26 ಕಿ.ಮೀ ಮೈಲೇಜ್.. 6-ಸೀಟರ್, 11 ಲಕ್ಷ.. ಈ ಮಾರುತಿ ಕಾರಿನ ಖರೀದಿಗೆ ಮುಗಿಬಿದ್ದ ಗ್ರಾಹಕರು!

ಮಾರುತಿ ಸುಜುಕಿ ಎಕ್ಸ್ಎಲ್6 (Maruti Suzuki XL6) ಪ್ರಮುಖ ಎಂಪಿವಿಯಾಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಹಲವು ನವೀನ ವೈಶಿಷ್ಟ್ಯಗಳಿಗೆ ಸಾಕ್ಷಿಯಾಗಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಅಕ್ಟೋಬರ್ ತಿಂಗಳಲ್ಲೂ 'ಎಕ್ಸ್ಎಲ್6' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 3,611 ಯುನಿಟ್‌ಗಳನ್ನು ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 3,285 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 10% ಪ್ರಗತಿಯಾಗಿದೆ.

ಇದೇ ಅಕ್ಟೋಬರ್‌ನಲ್ಲಿ 'ಮಾರುತಿ ಎಕ್ಸ್ಎಲ್6' ಮಾರಾಟವು ಉತ್ತಮವಾಗಿರಲು ನಾನಾ ಕಾರಣಗಳಿವೆ. ಇದು ಹೆಚ್ಚಿನ ಆಸನಗಳನ್ನು ಹೊಂದಿದ್ದು, ಗ್ರಾಹಕರ ನೆಚ್ಚಿನ ಕಾರಾಗಿ ಹೊರಹೊಮ್ಮಿದೆ. ಸೆಪ್ಟೆಂಬರ್ 22 ರಿಂದ ಪರಿಷ್ಕೃತ ಜಿಎಸ್‌ಟಿ ದರಗಳು ಜಾರಿಗೊಂಡಿದ್ದು, ಈ ಎಂಪಿವಿಯ ಬೆಲೆಯು ದೊಡ್ಡ ಮಟ್ಟದಲ್ಲಿ ಇಳಿಕೆಯಾಗಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿಯೂ 'ಎಕ್ಸ್ಎಲ್6' ದೊಡ್ಡ ಪ್ರಮಾಣದಲ್ಲಿ ಮಾರಾಟವಾಗಿದೆ ಎಂಬುದು ನುರಿತವರ ಲೆಕ್ಕಾಚಾರವಾಗಿದೆ.

Maruti Suzuki XL6 MPV October 2025 Sales Report

ಮಾರುತಿ ಸುಜುಕಿ ಎಕ್ಸ್ಎಲ್6 ವಿಶೇಷತೆಗಳೇನು:

ಈ ಎಂಪಿವಿಯು ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಕನಿಷ್ಠ ರೂ.11.52 ಲಕ್ಷ ಹಾಗೂ ಗರಿಷ್ಠ ರೂ.14.48 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಮಧ್ಯಮ & ಶ್ರೀಮಂತ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಜಿಟಾ (Zeta), ಆಲ್ಫಾ (Alpha) ಮತ್ತು ಆಲ್ಫಾ ಪ್ಲಸ್ (Alpha Plus) ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ.

ಇದು ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಹೊಂದಿದೆ. ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರ್ಯಾಂಡಿಯರ್ ಗ್ರೇ, ಬ್ರೇವ್ ಖಾಕಿ, ಆಪ್ಯುಲೆಂಟ್ ರೆಡ್, ನೆಕ್ಸಾ ಬ್ಲೂ ಮತ್ತು ಪರ್ಲ್ ಮಿಡ್‌ನೈಟ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Maruti Suzuki XL6 MPV October 2025 Sales Report

ನೂತನ 'ಮಾರುತಿ ಎಕ್ಸ್ಎಲ್6' ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 4,445 ಮಿ.ಮೀ ಉದ್ದ, 1,775 ಮಿ.ಮೀ ಅಗಲ & 1,755 ಮಿ.ಮೀ ಎತ್ತರವಿದೆ. 180 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,740 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 1,765 ಕೆಜಿ ತೂಕವಿದೆ.

ಈ ಕಾರು ಹೆಚ್ಚು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.5-ಲೀ. ಪೆಟ್ರೋಲ್ ಮತ್ತು 1.5-ಲೀ. ಪೆಟ್ರೋಲ್ + ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ & 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 20 ರಿಂದ 26 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.

Maruti Suzuki XL6 MPV October 2025 Sales Report

ಇದರ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 6 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 318 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 7 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 6 ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಹಾಗೂ ಆಟೋ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಹೊಸ 'ಎಕ್ಸ್ಎಲ್6' ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ಇದಕ್ಕೆ ಕಿಯಾ ಕ್ಯಾರೆನ್ಸ್ & ಟೊಯೊಟಾ ರೂಮಿಯನ್ ಎಂಪಿವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Thursday, November 20, 2025, 17:01 [IST]
English summary
Maruti suzuki xl6 mpv october 2025 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+