ನಿನ್ನೆ ಬಿಡುಗಡೆ: 11.99 ಲಕ್ಷ.. 5 & 7-ಸೀಟರ್.. ಹೊಸ ಎಂಜಿ ಕಾರಿನ ಆನ್-ರೋಡ್ ದರವೆಷ್ಟು.. EMI ಏನು?
ನೂತನ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್ (MG Hector Facelift) ಕಾರು ಸೋಮವಾರ ಬಿಡುಗಡೆಗೊಂಡಿದೆ. ಇದೊಂದು ಎಸ್‌ಯುವಿಯಾಗಿದೆ. ಕನಿಷ್ಠ ರೂ.11.99 ಲಕ್ಷ ಹಾಗೂ ಗರಿಷ್ಠ ರೂ.19.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅದಕ್ಕೆ ತಕ್ಕಂತೆ ಉತ್ತಮವಾದ ವಿನ್ಯಾಸವನ್ನು ಹೊಂದಿದ್ದು, ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ನೀವು ಈ ಕಾರನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಇಲ್ಲಿ ನಿರೀಕ್ಷಿತ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಈ ಕಾರು ಹಲವು ವಿಧದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಇದರ 'ಸ್ಟೈಲ್' 5-ಸೀಟರ್ ರೂಪಾಂತರ, ರೂ.14.72 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.9.72 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ದಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.20,000 ವರೆಗೆ ಇಎಂಐ ಕಟ್ಟಬೇಕು.

ಮತ್ತೊಂದು 'ಸೆಲೆಕ್ಟ್ ಪ್ರೊ' 5-ಸೀಟರ್ ರೂಪಾಂತರ, ರೂ.17.15 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.12.15 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ದಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.25,000 ವರೆಗೆ ಇಎಂಐ ಪಾವತಿಸಬೇಕು.
ಇನ್ನೊಂದು 'ಶಾರ್ಪ್ ಪ್ರೊ' 7-ಸೀಟರ್ ರೂಪಾಂತರ, ರೂ. 21.17 ಲಕ್ಷವರೆಗೆ ಆನ್-ರೋಡ್ ದರವನ್ನು ಒಳಗೊಂಡಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ತೆಗೆದುಕೊಂಡರೆ, ರೂ.16.17 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ದಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.33,000 ವರೆಗೆ ಇಎಂಐ ಕಟ್ಟಬೇಕು.
ಇದೇ ಕಾರಿನ 'ಸವಿ ಪ್ರೊ' 7-ಸೀಟರ್ ಸಿವಿಟಿ ರೂಪಾಂತರ, ರೂ.23.84 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಖರೀದಿಸಿದರೆ, ರೂ.18.84 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ದಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.38,000 ವರೆಗೆ ಇಎಂಐ ಪಾವತಿ ಮಾಡಬೇಕು.
'ಎಂಜಿ ಹೆಕ್ಟರ್ ಫೇಸ್‌ಲಿಫ್ಟ್' ವಿಶೇಷತೆಗಳೇನು:
ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಪರ್ಲ್ ವೈಟ್, ಗ್ಲೇಜ್ ರೆಡ್, ಅರೋರಾ ಸಿಲ್ವರ್, ಸ್ಟಾರಿ ಬ್ಲ್ಯಾಕ್ ಮತ್ತು ಸೆಲಾಡಾನ್ ಬ್ಲೂ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 192 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2750 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.
ನೂತನ 'ಎಂಜಿ ಹೆಕ್ಟರ್ ಫೇಸ್‌ಲಿಫ್ಟ್' ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 143 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 250 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 6-ಸ್ಪೀಡ್ ಆಟೋಮೆಟಿಕ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 12 ರಿಂದ 16 ಕಿಲೋಮೀಟರ್‌ವರೆಗೆ ಮೈಲೇಜ್ ನೀಡಬಲ್ಲದು.
ಇದರ ಕ್ಯಾಬಿನ್ ವಿನ್ಯಾಸವು ಭರ್ಜರಿಯಾಗಿದೆ. ಇನ್ಫೋಟೈನ್‌ಮೆಂಟ್ ಸ್ಕ್ರೀನ್ (14 ಇಂಚು), ವೈರ್‌ಲೆಸ್ ಫೋನ್ ಚಾರ್ಜರ್, ಆಂಬಿಯೆಂಟ್ ಲೈಟಿಂಗ್, ಏರ್ ಪ್ಯೂರಿಫೈಯರ್, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ಸನ್‌ರೂಫ್ ಮತ್ತು ಕ್ರೂಸ್ ಕಂಟ್ರೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ನಿಮ್ಮ ಗಮನಕ್ಕೆ.. ಈ ಕಾರಿನ ಕೆಲವೇ ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ಮಾತ್ರ ತಿಳಿಸಿಕೊಟ್ಟಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








