, ಆಲ್ಫಾ & ಆಲ್ಫಾ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಇದರೊಟ್ಟಿಗೆ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ನೆಕ್ಸಾ ಬ್ಲೂ, ಒಪ್ಯುಲೆಂಟ್ ರೆಡ್, ಬ್ರೇವ್ ಖಾಖಿ, ಗ್ರ್ಯಾಂಡ್ಯೂರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್ ಮತ್ತು ಪರ್ಲ್ ಮಿಡ್ ನೈಟ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

ಹೊಸ ಎಕ್ಸ್ಎಲ್6 ಕಾರು 7-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಕ್ರೂಸ್ ಕಂಟ್ರೋಲ್ ಮತ್ತು ಆಟೋ ಎಸಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 4 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications