MG: ಸಿಹಿಸುದ್ದಿ.. ಈ ಜನಪ್ರಿಯ ಕಾರಿಗೆ ರೂ.2.40 ಲಕ್ಷ ರಿಯಾಯಿತಿ, ಬೆಲೆ ಆಯ್ತು ಕಡಿಮೆ!

ಭಾರತದ ಕಾರು ಮಾರುಕಟ್ಟೆಯಲ್ಲಿ ಎಂಜಿ ಮೋಟಾರ್ ಹಾಗೂ ಜೆ‌ಎಸ್‌ಡಬ್ಲ್ಯೂ (ಜಿಂದಾಲ್) ಕಂಪನಿಗಳು ವ್ಯಾಪಾರ ಪಾಲುದಾರಿಕೆಯನ್ನು ಹೊಂದಿವೆ. ಅದರಲ್ಲೂ 'ಎಂಜಿ ಹೆಕ್ಟರ್' ಜನಪ್ರಿಯ ಎಸ್‌ಯುವಿಯಾಗಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಈ ಹೆಕ್ಟರ್ ಕಾರಿಗೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ನೂತನ ಎಂಜಿ ಹೆಕ್ಟರ್ (MG Hector) ಎಸ್‌ಯುವಿ ಒಟ್ಟು ರೂ.2.40 ಲಕ್ಷವರೆಗೆ ರಿಯಾಯಿತಿಯನ್ನು ಹೊಂದಿದೆ. ಈ ಹಣಕಾಸಿನ ಪ್ರಯೋಜನಗಳು ಮಾರ್ಚ್ 31, 2025 ರವರೆಗೆ ಮಾತ್ರ ಮಾನ್ಯವಾಗಿರಲಿವೆ. ಈ ರಿಯಾಯಿತಿ ಹೊರತಾಗಿ ಎಕ್ಸ್ಟೆಂಡೆಡ್ ವಾರಂಟಿ, ರೋಡ್ ಸೈಡ್ ಅಸ್ಸಿಸ್ಟಂಟ್ಸ್ ಸೇರಿದಂತೆ ವಿವಿಧ ಪ್ರಯೋಜನಗಳು ಲಭ್ಯವಾಗುತ್ತವೆ.

Mg Hector Suv Get Rs 2 40 Lakh Discount Details

ಎಂಜಿ ಹೆಕ್ಟರ್ ವಿಶೇಷತೆಗಳೇನು: ಈ ಕಾರು ರೂ.14 ಲಕ್ಷದಿಂದ ರೂ.22.89 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಸ್ಟೈಲ್, ಶೈನ್ ಪ್ರೋ, ಸೆಲೆಕ್ಟ್ ಪ್ರೋ, ಸ್ಮಾರ್ಟ್ ಪ್ರೋ, ಶಾರ್ಪ್ ಪ್ರೋ ಹಾಗೂ ಸ್ಯಾವಿ ಪ್ರೋ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ.

ಈ ಕಾರು ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, 18-ಇಂಚಿನ ಅಲಾಯ್ ವೀಲ್‌ಗಳು ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಪಡೆದಿದೆ. ಹವಾನಾ ಗ್ರೇ, ಕ್ಯಾಂಡಿ ವೈಟ್, ಗ್ಲೇಜ್ ರೆಡ್, ಅರೋರಾ ಸಿಲ್ವರ್, ಸ್ಟಾರಿ ಬ್ಲ್ಯಾಕ್ ಹಾಗೂ ಡ್ಯೂನ್ ಬ್ರೌನ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ಲಭ್ಯವಿದೆ.

Mg Hector Suv Get Rs 2 40 Lakh Discount Details

ನೂತನ ಎಂಜಿ ಹೆಕ್ಟರ್ ಎಂಜಿ ಹೆಕ್ಟರ್ ಎಸ್‌ಯುವಿ ಎರಡು ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 143 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 250 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 6-ಸ್ಪೀಡ್ ಮ್ಯಾನುವಲ್/ ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಮತ್ತೊಂದು 2.0-ಲೀಟರ್ ಡಿಸೇಲ್ ಎಂಜಿನ್ 170 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 350 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. ಹಾಗೆಯೇ 15.58 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಈ ಕಾರು 5, 6 ಹಾಗೂ 7 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಸಿಗುತ್ತದೆ. 14-ಇಂಚಿನ ಟಚ್‌ಸ್ಕ್ರೀನ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7-ಇಂಚಿನ ಫುಲ್-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, 360-ಡಿಗ್ರಿ ಕ್ಯಾಮೆರಾ, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಹೊಸ ಎಂಜಿ ಹೆಕ್ಟರ್ ಎಂಜಿ ಹೆಕ್ಟರ್ ಎಸ್‌ಯುವಿ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, February 26, 2025, 8:30 [IST]
English summary
Mg hector suv get rs 2 40 lakh discount details
Read more on mg motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+