ಹೊಸ ಇವಿ 'ಹೀರೋ'.. ವಿಮಾನದಂತೆ ಸೌಕರ್ಯವಿರುವ ಈ ಕಾರಿಗೆ ಭಾರೀ ಬೇಡಿಕೆ: ಬೆಚ್ಚಿಬಿದ್ದ ಟಾಟಾ, ಮಹೀಂದ್ರಾ!
ಭಾರತ ವಾಹನ ಮಾರುಕಟ್ಟೆಯಲ್ಲಿ ಜಿಂದಾಲ್ ಹಾಗೂ ಎಂಜಿ ಮೋಟಾರ್ ವ್ಯಾಪಾರ ಪಾಲುದಾರಿಕೆಯನ್ನು ಹೊಂದಿವೆ. ಅದರ ಭಾಗವಾಗಿ ಕೆಲವೇ ತಿಂಗಳ ಹಿಂದೆ, 'ವಿಂಡ್ಸರ್ ಇವಿ'ಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಈ ಕಾರು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿದೆ. ಪ್ರತಿ ತಿಂಗಳು ಸರಾಸರಿ 3,000ಕ್ಕೂ ಅಧಿಕ ಯುನಿಟ್ 'ವಿಂಡ್ಸರ್' ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟಗೊಳಿಸುವಲ್ಲಿ ಎಂಜಿ ಕಂಪನಿ ಕೂಡ ಯಶಸ್ವಿಯಾಗಿದೆ. ಇದರೊಂದಿಗೆ ಟಾಟಾ ಹಾಗೂ ಮಹೀಂದ್ರಾ ಕಂಪನಿ ಎಲೆಕ್ಟ್ರಿಕ್ ಕಾರುಗಳಿಗೆ ಪ್ರಬಲವಾದ ಪ್ರತಿಸ್ಪರ್ಧಿಯೊಡ್ಡುತ್ತಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ಜೆಎಸ್‌ಡಬ್ಲ್ಯೂ ಎಂಜಿ ಮೋಟಾರ್ ಇಂಡಿಯಾ (JSW MG Motor India), ಕಳೆದ ತಿಂಗಳು (ಜನವರಿ - 2025) ಬರೋಬ್ಬರಿ 3,277 ಯುನಿಟ್ ವಿಂಡ್ಸರ್ (Windsor) ಕಾರನ್ನು ಮಾರಾಟಗೊಳಿಸಿದೆ. ಅದೇ ರೀತಿಯಲ್ಲಿ 2024ರ ಡಿಸೆಂಬರ್‌ನಲ್ಲಿ 3,785 ಯುನಿಟ್, ನವೆಂಬರ್‌ನಲ್ಲಿ 3,144 ಯುನಿಟ್ ಹಾಗೂ ಅಕ್ಟೋಬರ್‌ನಲ್ಲಿ 3,116 ವಿಂಡ್ಸರ್ ಇವಿಗಳನ್ನು ಮಾರಾಟ ಮಾಡಲಾಗಿದೆ.

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ನೂತನ ಎಂಜಿ ವಿಂಡ್ಸರ್ ಇವಿ (MG Windsor EV), ಕನಿಷ್ಠ ರೂ.13.99 ಲಕ್ಷ ಮತ್ತು ಗರಿಷ್ಠ ರೂ.15.99 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ. ಎಕ್ಸೈಟ್, ಎಕ್ಸ್‌ಕ್ಲೂಸಿವ್ ಮತ್ತು ಎಸೆನ್ಸ್ ಎಂಬ ಮೂರು ರೂಪಾಂತರಗಳ ಆಯ್ಕೆಯಲ್ಲಿಯೂ ಖರೀದಿಗೂ ದೊರೆಯುತ್ತದೆ. ಸ್ಟಾರ್‌ಬರ್ಸ್ಟ್ ಬ್ಲಾಕ್, ಪರ್ಲ್ ವೈಟ್, ಕ್ಲೇ ಬೀಜ್ ಹಾಗೂ ಟರ್ಕೋಯಿಸ್ ಗ್ರೀನ್ ಬಣ್ಣಗಳೊಂದಿಗೂ ಸಿಗುತ್ತದೆ.
ಈ ಕಾರು 38 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಇದರಲ್ಲಿ ಸಿಂಗಲ್-ಎಲೆಕ್ಟ್ರಿಕ್ ಮೋಟಾರ್ ಉಪಯೋಗ ಮಾಡಲಾಗಿದ್ದು, 134 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 200 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಸಂಪೂರ್ಣ ಚಾರ್ಜ್‌ನಲ್ಲಿ 331 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.

ನೂತನ ಎಂಜಿ ವಿಂಡ್ಸರ್ ಇವಿ ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಸ್ಪ್ಲಿಟ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಲೈಟ್ ಬಾರ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಹಾಗೂ 18-ಇಂಚಿನ ಅಲಾಯ್ ವೀಲ್‌ಗಳನ್ನು ತನ್ನದಾಗಿಸಿಕೊಂಡಿದೆ. ಇಕೋ, ಇಕೋ ಪ್ಲಸ್, ನಾರ್ಮಲ್ & ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ಪಡೆದಿದೆ.
ಈ ಕಾರಿನಲ್ಲಿ 5 ಮಂದಿ ಪ್ರಯಾಣಿಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 604 ಲೀ. ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್ ಹಾಗೂ ಪುಶ್ ಬಟನ್ ಸ್ಟಾರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಹೊಸ ಎಂಜಿ ವಿಂಡ್ಸರ್ ಇವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 - ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾದಂತಹ ಹಲವು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








