MG ZS EV: 5-ಸೀಟರ್.. ಹಬ್ಬದ ಋತುವಿನಲ್ಲಿ ಖರೀದಿಸಿ ಎಂಜಿ ಜಡ್ಎಸ್ ಇವಿ, ಬೆಲೆ ಎಷ್ಟು.. ವಿಶೇಷತೆಗಳೇನು?
ದಸರಾ ಹಾಗೂ ದೀಪಾವಳಿ ಹಬ್ಬಗಳು ಮುಗಿದಿದ್ದು, ಇನೇನು ಜನವರಿಯಲ್ಲಿ ಸಂಕ್ರಾಂತಿ ಹಬ್ಬವು ಬರಲಿದೆ. ನೀವು ವಾರಾಂತ್ಯ ಹಾಗೂ ರಜಾದಿನಗಳಲ್ಲಿ ದೂರದ ಊರುಗಳಿಗೆ ಪ್ರಯಾಣಿಸಲು ಸಾಧ್ಯವಾಗುವಂತೆ ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಎಂಜಿ ಜಡ್ಎಸ್ ಇವಿ (MG ZS EV) ಅತ್ಯುತ್ತಮ ಆಯ್ಕೆಯಾಗಲಿದೆ. ಇದು ಪರಿಸರ ಸ್ನೇಹಿಯಾಗಿ ಎಸ್‌ಯುವಿಯಾಗಿದ್ದು, ಪ್ರತಿಯೊಂದು ಪ್ರವಾಸವನ್ನು ಸುಗಮ ಹಾಗೂ ಶಾಂತವಾಗಿರುತ್ತದೆ.
'ಎಂಜಿ ಜಡ್ಎಸ್ ಇವಿ' ವಿಶೇಷತೆಗಳೇನು:
ಇದು ಸ್ಪಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.17.99 ಲಕ್ಷ ಹಾಗೂ ಗರಿಷ್ಠ ರೂ.20.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಕ್ಸಿಕ್ಯೂಟಿವ್, ಎಕ್ಸೈಟ್ ಪ್ರೊ & ಎಕ್ಸ್‌ಕ್ಲೂಸಿವ್ ಪ್ಲಸ್ ಎಂಬ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ನೋಡುಗರ ಕಣ್ಣು ಕುಕ್ಕುವಂತಿದೆ. ಉತ್ತಮವಾದ ಸಿಗ್ನೇಚರ್ ಕೋಲ್ಡ್ ಫ್ರಂಟ್ ಗ್ರಿಲ್, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು 17-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಸ್ಟಾರಿ ಬ್ಲ್ಯಾಕ್, ಅರೋರಾ ಸಿಲ್ವರ್, ಕ್ಯಾಂಡಿ ವೈಟ್, ಗ್ಲೇಜ್ ರೆಡ್ ಹಾಗೂ ಡಾರ್ಕ್ ಗ್ರೀನ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ನೂತನ 'ಎಂಜಿ ಜಡ್ಎಸ್ ಇವಿ' ಹೆಚ್ಚು ವಿಶಾಲ ಗಾತ್ರದಲ್ಲಿದೆ. 4,323 ಮಿ.ಮೀ ಉದ್ದ, 1,809 ಮಿ.ಮೀ ಅಗಲ ಮತ್ತು 1,649 ಮಿ.ಮೀ ಎತ್ತರವಿದೆ. ಜೊತೆಗಿದು 200 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,585 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. 2,070 ಕೆಜಿ ತೂಕವಿದೆ.

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 50.3 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 461 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಬೆಂಗಳೂನಿಂದ ಕಾಫಿ ನಾಡು ಕೊಡಗಿಗೂ ಸುಲಭವಾಗಿ ಪ್ರಯಾಣಿಸಲು ಸಾಧ್ಯವಾಗಲಿದೆ.
ಈ ಕಾರಿನಲ್ಲಿರುವ ಎಲೆಕ್ಟ್ರಿಕ್ ಮೋಟಾರ್ 177 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 280 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 175 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 8.6 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಹೊಸ 'ಎಂಜಿ ಜಡ್ಎಸ್ ಇವಿ'ಯ ಬ್ಯಾಟರಿ ಪ್ಯಾಕ್ 7.4 ಕೆಡಬ್ಲ್ಯೂ ಎಸಿ ಚಾರ್ಜರ್ ಉಪಯೋಗ ಮಾಡಿದಾಗ, 0 ರಿಂದ 100% ಚಾರ್ಜ್ ಆಗುವುದಕ್ಕೆ 8.5 ರಿಂದ 9 ಗಂಟೆ ತೆಗೆದುಕೊಳ್ಳುತ್ತದೆ. ಅದೇ ರೀತಿಯಲ್ಲಿ 50 ಕೆಡಬ್ಲ್ಯೂ ಡಿಸಿ ಫಾಸ್ಟ್ ಚಾರ್ಜರ್ ಉಪಯೋಗ ಮಾಡಿದಾಗ ಕೇವಲ 60 ನಿಮಿಷಗಳಲ್ಲಿ 0 ರಿಂದ 80% ಚಾರ್ಜ್ ಆಗುತ್ತದೆ.
ಇದರ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. ಸಾಫ್ಟ್-ಟಚ್ ಮೆಟೀರಿಯಲ್‌ಗಳನ್ನು ಒಳಗೊಂಡಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ತೆಗದುಕೊಂಡು ಸಾಧ್ಯವಾಗುವಂತೆ 448 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.
ಈ ಕಾರು ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಬಹುಮುಖ್ಯವಾಗಿ 10.1 ಇಂಚಿನ ಹೆಚ್‌ಡಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7 ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್, ಡಿಜಿಟಲ್ ಕೀ, ಮಲ್ಟಿ ಫಂಕ್ಷನ್ ಟಿಲ್ಟ್ ಸ್ಟೀರಿಂಗ್ ವೀಲ್, ಕಪ್ ಹೋಲ್ಡರ್‌ಗಳು, ಆರ್ಮ್‌ರೆಸ್ಟ್, ಹೈಟ್ ಅಡ್ಜಸ್ಟೇಬಲ್ ಸೀಟ್ ಹಾಗೂ ರೇರ್ ಎಸಿ ವೆಂಟ್‌ಗಳನ್ನು ಒಳಗೊಂಡಿದೆ.
ನೂತನ 'ಎಂಜಿ ಜಡ್ಎಸ್ ಇವಿ' ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications








