2025ರ ಅತ್ಯಂತ ನಿರೀಕ್ಷಿತ 5 ಹೊಸ SUVಗಳಿವು: ಹ್ಯುಂಡೈ, ಟಾಟಾ, ಮಾರುತಿ, ಕಿಯಾ & ಮಹೀಂದ್ರಾ ಮಧ್ಯೆ ಬಿಗ್ ವಾರ್!

2025 ಮುಕ್ತಾಯಗೊಳ್ಳಲು ಎರಡೇ ತಿಂಗಳು ಬಾಕಿಯಿದೆ. ನೂತನ ಕಾರುಗಳನ್ನು ಬಿಡುಗಡೆಗೊಳಿಸುವ ಸಂಬಂಧ ಜನಪ್ರಿಯ ವಾಹನ ತಯಾರಕ ಕಂಪನಿಗಳಾದ ಹ್ಯುಂಡೈ, ಟಾಟಾ, ಮಾರುತಿ ಕಿಯಾ ಹಾಗೂ ಮಹೀಂದ್ರಾ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಈ ಕಂಪನಿಗಳಿಂದ 5 ಪ್ರಮುಖ ಎಸ್‌ಯುವಿಗಳು ಮಾರಾಟಕ್ಕೆ ಬರಲಿವೆ. ಒಂದಕ್ಕಿಂದ ಒಂದು ಚೆನ್ನಾಗಿರಲಿದ್ದು, ಹತ್ತಾರು ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿರಲಿವೆ. ಬನ್ನಿ.. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಹ್ಯುಂಡೈ ವೆನ್ಯೂ (Hyundai Venue):

ಹೊಸ ತಲೆಮಾರಿನ 'ಹ್ಯುಂಡೈ ವೆನ್ಯೂ' ಕಾಂಪ್ಯಾಕ್ಟ್ ಎಸ್‌ಯುವಿಯನ್ನು ಇದೇ ನವೆಂಬರ್ 4ರಂದು ಪರಿಚಯಿಸಲಾಗುತ್ತದೆ. ಸದ್ಯ ಬುಕ್ಕಿಂಗ್ ಶುರುವಾಗಿದ್ದು, ಆಸಕ್ತ ಗ್ರಾಹಕರು ರೂ.25,000 ಮುಂಗಡ ಹಣ ಪಾವತಿಸಿ, ಕಂಪನಿಯ ಅಧಿಕೃತ ವೆಬ್‌ಸೈಟ್‌ ಅಥವಾ ಸಮೀಪದ ಡೀಲರ್‌ಶಿಪ್‌ಗೆ ಭೇಟಿ ನೀಡಿ, ಆರ್ಡರ್ ಮಾಡಬಹುದು. ಇದು ರೂ.8 ಲಕ್ಷದಿಂದ ರೂ.14 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರುವ ನಿರೀಕ್ಷೆಯಿದೆ.

Most Awaited 5 New SUVs In 2025 Venue Sierra e Vitara Seltos And XEV 7e Details

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿರುವ ಸಾಧ್ಯತೆಯಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿರಬಹುದು ಎನ್ನಲಾಗಿದೆ. 5 ಆಸನಗಳನ್ನು ಒಳಗೊಂಡಿರಲಿದೆ. ದೊಡ್ಡ ಗಾತ್ರದ ಇನ್ಫೋಟೈನ್‌ಮೆಂಟ್ ಸಿಸ್ಟಮ್‌, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ 6 ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದೆ ಎಂದು ಹೇಳಲಾಗಿದೆ.

ಟಾಟಾ ಸಿಯೆರಾ (Tata Sierra):

ಇದು ನವೆಂಬರ್ ಮೊದಲ ಅಥವಾ ಎರಡನೇ ವಾರದಲ್ಲಿ ಬಿಡುಗಡೆಯಾಗಿರುವ ನಿರೀಕ್ಷೆಯಿದೆ. ರೂ.11 ಲಕ್ಷದಿಂದ ರೂ.20 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿರಬಹುದು ಎಂದು ಎನ್ನಲಾಗಿದೆ. ಅತ್ಯಾಧುನಿಕವಾದ ವಿನ್ಯಾಸ ಹೊಂದಿರಲಿದ್ದು, ಹಲವು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗಬಹುದು ಎಂದು ಅಂದಾಜಿಸಲಾಗಿದೆ.

