449 Km ರೇಂಜ್, ಲಕ್ಸುರಿ ಫೀಚರ್ಸ್.. ಇಂದಿನಿಂದ ಬುಕ್ಕಿಂಗ್, ಹೊಸ MG EV ಕುರಿತ ಮುಖ್ಯಾಂಶಗಳಿವು!

ಭಾರತದ ಕಾರು ಮಾರುಕಟ್ಟೆಯಲ್ಲಿ ಮಂಗಳವಾರ ಹೊಚ್ಚ ಹೊಸ ಎಂಜಿ ವಿಂಡ್ಸರ್ ಇವಿ ಪ್ರೊ (MG Windsor EV Pro) ಎಲೆಕ್ಟ್ರಿಕ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಯಿತು. ಈ ಕಾರು ಹೆಚ್ಚು ಆಕರ್ಷಕವಾಗಿದೆ. ಆದರೂ ಕೊಂಚ ಮಟ್ಟಿಗೆ ದುಬಾರಿ ಬೆಲೆಯನ್ನೇ ಹೊಂದಿದೆ. ಹೊಸದಾದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಗರಿಷ್ಠ ದೂರ ಕೂಡ ಕ್ರಮಿಸಬಲ್ಲದು. ನಾವಿಲ್ಲಿ ಈ ನೂತನ 'ವಿಂಡ್ಸರ್ ಇವಿ ಪ್ರೊ' ಎಲೆಕ್ಟ್ರಿಕ್ ಎಸ್‌ಯುವಿಯ ಬೆಲೆ ಹಾಗೂ ವಿಶೇಷತೆಗಳ ಕುರಿತಾದ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.

ಬೆಲೆ (Price): ಹೊಸ ಎಂಜಿ ವಿಂಡ್ಸರ್ ಇವಿ ಪ್ರೊ ರೂ.17.49 ಲಕ್ಷ (ಎಕ್ಸ್-ಶೋರೂಂ) ಬೆಲೆಗೆ ಮಾರಾಟಕ್ಕೆ ಬಂದಿದೆ. ಇಂದಿನಿಂದ ಬುಕ್ಕಿಂಗ್‌ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಆಸಕ್ತ ಗ್ರಾಹಕರು ಕಂಪನಿಯ ಅಧಿಕೃತ ವೆಬ್‌ಸೈಟ್‌ ಅಥವಾ ಸಮೀಪದ ಡೀಲರ್‌ಶಿಪ್‌ಗೆ ಭೇಟಿ ನೀಡಿ, ಆರ್ಡರ್ ಮಾಡಬಹುದು. ವಿಶೇಷವಾಗಿ ಈ ಪರಿಚಯಾತ್ಮಕ ದರದಲ್ಲಿ ನೂತನ ಎಲೆಕ್ಟ್ರಿಕ್ ಎಸ್‌ಯುವಿಯು ಕೇವಲ 8,000 ಖರೀದಿದಾರರಿಗೆ ಮಾತ್ರ ಲಭ್ಯವಾಗಲಿದೆ.

MG Windsor EV Pro Top Things Booking Starts Today Details

ವಿನ್ಯಾಸ & ಬಣ್ಣಗಳು (Design & Colors): ಈ ಕಾರು ಉತ್ತಮವಾಗಿರುವ ವಿನ್ಯಾಸವನ್ನು ಪಡೆದಿದೆ. ಸ್ಪ್ಲಿಟ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಲೈಟ್ ಬಾರ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಮತ್ತು ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿದೆ. ಸೆಲಾಡಾನ್ ಬ್ಲೂ, ಗ್ಲೇಜ್ ರೆಡ್ & ಅರೋರಾ ಸಿಲ್ವರ್ ಎಂಬ ಮೂರು ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಕಾರ್ಯಕ್ಷಮತೆ (Performance): ಎಂಜಿ ವಿಂಡ್ಸರ್ ಇವಿ ಪ್ರೊ ಹೆಚ್ಚು ಬಲಶಾಲಿಯಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದು 52.9 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದಿದ್ದು, ಪೆಟ್ರೋಲ್ ಕಾರುಗಳಿಗೆ ಸವಾಲೆಸೆಯುವ ರೀತಿಯಲ್ಲಿ ಭರ್ತಿ ಚಾರ್ಜ್‌ನಲ್ಲಿ 449 ಕಿಲೋಮೀಟರ್‌ ಕ್ರಮಿಸುತ್ತದೆ.

MG Windsor EV Pro Top Things Booking Starts Today Details

ಆಸನ ಆಯ್ಕೆ & ವೈಶಿಷ್ಟ್ಯಗಳು (Seating Capacity & Features): ಈ ಕಾರಿನಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಬಹುಮುಖ್ಯವಾಗಿ 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್ ಮತ್ತು ಬಟನ್ ಸ್ಟಾರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features): ಎಂಜಿ ವಿಂಡ್ಸರ್ ಇವಿ ಪ್ರೊ ಎಲೆಕ್ಟ್ರಿಕ್ ಎಸ್‌ಯುವಿ ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಿತ್ತದೆ. 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾದಂತಹ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.

MG Windsor EV Pro Top Things Booking Starts Today Details

ಇನ್ನು, ನೂತನ ಎಂಜಿ ವಿಂಡ್ಸರ್ ಇವಿ ಪ್ರೊ ಕಾರು ಮಾರಾಟಕ್ಕೆ ಬಂದಿರುವುದು ದೇಶೀಯ ಗ್ರಾಹಕರಿಗೆ ಹೆಚ್ಚಿನ ಸಂತಸ ತಂದಿದೆ. ಇದು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಮುಂಬರುವ ದಿನಗಳಲ್ಲಿ ಈ ಎಲೆಕ್ಟ್ರಿಕ್ ಎಸ್‌ಯುವಿಗೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, May 8, 2025, 10:30 [IST]
English summary
Mg windsor ev pro top things booking starts today details
Read more on mg motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+