MG M9: 7-ಸೀಟರ್, ರಸ್ತೆ ಮೇಲಿನ ಅರಮನೆಯಂತಿರುವ ಎಂಜಿ ಎಂ9 ಎಲೆಕ್ಟ್ರಿಕ್ ಎಂಪಿವಿ ಬಿಡುಗಡೆ.. ಬೆಲೆ ಎಷ್ಟು?

ಭಾರತದ ಕಾರು ಮಾರುಕಟ್ಟೆಯಲ್ಲಿಂದು ಹೊಚ್ಚ ಹೊಸ 'ಎಂಜಿ ಎಂ9' ಹೆಸರಿನ ಪ್ರೀಮಿಯಂ ಎಲೆಕ್ಟ್ರಿಕ್ ಎಂಪಿವಿಯನ್ನು ಆದ್ದೂರಿಯಾಗಿ ಬಿಡುಗಡೆಗೊಳಿಸಲಾಗಿದೆ. ಇದೊಂದು ಬೃಹತ್ ಗಾತ್ರದ ಕಾರಾಗಿದ್ದು, ಅತ್ಯುತ್ತಮವಾದ ವಿನ್ಯಾಸ ಹಾಗೂ ಐಷಾರಾಮಿ ವೈಶಿಷ್ಟ್ಯಗಳನ್ನು ಕೂಡ ಪಡೆದುಕೊಂಡಿದೆ. ಅದಕ್ಕೆ ತಕ್ಕಂತೆ ದುಬಾರಿ ಬೆಲೆಯನ್ನು ಹೊಂದಿದೆ. ಬನ್ನಿ, ಈ ನೂತನ ಕಾರಿನ ದರವೆಷ್ಟು.. ವಿಶೇಷತೆಗಳೆನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ನೂತನ ಎಂಜಿ ಎಂ9 ಎಲೆಕ್ಟ್ರಿಕ್ ಎಂಪಿವಿ (MG M9 Electric Mpv), ರೂ.69.90 ಲಕ್ಷ (ಎಕ್ಸ್-ಶೋರೂಂ) ಬೆಲೆಗೆ ಮಾರಾಟಕ್ಕೆ ಬಂದಿದೆ. ಬುಕ್ಕಿಂಗ್‌ನ್ನು ತೆರೆಯಲಾಗಿದೆ. ಆಸಕ್ತರು, ಸಮೀಪದ ಡೀಲರ್‌ಶಿಪ್‌ ಅಥವಾ ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ರೂ.1 ಲಕ್ಷ ಮುಂಗಡ ಹಣವನ್ನು ಪಾವತಿಸುವುದರೊಂದಿಗೆ ಆರ್ಡರ್ ಮಾಡಬಹುದು. ಆಗಸ್ಟ್ 10ರಿಂದ ವಿತರಣೆಗಳು ಶುರುವಾಗಲಿದೆ.

MG M9 Electric Mpv Launched In India Rs 69 90 Lakh Price Details

ಈ ಎಂಜಿ ಎಂ9 ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ಅದು ನೋಡುಗರನ್ನು ಸೆಳೆಯುವಂತಿದೆ. ತುಂಬಾ ಚೆನ್ನಾಗಿರುವ ಗ್ರಿಲ್ ಹಾಗೂ ಬಂಪರ್‌ನ್ನು ಪಡೆದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಕನೆಕ್ಟ್ಡ್ ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಒಳಗೊಂಡಿದೆ. ಸ್ಲೈಡಿಂಗ್ ಡೋರ್‌ಗಳು & 19-ಇಂಚಿನ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ.

ಹೊಸ ಎಂ9 ಎಲೆಕ್ಟ್ರಿಕ್ ಎಂಪಿವಿ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 90 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 548 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 242 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 350 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

MG M9 Electric Mpv Launched In India Rs 69 90 Lakh Price Details

ನೂತನ ಎಂಜಿ ಎಂ9 ಎಂಪಿವಿ 7 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 465 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. ಈ ಕಾರಿನಲ್ಲಿರುವ ಬ್ಯಾಟರಿ ಪ್ಯಾಕ್, 160 ಕೆಡಬ್ಲ್ಯೂ ಡಿಸಿ ಫಾಸ್ಟ್ ಚಾರ್ಜಿಂಗ್ ಬಳಕೆಯಲ್ಲಿ ಪೂರ್ತಿ ಚಾರ್ಜ್ ಆಗಲು 90 ನಿಮಿಷ ತೆಗೆದುಕೊಳ್ಳುತ್ತದೆ.

ಇದರ ಕ್ಯಾಬಿನ್ ವಿನ್ಯಾಸವು ಕೂಡ ಅಷ್ಟೇ ಅಚ್ಚುಕಟ್ಟಾಗಿದೆ. 12.3-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿರುವ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ವೈರ್‌ಲೆಸ್ ಫೋನ್ ಚಾರ್ಜರ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ಕೀಲೆಸ್ ಎಂಟ್ರಿ, ಕಪ್ ಹೋಲ್ಡರ್‌ಗಳು, ಸನ್‌ರೂಫ್, ಪ್ರೀಮಿಯಂ ಜೆಬಿಎಲ್ ಸೌಂಡ್ ಸಿಸ್ಟಮ್ ಮತ್ತು 64 ಕಲರ್ ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇಕೋ, ನಾರ್ಮಲ್ & ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ಪಡೆದಿದೆ.

MG M9 Electric Mpv Launched In India Rs 69 90 Lakh Price Details

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಫ್ರಂಟ್ & ರೇರ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಒಟ್ಟಾರೆಯಾಗಿ 'ಎಂಜಿ ಎಂ9' ಎಲೆಕ್ಟ್ರಿಕ್ ಎಂಪಿವಿ ಬಿಡುಗಡೆಯಾಗಿರುವುದು ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇದೊಂದು ಬೃಹತ್ ಗಾತ್ರದ ಕಾರಾಗಿದ್ದು, ಆಕರ್ಷಕವಾಗಿಯೂ ಇದೆ. ದುಬಾರಿ ಬೆಲೆಯನ್ನು ಪಡೆದುಕೊಂಡಿರುವುದು ಬಿಟ್ಟರೆ, ಈ ಎಂಪಿವಿಗೆ ಬೇರೆ ಯಾವುದೇ ಕಾರುಗಳು ಸರಿ ಸಾಟಿಯಾಗುವುದಿಲ್ಲ. ಮುಂಬರುವ ದಿನಗಳಲ್ಲಿ ಅಂದರೆ ವಿತರಣೆಗಳು ಆರಂಭವಾದ ಮೇಲೆ ಇದೇ ಎಂಜಿ ಎಂ9ಗೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

Article Published On: Monday, July 21, 2025, 15:04 [IST]
English summary
Mg m9 electric mpv launched in india rs 69 90 lakh price details
Read more on mg motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+