ಬಿಡುಗಡೆಯೇ ಆಗಿಲ್ಲ.. ಬಹುನಿರೀಕ್ಷಿತ 'MG Windsor' ಕಾರು ಕಾಣಿಸಿಕೊಂಡೆ ಬಿಡ್ತು, ನಾಳೆಯೇ ಮಾರಾಟಕ್ಕೆ.. ಹೊಸತೇನಿದೆ?
ಹೊಚ್ಚ ಹೊಸ ಎಂಜಿ ವಿಂಡ್ಸರ್ ಇವಿ ಪ್ರೊ (MG Windsor EV Pro) ಎಲೆಕ್ಟ್ರಿಕ್ ಕಾರಿನ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ ಅದ್ದೂರಿಯಾಗಿಯೂ ಮಾರಾಟಕ್ಕೆ ಬರಲಿದೆ. ನೂತನ ಎಸ್‌ಯುವಿಯನ್ನು ಪರಿಚಯಿಸಲು ಕಂಪನಿಯು ಎಲ್ಲ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದೆ. ಗ್ರಾಹಕರು ಕೂಡ ಕಾತರದಿಂದ ಕಾಯುತ್ತಿದ್ದಾರೆ. ಸದ್ಯ, 'ವಿಂಡ್ಸರ್ ಇವಿ ಪ್ರೊ' ಕಾರಿನ ಹೊಸ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲೂ ಕಾಣಿಸಿಕೊಂಡಿವೆ. ಅದರಲ್ಲಿ ನೂತನ ಎಲೆಕ್ಟ್ರಿಕ್ ಎಸ್‌ಯುವಿ ವಿನ್ಯಾಸದ ಕುರಿತ ಒಂದಷ್ಟು ಅಂಶಗಳು ಬಹಿರಂಗಗೊಂಡಿವೆ.
ಈ ಫೋಟೋಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ ಎಂಜಿ ವಿಂಡ್ಸರ್ ಇವಿ ಪ್ರೊ, ಸ್ಟ್ಯಾಂಡರ್ಡ್ ವಿಂಡ್ಸರ್ ಇವಿಯಂತೆ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಅದರ ಹೊರತಾಗಿ ಎಂಜಿ ಹೆಕ್ಟರ್‌ನಂತೆಯಿರುವ ಅಲಾಯ್ ವೀಲ್‌ಗಳನ್ನು ಹೊಂದಿದೆ. ಇದರೊಟ್ಟಿಗೆ ಟೈಲ್‌ಗೇಟ್‌ನಲ್ಲಿ ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಬ್ಯಾಡ್ಜಿಂಗ್ ಇರುವುದನ್ನು ಗುರುತಿಸಬಹುದು.

ನೂತನ ಎಂಜಿ ವಿಂಡ್ಸರ್ ಇವಿ ಪ್ರೊ ಕೂಡ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ಈ ಕಾರು, ರೂ.15 ಲಕ್ಷ ಆರಂಭಿಕ ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಪ್ರಸ್ತುತ ಸಿಗುವ ವಿಂಡ್ಸರ್ ಇವಿ ಕನಿಷ್ಠ ರೂ.14 ಲಕ್ಷ ಮತ್ತು ಗರಿಷ್ಠ ರೂ.16 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ.
ಹೊಸ ಎಂಜಿ ವಿಂಡ್ಸರ್ ಇವಿ ಪ್ರೊ ಎಲೆಕ್ಟ್ರಿಕ್ ಕಾರು ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಇದು 50.6 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದಿರಲಿದ್ದು, ಭರ್ತಿ ಚಾರ್ಜ್‌ನಲ್ಲಿ 460 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡಬಹುದು ಎಂದು ಹೇಳಲಾಗಿದೆ. ಹಾಗೆಯೇ ಹೆಚ್ಚಿನ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು ನ್ಯೂಟನ್ ಮೀಟರ್ ಪೀಕ್ ಟಾರ್ಕ್ ಸಹ ಉತ್ಪಾದಿಸಬಹುದು ಎನ್ನಲಾಗಿದೆ.

ಈ ನೂತನ ಎಲೆಕ್ಟ್ರಿಕ್ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರಲಿದೆ. ಈಗಿರುವ ವಿಂಡ್ಸರ್ ಇವಿಯಂತೆಯೇ 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್ ಹಾಗೂ ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ಪಡೆದುಕೊಂಡಿರಬಹುದು ಎಂದು ಹೇಳಲಾಗಿದೆ.
ಹೊಸ ಎಂಜಿ ವಿಂಡ್ಸರ್ ಇವಿ ಪ್ರೊ ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮಾತ್ರವಲ್ಲದೆ, ಹಲವು ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ. 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದುಕೊಂಡಿರಲಿದೆ.

ನೂತನ ಕಾರು, ಸ್ಟ್ಯಾಂಡರ್ಡ್ ಎಂಜಿ ವಿಂಡ್ಸರ್ ಇವಿಯಂತೆ 5 ಆಸನಗಳನ್ನು ಹೊಂದಿರಲಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 604 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಈ ಕಾರಿಗೆ ಟಾಟಾ ಕರ್ವ್ ಹಾಗೂ ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಬಲ್ಲವು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.
Source: Team BHP


Click it and Unblock the Notifications








