ಇನ್ನೂ ವರ್ಷವಾಗಿಲ್ಲ.. ಮೇ.6ಕ್ಕೆ ಹೊಸ ಬದಲಾವಣೆಯೊಂದಿಗೆ ಅಗ್ಗದ 'MG Windsor EV' ಬಿಡುಗಡೆ, 460 Km ರೇಂಜ್?

ಎಂಜಿ ವಿಂಡ್ಸರ್ ಇವಿ (MG Windsor EV) ಜನಪ್ರಿಯ ಎಲೆಕ್ಟ್ರಿಕ್ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರನ್ನು 2024ರ ಅಕ್ಟೋಬರ್ ತಿಂಗಳಲ್ಲಿ ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿತ್ತು. ಇದು ಹೆಚ್ಚು ಆಕರ್ಷಕವಾಗಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಈವರೆಗೆ 20,000ಕ್ಕೂ ಅಧಿಕ ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಸದ್ಯ, ಇದೇ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಹೊಸ ಅವತಾರದಲ್ಲಿ ಬಿಡುಗಡೆಗೊಳಿಸಲು ಕಂಪನಿಯು ಕೂಡ ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಎಂಜಿ ವಿಂಡ್ಸರ್ ಇವಿ ಪ್ರೊ (MG Windsor EV Pro) ಎಂದು ಕರೆಯಲಾಗುವ ನೂತನ ಎಲೆಕ್ಟ್ರಿಕ್ ಎಸ್‌ಯುವಿ, ಮೇ.6ರಂದು ಅದ್ದೂರಿಯಾಗಿ ಮಾರಾಟಕ್ಕೆ ಬರಲಿದೆ. ಅದಕ್ಕೆ ಸಂಬಂಧಿಸಿದ ಸಣ್ಣ ಟೀಸರ್ ವಿಡಿಯೋವನ್ನು ಸಹ ಕಂಪನಿಯ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಕಾರು, ಪ್ರಮುಖವಾಗಿ 6 ನವೀಕರಣಗಳಿಗೆ ಒಳಗಾಗಿರುತ್ತದೆ ಎಂಬುದನ್ನು ಖಚಿತಪಡಿಲಾಗಿದೆ.

MG Windsor EV Pro Teased Launch on May 6 This Will Be The New Updates

ಹೊಸ ಎಂಜಿ ವಿಂಡ್ಸರ್ ಇವಿ ಪ್ರೊನಲ್ಲಿ ಕ್ಯಾಬಿನ್, ಬ್ಯಾಟರಿ ಪ್ಯಾಕ್, ಕನ್ವೀನಿಯನ್ಸ್, ಸ್ಟೈಲ್, ಟೆಕ್ ಹಾಗೂ ಸೇಫ್ಟಿಗೆ ಹೆಚ್ಚು ಒತ್ತು ನೀಡಲಾಗಿರುತ್ತದೆ ಎಂಬುದನ್ನು ಟೀಸರ್‌ನಲ್ಲಿ ತೋರಿಸಲಾಗಿದೆ. ಈ ಕಾರು ಬಜೆಟ್ ಬೆಲೆಯಲ್ಲಿಯೂ ಖರೀದಿಗೆ ಲಭ್ಯವಿರುವ ಸಾಧ್ಯತೆಯಿದೆ. ಪ್ರಸ್ತುತವಿರುವ ವಿಂಡ್ಸರ್ ಮಾಡೆಲ್, ರೂ.14 ಲಕ್ಷದಿಂದ ರೂ.16 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ.

ನೂತನ ಎಂಜಿ ವಿಂಡ್ಸರ್ ಇವಿ ಪ್ರೊ, ಇಂಡೋನೇಷ್ಯಾದಲ್ಲಿ ಮಾರಾಟದಲ್ಲಿರುವ 'ವುಲಿಂಗ್ ಕ್ಲೌಡ್ ಇವಿ'ಯಂತೆಯೇ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿರಲಿದೆ ಎನ್ನಲಾಗಿದೆ. ಹೊಸ ಎಸ್‌ಯುವಿ 50.6 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿರಲಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 460 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ.

MG Windsor EV Pro Teased Launch on May 6 This Will Be The New Updates

ಆದರೆ, ಈ ನೂತನ ಕಾರಿನ ಕಾರ್ಯಕ್ಷಮತೆಯಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎನ್ನಲಾಗಿದೆ. ಇದು ಈಗಿರುವ ಮಾಡೆಲ್‌ನಂತೆ 'ಪಿಎಂಎಸ್' ಮೋಟಾರ್‌ನ್ನು ಪಡೆದಿರಲಿದ್ದು, 134 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 200 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ ಎಂದು ಹೇಳಲಾಗಿದೆ. 170 ಕೆಎಂಪಿಎಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿರಲಿದೆ ಎಂಬ ವಿಚಾರಗಳು ತಿಳಿದುಬಂದಿದೆ.

ಈ ಎಂಜಿ ವಿಂಡ್ಸರ್ ಇವಿ ಪ್ರೊನಲ್ಲಿ ಸುರಕ್ಷತೆಗೂ ಹೆಚ್ಚಿನ ಆದ್ಯತೆಯನ್ನು ನೀಡಲಾಗಿರುತ್ತದೆ. ಪ್ರಯಾಣಿಕರ ರಕ್ಷಣೆಯಾಗಿ ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ವೈಶಿಷ್ಟ್ಯವನ್ನು ಪಡೆದುಕೊಂಡಿರಲಿದೆ ಎಂಬುದು ಬಹುತೇಕ ದೃಢಪಟ್ಟಿದೆ. ಇದರೊಟ್ಟಿಗೆ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾದಂತಹ ಸಾಮಾನ್ಯ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿರಲಿದೆ.

MG Windsor EV Pro Teased Launch on May 6 This Will Be The New Updates

ನೂತನ ಎಂಜಿ ವಿಂಡ್ಸರ್ ಇವಿ ಪ್ರೊ ವಿನ್ಯಾಸ ಹಾಗೂ ವೈಶಿಷ್ಟ್ಯಗಳಲ್ಲಿಯೂ ಯಾವುದೇ ಬದಲಾವಣೆಗಳು ಇರುವುದಿಲ್ಲ ಎನ್ನಲಾಗಿದೆ. ಇದು ಹಳೆಯ ಬಣ್ಣಗಳ ಆಯ್ಕೆಯಲ್ಲಿಯೇ ಖರೀದಿಗೆ ದೊರೆಯಲಿದ್ದು, 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣ ಮಾಡಬಹುದು. 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, May 3, 2025, 9:41 [IST]
English summary
Mg windsor ev pro teased launch on may 6 this will be the new updates
Read more on mg motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+