ಜಿಂದಾಲ್ - ಎಂಜಿ ರಣತಂತ್ರ: ವಿಮಾನದಂತಿರುವ ಹೊಸ ಸೈಬರ್‌ಸ್ಟರ್ ಎಲೆಕ್ಟ್ರಿಕ್ ಕಾರು ಪ್ರದರ್ಶನ.. ಹೇಗಿದೆ?

ಭಾರತದಲ್ಲಿ ಜಿಂದಾಲ್ ಹಾಗೂ ಎಂಜಿ ಮೋಟಾರ್ಸ್ ವ್ಯಾಪಾರ ಪಾಲುದಾರಿಕೆ ಹೊಂದಿವೆ. ಅದರ ಭಾಗವಾಗಿ ದೇಶೀಯ ಮಾರುಕಟ್ಟೆಯಲ್ಲಿ ಎಂಜಿ ಕಂಪನಿಯು ವಿವಿಧ ಹೊಸ ಕಾರುಗಳನ್ನು ಹೊರತರುತ್ತಿದೆ. ನವದೆಹಲಿಯಲ್ಲಿ ನಡೆಯುತ್ತಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ನೂತನ ಸೈಬರ್‌ಸ್ಟರ್ ಎಲೆಕ್ಟ್ರಿಕ್ ಸೆಡಾನ್‌ನ್ನು ಪ್ರದರ್ಶನ ಮಾಡಿದೆ. ಈ ಕಾರು ಸಾಕಷ್ಟು ಆಕರ್ಷಕವಾಗಿದ್ದು, ಮುಂಬರುವ ತಿಂಗಳಲ್ಲಿ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ.

ಎಕ್ಸ್‌ಪೋದಲ್ಲಿ ಪ್ರದರ್ಶಿಸಲಾಗಿರುವ ನೂತನ ಎಂಜಿ ಸೈಬರ್‌ಸ್ಟರ್ (MG Cyberster) ಸೆಡಾನ್ ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಬ್ಲಾಂಕ್ಡ್-ಆಫ್ ಗ್ರಿಲ್, ಬಟರ್‌ಫ್ಲೈ ಡೋರ್‌ಗಳು, ಡುಯಲ್ ಟೋನ್ ಅಲಾಯ್ ವೀಲ್‌ಗಳು, ವಿಡ್ತ್ ಡಿಫ್ಯೂಸರ್, ಎಲ್‌ಇಡಿ ಲೈಟ್ ಬಾರ್, ಟರ್ನ್ ಇಂಡಿಕೇಟರ್ಸ್, ಕನ್ವರ್ಟಿಬಲ್ ಸಾಫ್ಟ್-ಟಾಪ್ ಅನ್ನು ಹೊಂದಿದೆ.

MG Cyberster EV Unveiled At Auto Expo Details

ಹೊಚ್ಚ ಹೊಸ ಎಂಜಿ ಸೈಬರ್‌ಸ್ಟರ್ ಎಲೆಕ್ಟ್ರಿಕ್ ಸೆಡಾನ್ ಕಾರ್ಯಕ್ಷಮತೆ ಕುರಿತಂತೆ ಸ್ಪಷ್ಟವಾದ ವಿವರಗಳು ಲಭ್ಯವಾಗಿಲ್ಲ. ಈ ಕಾರು, 77 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿರಲಿದೆ. ಇದರಲ್ಲಿ 2-ಎಲೆಕ್ಟ್ರಿಕ್ ಮೋಟಾರ್ ಬಳಕೆ ಮಾಡಲಾಗಿದ್ದು, 510 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 725 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ ಎನ್ನಲಾಗಿದೆ.

ಈ ಸೈಬರ್‌ಸ್ಟರ್ ಎಲೆಕ್ಟ್ರಿಕ್ ಕಾರು ಭರ್ತಿ ಚಾರ್ಜ್‌ನಲ್ಲಿ 510 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ ಎಂದು ಅಂದಾಜಿಸಲಾಗಿದೆ. ಕೇವಲ 3.2 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಜೊತೆಗೆ 2 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು.

MG Cyberster EV Unveiled At Auto Expo Details

ನೂತನ ಕಾರು, ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವ ಸಾಧ್ಯತೆಯೂ ಹೆಚ್ಚಿದೆ. ಇದು ಡ್ರೈವರ್ ಡಿಸ್‌ಪ್ಲೇಗಾಗಿ ಡುಯಲ್ ಸ್ಕ್ರೀನ್‌ಗಳು, 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಮಲ್ಟಿ ಸ್ಪೋಕ್ ಫ್ಲಾಟ್ ಬಾಟಮ್ ಸ್ಟೀರಿಂಗ್ ವೀಲ್ ಮತ್ತು ಪ್ಯಾಡಲ್ ಶಿಫ್ಟರ್‌ಗಳನ್ನು ಹೊಂದಿರುವುದು ಬಹುತೇಕ ಖಚಿತವಾಗಿದೆ.

ಹೊಸ ಎಂಜಿ ಸೈಬರ್‌ಸ್ಟರ್ ಎಲೆಕ್ಟ್ರಿಕ್ ಸೆಡಾನ್ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುವ ನಿರೀಕ್ಷೆಯಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಸೇರಿದಂತೆ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ ಎನ್ನಲಾಗಿದೆ.

MG Cyberster EV Unveiled At Auto Expo Details

ನೂತನ ಎಂಜಿ ಸೈಬರ್‌ಸ್ಟರ್ ಎಲೆಕ್ಟ್ರಿಕ್ ಸೆಡಾನ್ ಕೊಂಚ ದುಬಾರಿ ಬೆಲೆಯನ್ನು ಹೊಂದಿರಲಿದೆ. ಇದು ರೂ.60 ಲಕ್ಷದಿಂದ ರೂ.70 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಈ ಕಾರು ಅತಿ ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ. ದೇಶೀಯ ಮಾರುಕಟ್ಟೆಯಲ್ಲಿ ಹೊಸ ಸೈಬರ್‌ಸ್ಟರ್ ಕಾರಿಗೆ ಬಿಎಂಡಬ್ಲ್ಯೂ ಝಡ್4 (BMW Z4) ಪ್ರಬಲವಾದ ಎದುರಾಳಿಯಾಗಲಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Sunday, January 19, 2025, 10:52 [IST]
English summary
Mg cyberster ev unveiled at auto expo details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+