ಭಾರತದಲ್ಲಿ ಸ್ವದೇಶಿ ಟಾಟಾ ಕಾರಿಗೆ ಟಾಂಗ್ ಕೊಟ್ಟ ಚೀನಾ ಕಾರು: ಆದ್ರೆ ಯಾವುದು ಬೆಸ್ಟ್ ಗೊತ್ತಾ?
MG Windsor EV Vs Tata Nexon EV price, features, battery comparison | ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಬೇಡಿಕೆ ಹೆಚ್ಚುತ್ತಲೇ ಇದೆ, ಇಂಧನ ಬೆಲೆಗಳ ಏರಿಕೆಯಿಂದ ಬೇಸತ್ತಿರುವ ಜನರು ಎಲೆಕ್ಟ್ರಿಕ್ ಹಾಗೂ ಹೈಬ್ರಿಡ್ ಕಾರುಗಳ ಮೊರೆ ಹೋಗುತ್ತಿದ್ದಾರೆ. ಅದರಲ್ಲೂ ಎಲೆಕ್ಟ್ರಿಕ್ ಕಾರುಗಳು ತುಸು ಹೆಚ್ಚು ಜನಪ್ರಿಯತೆ ಪಡೆಯುತ್ತಿವೆ. ಭಾರತದಲ್ಲಿ ಸದ್ಯ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಟಾಟಾ ಮೋಟಾರ್ಸ್ ಮುನ್ನುಗ್ಗುತ್ತಿದೆ. ಪ್ರತಿ ತಿಂಗಳು ದಾಖಲೆ ಮಟ್ಟದ ಇವಿಗಳನ್ನು ಟಾಟಾ ಡೆಲಿವರಿ ನೀಡುತ್ತಿದೆ. ಅದರಲ್ಲೂ ಟಾಟಾ ನೆಕ್ಸಾನ್ ಇವಿ ಕಾರಿಗೆ ಎಲ್ಲಿಲ್ಲದ ಬೇಡಿಕೆ ಇದ್ದು, ಇದೀಗ ಚೀನಾ ಮೂಲದ ಎಂಜಿ ಮೋಟಾರ್ ನೆಕ್ಸಾನ್‌ಗೆ ಸರಿಯಾದ ಪ್ರತಿಸ್ಪರ್ಧಿಯನ್ನು ಭಾರತದಲ್ಲಿ ಇಳಿಸಿದೆ. ಅದೇ ಎಂಜಿ ವಿಂಡ್ಸರ್.
ಎರಡೂ ಕಾರುಗಳ ನಡುವಿನ ಬೆಲೆ, ಫೀಚರ್ಸ್, ಪರ್ಫಾಮೆನ್ಸ್ ಹೋಲಿಕೆಯನ್ನು ಇಲ್ಲಿ ಮಾಡಲಾಗಿದೆ. ಹೊಸ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ರೂ.12.49 ಲಕ್ಷದಿಂದ ಆರಂಭವಾಗಿ ರೂ.17.19 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 30 ಕೆಡಬ್ಲ್ಯೂಹೆಚ್ & 45 ಕೆಡಬ್ಲ್ಯೂಹೆಚ್ ಎಂಬ ಎರಡು ಬ್ಯಾಟರಿ ಪ್ಯಾಕ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ.

ಹೊಸ MG ವಿಂಡ್ಸರ್ ಬೆಲೆಯು ಭಾರತದಲ್ಲಿ ರೂಪಾಂತರಗಳಿಗೆ ಅನುಗುಣವಾಗಿ ಕೈಗೆಟುಕುವ ಬೆಲೆಯಲ್ಲಿ ಸಿಗುತ್ತದೆ. ಆರಂಭಿಕ ಬೆಲೆ ರೂ.14 ಲಕ್ಷ ಮತ್ತು ಟಾಪ್ ವೇರಿಯೆಂಟ್ ಬೆಲೆ ರೂ.16 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದರಲ್ಲಿ 5 ಮಂದಿ ಸಂಚಾರಿಸಬಹುದು. 604 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಹಾಗೆಯೇ IP67-ಪ್ರಮಾಣೀಕೃತ 38kWh ಬ್ಯಾಟರಿಯನ್ನು ಹೊಂದಿದೆ.
ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಯ 30 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿರುವ ಮಾಡೆಲ್, ಸಂಪೂರ್ಣ ಚಾರ್ಜ್‌ನಲ್ಲಿ 275 ಕಿಲೋಮೀಟರ್ ರೇಂಜ್ ನೀಡುತ್ತದೆ. ಹಾಗೆಯೇ 45 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿರುವ ಮಾಡೆಲ್, ಸಂಪೂರ್ಣ ಚಾರ್ಜ್‌ನಲ್ಲಿ 489 ಕಿಲೋಮೀಟರ್ ಓಡುತ್ತದೆ ಎಂದು ಟಾಟಾ ಹೇಳಿಕೊಂಡಿದೆ.

ಎಂಜಿ ವಿಂಡ್ಸರ್ ವಿಷಯಕ್ಕೆ ಬಂದರೆ ಈ ಇವಿ ಕಾರಿನಲ್ಲಿ ಕೇವಲ 38 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಮಾತ್ರ ನೀಡಲಾಗಿದ್ದು, ಒಂದೇ ಚಾರ್ಜ್‌ನಲ್ಲಿ 332 ಕಿಮೀ ಪ್ರಮಾಣೀಕೃತ ರೇಂಜ್ ಹೊಂದಿದೆ. ಇದರಲ್ಲಿರುವ ಸಿಂಗಲ್ ಎಲೆಕ್ಟ್ರಿಕ್ ಮೋಟಾರ್ 134 ಬಿಹೆಚ್ ಪವರ್ ಹಾಗೂ 200 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಹೊಸ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಆಟೋ ಎಸಿ, ಕ್ರೂಸ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಎಂಜಿ ವಿಂಡ್ಸರ್ ವಿಷಯಕ್ಕೆ ಬಂದರೆ, ಏರೋ ಲೌಂಜ್ ಆಸನಗಳು, 15.6-ಇಂಚಿನ ಗ್ರ್ಯಾಂಡ್‌ವ್ಯೂ ಟಚ್ ಡಿಸ್‌ಪ್ಲೇ, ರಿಯಲ್ ಟೈಮ್ ನ್ಯಾವಿಗೇಷನ್, ಆಟೋಮೆಟಿಕ್ ಕ್ಲೈಮೆಟ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್, ಕೀಲೆಸ್ ಎಂಟ್ರಿ ಮತ್ತು ಪುಶ್-ಬಟನ್ ಸ್ಟಾರ್ಟ್ ಜೊತೆಗೆ ರಿಮೋಟ್ ವೆಹಿಕಲ್ ಕಂಟ್ರೋಲ್ ಮತ್ತು ಸುರಕ್ಷತಾ ಎಚ್ಚರಿಕೆಗಳು ಸೇರಿದಂತೆ 80 ಕ್ಕೂ ಹೆಚ್ಚು ಸಂಪರ್ಕಿತ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications