28.65 Km ಮೈಲೇಜ್.. ಈ ಹೊಸ ಮಾರುತಿ ಕಾರು ಖರೀದಿಸಬೇಕೇ, ಆನ್-ರೋಡ್ ದರವೆಷ್ಟು.. ತಿಂಗಳ EMI ಏನು?
ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris) ಪ್ರಮುಖ ಎಸ್‌ಯುವಿಯಾಗಿದೆ. ಈ ಕಾರನ್ನು ಅರೆನಾ ಡೀಲರ್‌ಶಿಪ್ ಮೂಲಕ ಮಾರಾಟಗೊಳಿಸಲಾಗುತ್ತದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ರೂ.10.50 ಲಕ್ಷದಿಂದ ರೂ.19.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ 'ವಿಕ್ಟೋರಿಸ್' ಅತ್ಯುತ್ತಮವಾದ ಆಯ್ಕೆಯಾಗಲಿದೆ. ಬನ್ನಿ, ಈ ಎಸ್‌ಯುವಿಯ ಆನ್-ರೋಡ್ ಬೆಲೆ ಎಷ್ಟು.. ಇಎಂಐ ಏನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ನೂತನ 'ಮಾರುತಿ ವಿಕ್ಟೋರಿಸ್' ಹಲವು ವಿಧದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದರ ಎಲ್ಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.12.17 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.9.17 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ರೂ.18,500 ವರೆಗೆ ಇಎಂಐ ಕಟ್ಟಬೇಕು.

ಇನ್ನೊಂದು ವಿಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.13.66 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.10.66 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಗಳಿಗೆ ತಿಂಗಳಿಗೆ ರೂ.22,500 ವರೆಗೆ ಇಎಂಐ ಪಾವತಿ ಮಾಡಬೇಕು.
ಮತ್ತೊಂದು ಜಡ್ಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.15.69 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ತೆಗೆದುಕೊಂಡರೆ, ರೂ.12.69 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ಮಾಸಿಕ ರೂ.25,700 ವರೆಗೆ ಇಎಂಐ ಕಟ್ಟಬೇಕು.
ಇದೇ ಕಾರಿನ ವಿಎಕ್ಸ್ಐ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್) ರೂಪಾಂತರ, ರೂ.18.91 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಕೊಂಡುಕೊಂಡರೆ, ರೂ.15.91 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಗಳಿಗೆ ತಿಂಗಳಿಗೆ ರೂ.32,000 ವರೆಗೆ ಇಎಂಐ ಪಾವತಿಸಬೇಕು.
ಈ ವಿಕ್ಟೋರಿಸ್ ಎಸ್‌ಯುವಿಯ ಜಡ್ಎಕ್ಸ್ಐ (ಒ) ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್) ರೂಪಾಂತರ, ರೂ.21.22 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಖರೀದಿ ಮಾಡಿದರೆ, ರೂ.18.22 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ಮಾಸಿಕ ರೂ.36,700 ವರೆಗೆ ಇಎಂಐ ಕಟ್ಟಬೇಕು.
ಹಾಗೆಯೇ ಎಲ್ಎಕ್ಸ್ಐ (ಸಿಎನ್‌ಜಿ) ರೂಪಾಂತರ, ರೂ.13.31 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.10.31 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಗಳಿಗೆ ತಿಂಗಳಿಗೆ ರೂ.21,000 ವರೆಗೆ ಇಎಂಐ ಪಾವತಿ ಮಾಡಬೇಕು.
'ಮಾರುತಿ ಸುಜುಕಿ ವಿಕ್ಟೋರಿಸ್' ವಿಶೇಷತೆಗಳೇನು:
ಇದು 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ 1.5-ಲೀಟರ್ ಪೆಟ್ರೋಲ್+ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 21 ರಿಂದ 29 ಕಿ.ಮೀವರಗೆ ಮೈಲೇಜ್ ಕೊಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 14.17 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 5 ಆಸನಗಳನ್ನು ಹೊಂದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 373 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ.
ಈ ಕಾರು ಸಿಜ್ಲಿಂಗ್ ರೆಡ್, ಮಿಸ್ಟಿಕ್ ಗ್ರೀನ್, ಬ್ಲ್ಯೂಯಿಸ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಹಾಗೂ ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ನಿಮ್ಮ ಗಮನಕ್ಕೆ.. ನೂತನ 'ವಿಕ್ಟೋರಿಸ್'ನ ಕೆಲವೇ ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








