ವಿಮಾನದಂತೆ ಸೌಕರ್ಯವಿರುವ ಈ ಕಾರಿಗೆ ಫುಲ್ ಡಿಮ್ಯಾಂಡ್, ಮುಗಿಬಿದ್ದ ಗ್ರಾಹಕರು.. ತಕ್ಷಣ ಮನೆಗೆ ತರಲು ಆಗಲ್ಲ!

ಎಂಜಿ ವಿಂಡ್ಸರ್ (MG Windsor) ಜನಪ್ರಿಯ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಈ ಕಾರು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಸಹ ತಾಮುಂದು - ನಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಕಳೆದ ವರ್ಷದ ಅಕ್ಟೋಬರ್‌ನಲ್ಲಿ ನೂತನ ಎಂಜಿ ವಿಂಡ್ಸರ್ ಇವಿ ವಿತರಣೆಯನ್ನು ಶುರು ಮಾಡಲಾಗಿತ್ತು. ಅಂದಿನಿಂದ ಪ್ರತಿ ತಿಂಗಳು ಸರಾಸರಿ 3,000ಕ್ಕೂ ಅಧಿಕ ಕಾರುಗಳನ್ನು ಯಶಸ್ವಿಯಾಗಿ ಮಾರಾಟ ಮಾಡಲಾಗುತ್ತಿದೆ.

ಸದ್ಯ, ನೂತನ ಎಂಜಿ ವಿಂಡ್ಸರ್ ಇವಿಗೆ ಭಾರೀ ಬೇಡಿಕೆ ಸೃಷ್ಟಿಯಾಗಿದ್ದು, ಈ ಮಾರ್ಚ್ ತಿಂಗಳು ಸ್ವಲ್ಪ ಹೆಚ್ಚಿನ ಕಾಯುವಿಕೆ ಅವಧಿಯನ್ನು ಹೊಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ಎಂಜಿ ವಿಂಡ್ಸರ್ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಇವತ್ತು ಬುಕ್ಕಿಂಗ್ ಮಾಡಿದರೂ ವಿತರಣೆಯಾಗಲು 1.5 ರಿಂದ 2 ತಿಂಗಳು ಕಾಲಾವಕಾಶ ಬೇಕಾಗುತ್ತದೆ.

MG Windsor March 2025 Waiting Period Revealed Bengaluru To New Delhi

ಅದೇ ರೀತಿಯಲ್ಲಿ ಈ ಕಾರು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 1 ರಿಂದ 2 ತಿಂಗಳ ಅವಧಿಯಲ್ಲಿ ಗ್ರಾಹಕರ ಮನೆ ಸೇರುತ್ತದೆ. ವಾಣಿಜ್ಯ ರಾಜಧಾನಿ ಮುಂಬೈನಲ್ಲಿ 1.5 ರಿಂದ 2 ತಿಂಗಳು, ಮುತ್ತಿನ ನಗರಿ ಹೈದರಾಬಾದ್‌ನಲ್ಲಿ 2 ತಿಂಗಳು, ಪುಣೆಯಲ್ಲಿ 2 ತಿಂಗಳು, ಕಡಲ ನಗರ ಚೆನ್ನೈನಲ್ಲಿ 2 ತಿಂಗಳು ಹಾಗೂ ಉತ್ತರ ಪ್ರದೇಶದ ನೋಯ್ಡಾದಲ್ಲಿ 1.5 ತಿಂಗಳು ಕಾಯುವಿಕೆ ಅವಧಿಯನ್ನು ಹೊಂದಿದೆ.

ಎಂಜಿ ವಿಂಡ್ಸರ್ ಇವಿ ವಿಶೇಷತೆಗಳೇನು: ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಈ ಎಲೆಕ್ಟ್ರಿಕ್ ಕಾರು, ಕನಿಷ್ಠ ರೂ.14 ಲಕ್ಷ ಹಾಗೂ ಗರಿಷ್ಠ ರೂ.16 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಹೊರಭಾಗದಲ್ಲೂ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ಪರ್ಲ್ ವೈಟ್, ಕ್ಲೇ ಬೀಜ್ ಮತ್ತು ಸ್ಟಾರ್‌ಬರ್ಸ್ಟ್ ಬ್ಲ್ಯಾಕ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

MG Windsor March 2025 Waiting Period Revealed Bengaluru To New Delhi

ಈ ಕಾರು 38 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ ಬರೋಬ್ಬರಿ 331 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ಕೊಡುತ್ತದೆ. ಚಾಲಕರ ಅನುಕೂಲಕ್ಕಾಗಿ ಇಕೋ, ಇಕೋ ಪ್ಲಸ್, ನಾರ್ಮಲ್ ಹಾಗೂ ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ಹೊಂದಿದೆ.

ನೂತನ ಎಂಜಿ ವಿಂಡ್ಸರ್ ಇವಿ 5-ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 604 ಲೀಟರ್‌ನ ಬೂಟ್ ಸ್ಪೇಸ್‌ನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (15.6-ಇಂಚು), ಫುಲ್ - ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್, ಕೀಲೆಸ್ ಎಂಟ್ರಿ ಮತ್ತು ಪುಶ್ ಬಟನ್ ಸ್ಟಾರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಈ ಎಲೆಕ್ಟ್ರಿಕ್ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಗರಿಷ್ಠ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಹೊಸ ಎಂಜಿ ವಿಂಡ್ಸರ್ ಇವಿಗೆ ಟಾಟಾ ನೆಕ್ಸಾನ್ ಇವಿ, ಮಹೀಂದ್ರಾ ಎಕ್ಸ್‌ಯುವಿ400 ಇವಿ ಹಾಗೂ ಟಾಟಾ ಪಂಚ್ ಇವಿಗಳು ಪ್ರಬಲವಾದ ಎದುರಾಳಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, March 11, 2025, 10:27 [IST]
English summary
Mg windsor march 2025 waiting period revealed bengaluru to new delhi
Read more on mg motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+