ಹೊಸ ಮಾರುತಿ SUV ಮಾರುಕಟ್ಟೆಯನ್ನು ಬೆಚ್ಚಿಬೀಳಿಸಿದೆ.. ಬರೀ 2 ತಿಂಗಳಲ್ಲಿ 30,000 ಕಾರುಗಳ ಡೆಲಿವರಿ! ಬೆಲೆ ಎಷ್ಟು?

ಸೆಪ್ಟೆಂಬರ್ 16 ರಿಂದ ಹೊಚ್ಚ ಹೊಸ ಮಾರುತಿ ವಿಕ್ಟೋರಿಸ್ (Maruti Victoris) ಎಸ್‌ಯುವಿಯನ್ನು ಬಿಡುಗಡೆಗೊಳಿಸಿತ್ತು. ಅದೇ ತಿಂಗಳ ಅಂತ್ಯದಲ್ಲಿ ವಿತರಣೆಯನ್ನು ಶುರು ಮಾಡಲಾಗಿತ್ತು. ಈ ಕಾರನ್ನು ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿಸುತ್ತಿದ್ದಾರೆ. ಕೇವಲ 2 ತಿಂಗಳಲ್ಲಿ ಅಂದರೆ ನವೆಂಬರ್‌ವರೆಗೆ 30,057 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಮೂಲಕ ಒಟ್ಟಾರೆ ಮಾರಾಟದಲ್ಲಿ ಉತ್ತಮವಾದ ಪ್ರಗತಿಯನ್ನು ಸಾಧಿಸಲಾಗಿದೆ.

ಸೆಪ್ಟೆಂಬರ್‌ನಲ್ಲಿ ಕೊನೆಯಲ್ಲಿ ನೂತನ 'ಮಾರುತಿ ಸುಜುಕಿ ವಿಕ್ಟೋರಿಸ್' ವಿತರಣೆಗಳು ಪ್ರಾರಂಭವಾಗಿದ್ದರೂ ಒಂದೆರೆಡು ದಿನಗಳಲ್ಲಿಯೇ 4,261 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಅಕ್ಟೋಬರ್‌ನಲ್ಲಿ 13,496 ಯುನಿಟ್‌ಗಳು ಮತ್ತು ನವೆಂಬರ್‌ನಲ್ಲಿ 12,300 ಯುನಿಟ್‌ಗಳನ್ನು ಯಶಸ್ವಿಯಾಗಿ ಮಾರಲಾಗಿದೆ.

Maruti Victoris 30 000 Units Sold In Just 2 Months After Launch Details

'ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ'ವನ್ನು ಹಿಂದಿಕ್ಕಿದೆ:

ಮಾರುತಿ ಗ್ರ್ಯಾಂಡ್ ವಿಟಾರಾವು ಜನಪ್ರಿಯ ಎಸ್‌ಯುವಿಯಾಗಿದೆ. ನವೆಂಬರ್ ತಿಂಗಳಲ್ಲಿ 11,339 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 10148 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಈ ಅಂಕಿಅಂಶವನ್ನು ವಿಶ್ಲೇಷಿಸಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 11.74% ಬೆಳವಣಿಗೆಯಾಗಿದೆ. ಆದರೂ ಮಾರಾಟ ಸಂಖ್ಯೆಯಲ್ಲಿ 'ವಿಕ್ಟೋರಿಸ್'ಗಿಂತ ಹಿಂದಿದೆ.

'ಮಾರುತಿ ವಿಕ್ಟೋರಿಸ್' ವಿಶೇಷತೆಗಳೇನು:

ಈ ಎಸ್‌ಯುವಿಯು ಸ್ಪರ್ಧಾತ್ಮಕ ಬೆಲೆಯಲ್ಲಿ ಸಿಗುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ ರೂ.10.50 ಲಕ್ಷದಿಂದ ರೂ.19.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಮೇಲ್ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಶಾರ್ಪ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಕನೆಕ್ಟ್ಡ್ ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಹೊಂದಿದೆ.

ಇದು ಹೆಚ್ಚು ವಿಶಾಲವಾಗಿದೆ. 210 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,600 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಎಟರ್ನಲ್ ಬ್ಲೂ, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ ಮತ್ತು ಮಿಸ್ಟಿಕ್ ಗ್ರೀನ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ಹೊಸ 'ವಿಕ್ಟೋರಿಸ್' ಸಾಕಷ್ಟು ಬಲಿಷ್ಠವಾದ 3 ಪವರ್‌ಟ್ರೇನ್‌ನ್ನು ಪಡೆದಿದೆ. 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 21.06 ರಿಂದ 28.65 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 135 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 14 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 373 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪನೋರಮಿಕ್ ಸನ್‌ರೂಫ್, 64 ಕಲರ್ ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಆಟೋ ಎಸಿವನ್ನು ಹೊಂದಿದೆ.

ನೂತನ 'ಮಾರುತಿ ವಿಕ್ಟೋರಿಸ್' ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಇದಕ್ಕೆ ಸಾಲು - ಸಾಲು ಎದುರಾಳಿಗಳಾಗಿವೆ. ಟೊಯೋಟಾ ಅರ್ಬನ್ ಕ್ರೂಸರ್ ಹೈರಿಡರ್ (Toyota Urban Cruiser Hyryder), ಹ್ಯುಂಡೈ ಕ್ರೆಟಾ (Hyundai Creta) ಹಾಗೂ ಟಾಟಾ ಹ್ಯಾರಿಯರ್ (Tata Harrier) ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Monday, December 15, 2025, 23:06 [IST]
English summary
Maruti victoris 30000 units sold in just 2 months after launch details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+