449 Km ರೇಂಜ್, 5-ಸೀಟರ್.. ಹೊಸ MG SUVಗೆ ಮುಗಿಬಿದ್ದ ಗ್ರಾಹಕರು.. 24 ಗಂಟೆಯಲ್ಲಿ 8,000 ಬುಕ್ಕಿಂಗ್!
ಬಹುನಿರೀಕ್ಷಿತ ಎಂಜಿ ವಿಂಡ್ಸರ್ ಇವಿ ಪ್ರೊ (MG Windsor EV Pro) ಎಲೆಕ್ಟ್ರಿಕ್ ಎಸ್‌ಯುವಿಯನ್ನು ಮಂಗಳವಾರ ಬಿಡುಗಡೆಗೊಳಿಸಲಾಗಿತ್ತು. ಈ ಕಾರು ಹಲವು ಹೊಸತನಗಳಿಗೆ ಸಾಕ್ಷಿಯಾಗಿದೆ. ಇದು ಟಾಟಾ ಕರ್ವ್, ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಮತ್ತು ಟಾಟಾ ನೆಕ್ಸಾನ್ ಇವಿಗಳಿಗೆ ಪ್ರಬಲವಾಗಿ ಸ್ಪರ್ಧೆಯೊಡ್ಡಬಲ್ಲದು. ಸದ್ಯ ದೇಶೀಯ ಗ್ರಾಹಕರಿಂದ 'ವಿಂಡ್ಸರ್ ಇವಿ ಪ್ರೊ'ಗಾಗಿ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಾಮುಂದು - ತಾಮುಂದು ಎಂಬಂತೆ ಬುಕ್ಕಿಂಗ್ ಮಾಡಿದ್ದಾರೆ. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ನೂತನ 'ಎಂಜಿ ವಿಂಡ್ಸರ್ ಇವಿ ಪ್ರೊ' ಎಲೆಕ್ಟ್ರಿಕ್ ಎಸ್‌ಯುವಿಗಾಗಿ ಗುರುವಾರದಿಂದ ಬುಕ್ಕಿಂಗ್‌ನ್ನು ತೆರೆಯಲಾಗಿದೆ. ಕೇವಲ 24 ಗಂಟೆಗಳಲ್ಲಿ ಬರೋಬ್ಬರಿ 8,000 ಅಧಿಕ ಗ್ರಾಹಕರು ಆರ್ಡರ್ ಮಾಡಿದ್ದಾರೆ. ಇದು ಈ ಕಾರಿಗೆ ವಿಶ್ವಾಸಾರ್ಹತೆಗೆ ಹಿಡಿದ ಕೈಗನ್ನಡಿಯಾಗಿದೆ. ಹಾಗೆಯೇ ಕಂಪನಿಗೂ ಹೊಸ ಭರವಸೆಯನ್ನು ಮೂಡಿಸಿದೆ.

ಈ ಮೊದಲು, ರೂ.17.49 ಲಕ್ಷ ಪರಿಚಯಾತ್ಮಕ ಬೆಲೆಯಲ್ಲಿ ನೂತನ 'ವಿಂಡ್ಸರ್ ಇವಿ ಪ್ರೊ' ಎಲೆಕ್ಟ್ರಿಕ್ ಕಾರನ್ನು 8,000 ಗ್ರಾಹಕರಿಗೆ ಮಾತ್ರ ಮಾರಾಟ ಮಾಡಲಾಗುತ್ತದೆ ಎಂದು ಕಂಪನಿಯು ಹೇಳಿತ್ತು. ಈಗ ಅದೇ ಸಂಖ್ಯೆಯಲ್ಲಿ ಬುಕ್ಕಿಂಗ್ ಆಗಿರುವುದರಿಂದ ದರವನ್ನು ಪರಿಷ್ಕರಣೆ ಮಾಡಲಾಗಿದೆ. ಇನ್ಮುಂದೆ ಈ ಕಾರು ರೂ.18.09 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರಲಿದೆ.
ಹೊಚ್ಚ ಹೊಸ 'ಎಂಜಿ ವಿಂಡ್ಸರ್ ಇವಿ ಪ್ರೊ' ಎಲೆಕ್ಟ್ರಿಕ್ ಎಸ್‌ಯುವಿಯು, 52.9 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 449 ಕಿ.ಮೀ ಓಡುತ್ತದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 134 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 200 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ನೂತನ ಎಂಜಿ ವಿಂಡ್ಸರ್ ಇವಿ ಪ್ರೊ ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು, ಪವರ್ಡ್ ಟೈಲ್‌ಗೇಟ್ ಹಾಗೂ ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಸೆಲಾಡಾನ್ ಬ್ಲೂ, ಗ್ಲೇಜ್ ರೆಡ್ ಮತ್ತು ಅರೋರಾ ಸಿಲ್ವರ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಕಾರು 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್ ಮತ್ತು ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಹೊಸ ಎಂಜಿ ವಿಂಡ್ಸರ್ ಇವಿ ಪ್ರೊ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಇನ್ನು, ಮುಂಬರುವ ದಿನಗಳಲ್ಲಿ ನೂತನ 'ಎಂಜಿ ವಿಂಡ್ಸರ್ ಇವಿ ಪ್ರೊ' ಎಲೆಕ್ಟ್ರಿಕ್ ಕಾರು ಭಾರೀ ಸಂಖ್ಯೆಯಲ್ಲಿಯೂ ಬುಕ್ಕಿಂಗ್‌ನ್ನು ಪಡೆದುಕೊಳ್ಳುವ ಸಾಧ್ಯತೆಯಿದೆ. ಇದು ಹೆಚ್ಚು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ಹಿನ್ನೆಲೆ, ಗ್ರಾಹಕರಿಂದ ಅತ್ಯುತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ವಿಶ್ಲೇಷಣೆಯನ್ನು ಮಾಡಲಾಗುತ್ತಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