Most Awaited 5 New SUVs In 2025 Venue Sierra e Vitara Seltos And XEV 7e Details

ನೂತನ ಸಿಯೆರಾ 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊಚಾರ್ಜ್ಡ್ ಪೆಟ್ರೋಲ್ ಮತ್ತು 1.5-ಲೀ. ಟರ್ಬೊ ಡೀಸೆಲ್ ಎಂಜಿನ್‌ನ್ನು ಪಡೆದುಕೊಂಡಿರಲಿದೆ. ಜೊತೆಗೆ ಎಲೆಕ್ಟ್ರಿಕ್ ಪವರ್‌ಟ್ರೇನ್ ಆಯ್ಕೆಯಲ್ಲಿಯೂ ಮಾರಾಟಕ್ಕೆ ಬರಬಹುದು ಎಂದು ಹೇಳಲಾಗಿದೆ. 5 ಆಸನಗಳನ್ನು ಹೊಂದಿರಲಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (14.5 ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್ ಮತ್ತು 6 ಏರ್‌ಬ್ಯಾಗ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ ಎನ್ನಲಾಗಿದೆ.

ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara):

ಈ ಎಲೆಕ್ಟ್ರಿಕ್ ಎಸ್‌ಯುವಿಯು ಡಿಸೆಂಬರ್‌ ತಿಂಗಳಲ್ಲಿ ಮಾರಾಟಕ್ಕೆ ಬರಲಿದೆ. ರೂ.17 ಲಕ್ಷದಿಂದ ರೂ.22.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದುಕೊಂಡಿರಬಹುದು ಎಂದು ಹೇಳಲಾಗಿದೆ. 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) & 61 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿರಲಿದೆ. ಭರ್ತಿ ಚಾರ್ಜ್‌ನಲ್ಲಿ 500 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ. ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ.

Most Awaited 5 New SUVs In 2025 Venue Sierra e Vitara Seltos And XEV 7e Details

ಕಿಯಾ ಸೆಲ್ಟೋಸ್ (Kia Seltos):

ಎರಡನೇ ತಲೆಮಾರಿನ 'ಕಿಯಾ ಸೆಲ್ಟೋಸ್' ಎಸ್‌ಯುವಿ ಕೂಡ ಅತಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ರೂ.11 ಲಕ್ಷದಿಂದ ರೂ.20 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿರುವ ಸಾಧ್ಯತೆಯಿದೆ. 1.5-ಲೀ. ಪೆಟ್ರೋಲ್, 1.5-ಲೀ ಟರ್ಬೊ ಪೆಟ್ರೋಲ್ ಹಾಗೂ 1.5-ಲೀ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದುಕೊಂಡಿರಬಹುದು ಎನ್ನಲಾಗಿದೆ. 5-ಆಸನಗಳನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಮಹೀಂದ್ರಾ ಎಕ್ಸ್ಇವಿ 7ಇ (Mahindra XEV 7e)

ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಈ ವರ್ಷವೇ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ. ರೂ.21 ಲಕ್ಷದಿಂದ ರೂ.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದುಕೊಂಡಿರಬಹುದು ಎನ್ನಲಾಗಿದೆ. 59 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 79 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಹೊಂದಿರುವ ನಿರೀಕ್ಷೆಯಿದೆ. ಸಂಪೂರ್ಣ ಚಾರ್ಜ್‌ನಲ್ಲಿ 650 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡಬಹುದು ಎಂದು ಹೇಳಲಾಗಿದೆ.

More from DriveSpark

Article Published On: Sunday, October 26, 2025, 9:03 [IST]
English summary
Most awaited 5 new suvs in 2025 venue sierra e vitara seltos and xev 7e details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+