ಬೆಚ್ಚಿಬಿದ್ದ ಟಾಟಾ.. 20,000 ಯುನಿಟ್ ಮಾರಾಟ, ಎಂಜಿ ಕಾರಿನಿಂದ ಎಲ್ಲ ದಾಖಲೆಗಳು ಉಡೀಸ್!
ಭಾರತದ ಕಾರು ಮಾರುಕಟ್ಟೆಯಲ್ಲಿ ಜೆಎಸ್‌ಡಬ್ಲ್ಯೂ (JSW) ಹಾಗೂ ಎಂಜಿ ಮೋಟಾರ್ (MG Motor) ಕಂಪನಿಗಳು ವ್ಯಾಪಾರ ಪಾಲುದಾರಿಕೆಯನ್ನು ಹೊಂದಿವೆ. ದೇಶೀಯವಾಗಿ ವಿವಿಧ ಕಾರುಗಳನ್ನು ಯಶಸ್ವಿಯಾಗಿಯೂ ಮಾರಾಟಗೊಳಿಸಲಾಗುತ್ತಿವೆ. ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಇವೆರೆಡು ಕಂಪನಿಗಳ ಸಹಯೋಗದಲ್ಲಿ ಹೊಚ್ಚ ಹೊಸ ವಿಂಡ್ಸರ್ (Windsor) ಎಲೆಕ್ಟ್ರಿಕ್ ಕಾರನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿತ್ತು. ಈ ಕಾರನ್ನು ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, 'ವಿಂಡ್ಸರ್' ಮಾರಾಟದಲ್ಲಿ ವಿಶೇಷವಾದ ದಾಖಲೆಯೊಂದನ್ನು ನಿರ್ಮಾಣ ಮಾಡಲಾಗಿದೆ.
ಎಂಜಿ ವಿಂಡ್ಸರ್ ಇವಿ (MG Windsor EV) ಬಿಡುಗಡೆಯಾಗಿ 6 ತಿಂಗಳೊಳಗೆ 20,000 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಮೂಲಕ ಕಂಪನಿಯು ಹೊಸದೊಂದು ಇತಿಹಾಸವನ್ನು ಬರೆದಿದೆ. ವಿಂಡ್ಸರ್ ಎಲೆಕ್ಟ್ರಿಕ್ ಕಾರು ಹೊಂದಿರುವ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳ ಹಿನ್ನೆಲೆ, ಇಂತಹ ಮಹತ್ತರವಾದ ಮೈಲಿಗಲ್ಲನ್ನು ಸಾಧಿಸಲು ಸಾಧ್ಯವಾಗಿದೆ.

ದೇಶೀಯವಾಗಿ ಖರೀದಿಗೆ ಲಭ್ಯವಿರುವ ನೂತನ ಎಂಜಿ ವಿಂಡ್ಸರ್ ಇವಿ ರೂ.14 ಲಕ್ಷದಿಂದ ರೂ.16 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 604 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.
ಈ ಕಾರು ಹೊರಭಾಗದಲ್ಲಿ ಸಾಕಷ್ಟು ಆಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ಸ್ಪ್ಲಿಟ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಲೈಟ್ ಬಾರ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಮತ್ತು 18-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಸ್ಟಾರ್‌ಬರ್ಸ್ಟ್ ಬ್ಲಾಕ್, ಪರ್ಲ್ ವೈಟ್, ಕ್ಲೇ ಬೀಜ್ ಮತ್ತು ಟರ್ಕೋಯಿಸ್ ಗ್ರೀನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಹೊಸ ಎಂಜಿ ವಿಂಡ್ಸರ್ ಇವಿ 38 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 331 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. ಇಕೋ, ಇಕೋ ಪ್ಲಸ್, ನಾರ್ಮಲ್ ಮತ್ತು ಸ್ಪೋರ್ಟ್ ನಾಲ್ಕು ಎಂಬ ಡ್ರೈವಿಂಗ್ ಮೋಡ್‌ಗಳನ್ನು ಪಡೆದಿದೆ. ಎಕ್ಸೈಟ್, ಎಕ್ಸ್‌ಕ್ಲೂಸಿವ್ & ಎಸೆನ್ಸ್ ಎಂಬ ರೂಪಾಂತರಗಳನ್ನು ಒಳಗೊಂಡಿದೆ.
ನೂತನ ಎಂಜಿ ವಿಂಡ್ಸರ್ ಇವಿ ಹಲವು ನವೀನ ವೈಶಿಷ್ಟ್ಯಗಳನ್ನು ಪಡೆದಿದೆ. ಬಹುಮುಖ್ಯವಾಗಿ 15.6 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್ ಹಾಗೂ ಮತ್ತು ಬಟನ್ ಸ್ಟಾರ್ಟ್ ಸಿಸ್ಟಮ್‌ನ್ನು ಹೊಂದಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. 6 - ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾ ಸೇರಿದಂತೆ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಹೊಸ ಎಂಜಿ ವಿಂಡ್ಸರ್ ಇವಿಗೆ ಟಾಟಾ ನೆಕ್ಸಾನ್ ಇವಿ & ಮಹೀಂದ್ರಾ ಎಕ್ಸ್‌ಯುವಿ400 ಇವಿ ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








