Maruti Suzuki: 26 Km ಮೈಲೇಜ್.. 6 ಜನ ಹೋಗಬಹುದು, ಈ ಫ್ಯಾಮಿಲಿ ಕಾರಿನ ಬೆಲೆ ಏರಿಕೆ!
ಭಾರತದ ಪ್ರಖ್ಯಾತ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ಅರೆನಾ ಮತ್ತು ನೆಕ್ಸಾ ಶೋರೂಂ ಮೂಲಕ ವಿವಿಧ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಸದ್ಯ, ಕಂಪನಿಯು ಫೆಬ್ರವರಿ 1ಕ್ಕೆ ಜಾರಿಗೆ ಬರುವಂತೆ ಎಲ್ಲ ಕಾರುಗಳ ದರವನ್ನು ಕನಿಷ್ಠ ರೂ.1,500 ಹಾಗೂ ಗರಿಷ್ಠ ರೂ.32,500 ವರೆಗೆ ಬೆಲೆಯನ್ನು ಹೆಚ್ಚಿಸಿದೆ. ಈ ದರ ಏರಿಕೆಗೆ ಜನಪ್ರಿಯ ಎಕ್ಸ್ಎಲ್6 (XL6) ಎಂಪಿವಿಯೂ ಒಳಪಟ್ಟಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ಮಾರುತಿ ಸುಜುಕಿ ಎಕ್ಸ್ಎಲ್6 (Maruti Suzuki XL6) ಎಂಪಿವಿ ಬೆಲೆ ರೂ.10,000 ಅಧಿಕಗೊಂಡಿದೆ. ಈ ಮೂಲಕ ನೂತನ ಎಕ್ಸ್ಎಲ್6 ಕಾರು, ರೂ.11.71 ಲಕ್ಷದಿಂದ ರೂ.14.77 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ. ಜಿಟಾ, ಆಲ್ಫಾ ಮತ್ತು ಆಲ್ಫಾ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಖರೀದಿಗೆ ದೊರೆಯುತ್ತದೆ.

ಈ ಮಾರುತಿ ಎಕ್ಸ್ಎಲ್6 ಎಂಪಿವಿ ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ಇದು ನೋಡುಗರನ್ನು ಸೆಳೆಯುತ್ತದೆ. ಇದು ನೆಕ್ಸಾ ಬ್ಲೂ, ಒಪ್ಯುಲೆಂಟ್ ರೆಡ್, ಬ್ರೇವ್ ಖಾಕಿ, ಗ್ರ್ಯಾಂಡ್ಯೂರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಪರ್ಲ್ ಮಿಡ್ ನೈಟ್ ಬ್ಲ್ಯಾಕ್ ಸೇರಿದಂತೆ ಹಲವು ಬಣ್ಣಗಳನ್ನು ಒಳಗೊಂಡಿದೆ.
ನೂತನ ಮಾರುತಿ ಸುಜುಕಿ ಎಕ್ಸ್ಎಲ್6 ಕಾರು 6 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ಈ ಕಾರು ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಬರೋಬ್ಬರಿ 209 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ಹೊಸ ಮಾರುತಿ ಎಕ್ಸ್ಎಲ್6 ಎಂಪಿವಿ ಎರಡು ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. ಇದರ 1.5-ಲೀ. ಪೆಟ್ರೋಲ್ ಎಂಜಿನ್, 103 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 137 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ.
ಈ ಎಕ್ಸ್ಎಲ್6 ಕಾರಿನ ಸಿಎನ್‌ಜಿ ಚಾಲಿತ ಮಾಡೆಲ್ 88 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 121.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯಲ್ಲಿ ಮಾತ್ರ ಸಿಗುತ್ತದೆ. ಯಾವ ಬೈಕ್ಗೂ ಕಮ್ಮಿಯಿಲ್ಲದ ರೀತಿಯಲ್ಲಿ 20.27 ರಿಂದ 26.32 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಮಾರುತಿ ಸುಜುಕಿ ಎಕ್ಸ್ಎಲ್6 ಎಂಪಿವಿ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7-ಇಂಚು) , ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪ್ಯಾಡಲ್ ಶಿಫ್ಟರ್ಸ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಕ್ರೂಸ್ ಕಂಟ್ರೋಲ್, ಆಟೋ ಎಸಿ ಮತ್ತು 360-ಡಿಗ್ರಿ ಕ್ಯಾಮೆರಾ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 4 ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಅನ್ನು ಪಡೆದಿದೆ. ಈ ಎಂಪಿವಿಗೆ ಕಿಯಾ ಕ್ಯಾರೆನ್ಸ್, ಮಹೀಂದ್ರಾ ಮರಾಜ್ಜೊ, ಟೊಯೊಟಾ ಇನ್ನೋವಾ ಕ್ರಿಸ್ಟಾ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications