26.32 Km ಮೈಲೇಜ್.. 6-ಸೀಟರ್, 11 ಲಕ್ಷ.. ಈ ಜನಪ್ರಿಯ ಮಾರುತಿ ಎಂಪಿವಿ ಕೊಳ್ಳಲು ಗ್ರಾಹಕರಿಗೆ ಮನಸಿಲ್ಲ, ಕಾರಣವೇನು?

ಮಾರುತಿ ಸುಜುಕಿ ಎಕ್ಸ್ಎಲ್6 (Maruti Suzuki XL6) ವಿಶ್ವಾಸಾರ್ಹ ಎಂಪಿವಿಯಾಗಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹೊಂದಿದ್ದು, ಹಲವು ನವೀನ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಆದರೂ ಈ ಸೆಪ್ಟೆಂಬರ್ ತಿಂಗಳು 'ಎಕ್ಸ್ಎಲ್6' ಕಾರಿನ ಮಾರಾಟ ಸಂಖ್ಯೆ ಕುಂಠಿತವಾಗಿದೆ. ಸರಿ ಸುಮಾರು 2,170 ಯುನಿಟ್‌ಗಳನ್ನು ಮಾತ್ರ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 3734 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 41.89% ಇಳಿಕೆಯಾಗಿದೆ.

'ಮಾರುತಿ ಎಕ್ಸ್ಎಲ್6' ಮಾರಾಟ ಸಂಖ್ಯೆ ಕುಸಿತವಾಗಲು ಹಲವು ಕಾರಣಗಳನ್ನು ಪಟ್ಟಿ ಮಾಡಬಹುದು. ಬಹುಮುಖ್ಯವಾಗಿ, ಇದೇ ಎಂಪಿವಿಯ ದರಕ್ಕೆ ಬೇರೆ ಕಂಪನಿಯ ಕಾರುಗಳು ಲಭ್ಯವಿವೆ. ಜೊತೆಗೆ ಸೆ.22 ರಿಂದ ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. ಆದರೆ, ಹಲವು ಗ್ರಾಹಕರಿಗೆ ಈ ಬಗ್ಗೆ ಗೊತ್ತಿರದ ಕಾರಣ, 'ಎಕ್ಸ್ಎಲ್' ಮಾರಾಟವು ಇಳಿಮುಖವಾಗಿದೆ ಎನ್ನಲಾಗಿದೆ.

Maruti Suzuki XL6 Mpv September 2025 Sales Details

'ಮಾರುತಿ ಸುಜುಕಿ ಎಕ್ಸ್ಎಲ್6' ವಿಶೇಷತೆಗಳೇನು:

ಇದು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.11.52 ಲಕ್ಷದಿಂದ ರೂ.14.48 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದ್ದು, ಮಧ್ಯಮ ವರ್ಗದವರು ಸಹ ಸುಲಭವಾಗಿ ಮನೆಗೆ ತರಬಹುದು. ಜಿಟಾ, ಆಲ್ಫಾ & ಆಲ್ಫಾ ಪ್ಲಸ್ ಎಂಬ ರೂಪಾಂತರಗಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ತನ್ನದಾಗಿಸಿಕೊಂಡಿದೆ. ನೆಕ್ಸಾ ಬ್ಲೂ, ಬ್ರೇವ್ ಖಾಕಿ, ಗ್ರ್ಯಾಂಡಿಯರ್ ಗ್ರೇ, ಮತ್ತು ಪರ್ಲ್ ಮಿಡ್‌ನೈಟ್ ಬ್ಲ್ಯಾಕ್ ಬಣ್ಣಗಳೊಂದಿಗೂ ಲಭ್ಯವಿದೆ.

Maruti Suzuki XL6 Mpv September 2025 Sales Details

ಹೊಚ್ಚ ಹೊಸ 'ಎಕ್ಸ್ಎಲ್6' ದೊಡ್ಡ ಗಾತ್ರದ ಕಾರಾಗಿದೆ. 180 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2,740 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 1,765 ಕೆಜಿ ತೂಕವಿದೆ. 6 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಜಾಸ್ತಿ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 318 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. ಈ ಕಾರಿನ 1.5-ಲೀ. ಪೆಟ್ರೋಲ್ ಎಂಜಿನ್, 102 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 137 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 20.27 ರಿಂದ 20.97 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

Maruti Suzuki XL6 Mpv September 2025 Sales Details

ಮತ್ತೊಂದು 1.5-ಲೀ. ಪೆಟ್ರೋಲ್ + ಸಿಎನ್‌ಜಿ ಎಂಜಿನ್, 87 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 121 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 26.32 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.

ಈ ಕಾರು ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ವಿಶೇಷವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7 ಇಂಚು), ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 6 ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋ ಎಸಿ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು & ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ನೂತನ 'ಮಾರುತಿ ಎಕ್ಸ್ಎಲ್6' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ - ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಕ್ರೂಸ್ ಕಂಟ್ರೋಲ್, ಹಿಲ್-ಹೋಲ್ಡ್ ಅಸಿಸ್ಟ್ & 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

More from DriveSpark

Article Published On: Sunday, October 19, 2025, 17:55 [IST]
English summary
Maruti suzuki xl6 mpv september 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+