ಜಿಂದಾಲ್ - ಎಂಜಿ ರಣತಂತ್ರ: ಕಾಮೆಟ್ ಇವಿಯ ಬ್ಲಾಕ್‌ಸ್ಟಾರ್ಮ್ ಎಡಿಷನ್ ಬಿಡುಗಡೆ.. 4-ಸೀಟರ್, ಅತಿಕಡಿಮೆ ಬೆಲೆ!
ಭಾರತದಲ್ಲಿ ಎಂಜಿ ಮೋಟಾರ್ ಹಾಗೂ ಜೆಎಸ್‌ಡಬ್ಲ್ಯೂ (ಜಿಂದಾಲ್) ಕಂಪನಿಗಳು ವ್ಯಾಪಾರ ಪಾಲುದಾರಿಕೆಯನ್ನು ಹೊಂದಿವೆ. ಈ ಕಂಪನಿಗಳ ಒಡಂಬಡಿಕೆಯ ಭಾಗವಾಗಿ ದೇಶೀಯ ಮಾರುಕಟ್ಟೆಯಲ್ಲಿ ಕಾಮೆಟ್ ಇವಿ ಮತ್ತು ವಿಂಡ್ಸರ್ ಇವಿ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟಗೊಳಿಸಲಾಗುತ್ತಿದೆ. ಈ ಕಾರುಗಳನ್ನು ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಸದ್ಯ, ಕಂಪನಿಯು ಮಧ್ಯಮ ವರ್ಗದ ಜನರಿಗಾಗಿ ಕಾಮೆಟ್ ಇವಿಯ 'ಬ್ಲಾಕ್‌ಸ್ಟಾರ್ಮ್ ಎಡಿಷನ್'ನ್ನು ಪರಿಚಯಿಸಿದೆ. ಬನ್ನಿ.. ಈ ನೂತನ ಎಲೆಕ್ಟ್ರಿಕ್ ಕಾರಿನ ವಿಶೇಷತೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.
ಎಂಜಿ ಕಾಮೆಟ್ ಇವಿ ಬ್ಲಾಕ್‌ಸ್ಟಾರ್ಮ್ ಎಡಿಷನ್ (MG Comet EV Blackstorm Edition) ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಮಾರಾಟಕ್ಕೆ ಬಂದಿದೆ. ಇದು ರೂ.7.8 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. ಆದರೂ ಗರಿಷ್ಠ ಶ್ರೇಣಿ ಮಾದರಿ (ಟಾಪ್ ಎಂಡ್ ಮಾಡೆಲ್) 'ಎಕ್ಸ್‌ಕ್ಲೂಸಿವ್'ಗಿಂತ ರೂ.30,000 ಅಧಿಕ ದರವನ್ನು ಹೊಂದಿದೆ. ಈ ಎಲೆಕ್ಟ್ರಿಕ್ ಕಾರಿನ ಬ್ಯಾಟರಿಗೆ ಬಾಡಿಗೆಯನ್ನು ಪಾವತಿಸಬೇಕಾಗಿದ್ದು, ಅದು ರೂ.2.5 ರಿಂದ ಶುರುವಾಗುತ್ತದೆ.

ನೂತನ ಎಂಜಿ ಕಾಮೆಟ್ ಇವಿ ಬ್ಲಾಕ್‌ಸ್ಟಾರ್ಮ್ ಎಡಿಷನ್, ಸಾಮಾನ್ಯ ಕಾಮೆಟ್ ಇವಿಗೆ ಹೋಲಿಕೆ ಮಾಡಿದರೆ, ಕೆಲವೊಂದು ಕಾಸ್ಮೆಟಿಕ್ ಬದಲಾವಣೆಗಳನ್ನು ಪಡೆದುಕೊಂಡಿದೆ. ಈ ಹೊಸ ಕಾರಿನ ಹೊರಭಾಗದಲ್ಲಿ ರೆಡ್ ಕಲರ್ (ಕೆಂಪು ಬಣ್ಣ) ಅಕ್ಸೆಂಟ್‌ಗಳು & ಗ್ರಾಫಿಕ್ಸ್‌ನೊಂದಿಗೆ ಸ್ಟಾರಿ ಬ್ಲ್ಯಾಕ್ ಕಲರ್‌ನ್ನು ಬಳಿಯಲಾಗಿದೆ. ಅದೇ ರೀತಿಯಲ್ಲಿ ಒಳಭಾಗವು ಬ್ಲ್ಯಾಕ್ ಕಲರ್‌ನ್ನೇ ಹೈಲೈಟ್ ಮಾಡಲಾಗಿದೆ.
ಈ ಕಾರಿನ ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳಲ್ಲಿಯೂ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಇದು 17.3 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 230 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 42 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 110 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಎಂಜಿ ಕಾಮೆಟ್ ಇವಿ 2 ಡೋರ್‌ಗಳನ್ನು ಪಡೆದಿದೆ. ಇದರೊಟ್ಟಿಗೆ 4 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚರಿಸಬಹುದು. ಇದು ಚಿಕ್ಕದಾಗಿರುವ ಕಾರಾಗಿರುವುದರಿಂದ ಸುಲಭವಾಗಿ ಪಾರ್ಕಿಂಗ್ ಮಾಡಬಹುದು. ಈ ಕಾರಿನ ಬ್ಯಾಟರಿಯು 3.3 ಕೆಡಬ್ಲ್ಯೂ ಚಾರ್ಜರ್‌ನ್ನು ಉಪಯೋಗಿಸಿದಾಗ 0 ರಿಂದ 100% ಚಾರ್ಜ್ ಆಗಲು ಬರೋಬ್ಬರಿ 7 ಗಂಟೆ ಬೇಕಾಗುತ್ತದೆ.
ಈ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ 10.25-ಇಂಚಿನ ಸ್ಕ್ರೀನ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 55ಕ್ಕೂ ಹೆಚ್ಚು ಕನೆಕ್ಟ್ಡ್ ಕಾರ್ ಟೆಕ್ ಹಾಗೂ ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಎಂಜಿ ಕಾಮೆಟ್ ಇವಿ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ರೇರ್ ಪಾರ್ಕಿಂಗ್ ಸೆನ್ಸರ್ಸ್ ಹೋಲ್ಡ್ ಅಸಿಸ್ಟ್ ಹಾಗೂ ರೇರ್ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ಈ ಕಾರಿಗೆ ಟಾಟಾ ಟಿಯಾಗೊ ಇವಿ & ಸಿಟ್ರನ್ ಇಸಿ3 ಮಾಡೆಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








