ಹ್ಯುಂಡೈ ಕ್ರೆಟಾ ಪ್ರತಿಸ್ಪರ್ಧಿ.. ಸದ್ದಿಲ್ಲದೇ ಈ ಎಂಜಿ ಕಾರಿನ ಬೆಲೆ ಏರಿಕೆ, ಎಷ್ಟಾಗಿದೆ?

ಎಂಜಿ ಆಸ್ಟರ್ (MG Astor) ವಿಶ್ವಾಸಾರ್ಹ ಎಸ್‌ಯುವಿಯಾಗಿದೆ. ಇದು ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ಹಲವು ನವೀನ ಶೈಲಿಯ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಈ ವರ್ಷದ ಮೊದಲಾರ್ಧದಲ್ಲಿ ಒಟ್ಟು 921 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಸದ್ಯ, ಇದೇ ಈ ಕಾರಿನ ದರವನ್ನು ಪರಿಷ್ಕರಣೆ ಮಾಡಲಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ನೂತನ 'ಎಂಜಿ ಆಸ್ಟರ್' ಎಸ್‌ಯುವಿ ಬೆಲೆ ಸ್ವಲ್ಪ ಮಟ್ಟಿಗೆ ಹೆಚ್ಚಳವಾಗಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ರೂ.19,000 ವರೆಗೆ ಅಧಿಕಗೊಂಡಿದೆ. ಇನ್ಮುಂದೆ ಈ ಕಾರು, ಕನಿಷ್ಠ ರೂ.10.82 ಲಕ್ಷ ಹಾಗೂ ಗರಿಷ್ಠ ರೂ.18.69 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗಲಿದೆ.

MG Astor Suv Price Hike Details

ಎಂಜಿ ಆಸ್ಟರ್ ವಿಶೇಷತೆಗಳೇನು:

ಇದು ಸ್ಪ್ರಿಂಟ್, ಶೈನ್, ಸೆಲೆಕ್ಟ್, ಶಾರ್ಪ್ ಪ್ರೊ ಹಾಗೂ ಸ್ಯಾವಿ ಪ್ರೊ ಎಂಬ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 17 ಇಂಚಿನ ಡುಯಲ್ - ಟೋನ್ ವೀಲ್‌ಗಳನ್ನು ತನ್ನದಾಗಿಸಿಕೊಂಡಿದೆ.

ಈ ಕಾರು ಕ್ಯಾಂಡಿ ವೈಟ್, ಹವಾನಾ ಗ್ರೇ, ಅರೋರಾ ಸಿಲ್ವರ್, ಗ್ಲೇಜ್ ರೆಡ್ ಹಾಗೂ ಸ್ಟಾರಿ ಬ್ಲ್ಯಾಕ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ. ಜೊತೆಗೆ 4323 ಎಂಎಂ ಉದ್ದ, 1809 ಎಂಎಂ ಅಗಲ ಮತ್ತು 1650 ಎಂಎಂ ಎತ್ತರವು ಇದೆ. 200 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2585 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ನೂತನ ಆಸ್ಟರ್ ಎಸ್‌ಯುವಿಯು ಬಲಿಷ್ಠವಾದ 2 ಪವರ್‌ಟ್ರೇನ್‌ನ್ನು ಹೊಂದಿದೆ. 1.5 ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.3 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 15 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

ಹೊಸ ಆಸ್ಟರ್ ಕಾರು 5 - ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 448 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 37 - ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ.

ಇದರ ಕ್ಯಾಬಿನ್ ವಿನ್ಯಾಸವು ತುಂಬಾ ಅಚ್ಚುಕಟ್ಟಾಗಿದೆ. 10.1 ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7 ಇಂಚಿರುವ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪನೋರಮಿಕ್ ಸನ್‌ರೂಫ್, 6-ಸ್ಪೀಕರ್ ಸೌಂಡ್ ಸಿಸ್ಟಮ್‌, ವೆಂಟಿಲೇಟೆಡ್ ಸೀಟ್‌ಗಳು, ಹೈಟ್ ಅಡ್ಜಸ್ಟೇಬಲ್ ಡ್ರೈವರ್ ಸೀಟ್, ರೇರ್ - ಎಸಿ ವೆಂಟ್‌ಗಳು, ಅಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಏರ್ ಪ್ಯೂರಿಫೈಯರ್ ಸಿಸ್ಟಮ್ ಹಾಗೂ ಆಟೋಮೆಟಿಕ್ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ನೂತನ ಎಂಜಿ ಆಸ್ಟರ್ ಎಸ್‌ಯುವಿ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) 360-ಡಿಗ್ರಿ ಕ್ಯಾಮೆರಾ, ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ಇದಕ್ಕೆ ಹ್ಯುಂಡೈ ಕ್ರೆಟಾ, ಮಾರುತಿ ಗ್ರ್ಯಾಂಡ್ ವಿಟಾರಾ, ಟೊಯೊಟಾ ಹೈರೈಡರ್, ಕಿಯಾ ಸೆಲ್ಟೋಸ್ & ಹೋಂಡಾ ಎಲಿವೇಟ್ ಕಾರುಗಳು ಪ್ರಬಲವಾದ ಎದುರಾಳಿಯಾಗಿವೆ.

More from DriveSpark

Article Published On: Tuesday, July 29, 2025, 15:58 [IST]
English summary
MG Motor India has adjusted the prices of the Astor SUV, which now range from ₹10.82 lakh to ₹18.69 lakh (ex-showroom). The increase of ₹9,000 to ₹19,000 comes amid positive market response and demand for the vehicle.
Read more on mg motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+