34 Km ಮೈಲೇಜ್, 4.99 ಲಕ್ಷ.. ಹೊಸ Maruti WagonR ಖರೀದಿಸಬೇಕೇ.. 1 ಲಕ್ಷ Down-Payment ಪಾವತಿಸಿದರೆ, ತಿಂಗಳ EMI ಎಷ್ಟು?
ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದೆ. ಇದು ಪ್ರತಿ ತಿಂಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ರೂ.4.99 ಲಕ್ಷದಿಂದ ರೂ.6.95 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಕೊಂಡುಕೊಳ್ಳಲು ಆಲೋಚಿದ್ದೀರಾ.. ಹಾಗಾದರೆ 'ವ್ಯಾಗನ್ಆರ್' ಅತ್ಯುತ್ತಮ ಆಯ್ಕೆಯಾಗಿದೆ. ಇಲ್ಲಿ ಈ ಹ್ಯಾಚ್‌ಬ್ಯಾಕ್‌ನ ಆನ್-ರೋಡ್ ಬೆಲೆ, ಸಾಲ, ಬಡ್ಡಿ ದರ ಮತ್ತು ತಿಂಗಳ ಇಎಂಐ ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ನೂತನ 'ಮಾರುತಿ ವ್ಯಾಗನ್ಆರ್' ಹಲವು ವಿಧದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದರ ಎಲ್ಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.5.84 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.1 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಮನೆಗೆ ತಂದರೆ, ರೂ.4.84 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.10,000 ವರೆಗೆ ಇಎಂಐ ಕಟ್ಟಬೇಕು.

ಇನ್ನೊಂದು ವಿಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.6.51 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.1 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಖರೀದಿ ಮಾಡಿದರೆ, ರೂ.5.51 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.11,000 ವರೆಗೆ ಇಎಂಐ ಪಾವತಿ ಮಾಡಬೇಕು.
ಮತ್ತೊಂದು ಝಡ್ಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.7.08 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.1 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ತೆಗೆದುಕೊಂಡರೆ, ರೂ.6.08 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.12,000 ವರೆಗೆ ಇಎಂಐ ಕಟ್ಟಬೇಕು.

ಇದೇ ಕಾರಿನ ವಿಎಕ್ಸ್ಐ (ಸಿಎನ್‌ಜಿ) ರೂಪಾಂತರ, ರೂ.7.56 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ರೂ.1 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಕೊಂಡುಕೊಂಡರೆ, ರೂ.6.56 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.13,000 ವರೆಗೆ ಇಎಂಐ ಪಾವತಿಸಬೇಕು.
'ಮಾರುತಿ ವ್ಯಾಗನ್ಆರ್' ವಿಶೇಷತೆಗಳೇನು:
ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಸಾಲಿಡ್ ವೈಟ್, ಪೂಲ್‌ಸೈಡ್ ಬ್ಲೂ, ಸಿಲ್ಕಿ ಸಿಲ್ವರ್, ಮಿಡ್‌ನೈಟ್ ಬ್ಲ್ಯಾಕ್ ಮತ್ತು ಪ್ರೈಮ್ ಗ್ಯಾಲಂಟ್ ರೆಡ್ ಸೇರಿದಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,435 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಸರಿ ಸುಮಾರು 850 ಕೆಜಿ ತೂಕವಿದೆ.

ನೂತನ 'ವ್ಯಾಗನ್ಆರ್' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1-ಲೀ. ಪೆಟ್ರೋಲ್, 1.2-ಲೀ. ಪೆಟ್ರೋಲ್ ಹಾಗೂ 1-ಲೀ. ಪೆಟ್ರೋಲ್+ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 23 ರಿಂದ 34 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 32 ಲೀ. ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ. 140 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.
ಇದು 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಸಂಚಾರ ಮಾಡಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7 ಇಂಚು), ಕೀಲೆಸ್ ಎಂಟ್ರಿ, ಪವರ್ ವಿಂಡೋಗಳು, ಐಡಲ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ ಹಾಗೂ ಸ್ಟೀರಿಂಗ್ ಮೌಂಟೆಡ್ ಕಂಟೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಸೀಟ್ ಬೆಲ್ಟ್ ವಾರ್ನಿಂಗ್ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.
ಗಮನಿಸಿ: ನಾವಿಲ್ಲಿ ಈ ಕಾರಿನ ಕೆಲವೇ ರೂಪಾಂತರಗಳ (ವೇರಿಯೆಂಟ್) ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








