Kia: 6 & 7 ಆಸನಗಳು.. ಹೊಸ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಎಂಪಿವಿ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ಇದೇ ಮೇ ತಿಂಗಳು ನೂತನ ಹೊಸ ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis) ಎಂಪಿವಿಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿತ್ತು. ಇದೊಂದು ಫ್ಯಾಮಿಲಿ ಕಾರಾಗಿದ್ದು, 2 ಕುಟುಂಬಗಳು ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ನೀವು ಹೊಸ 'ಕ್ಯಾರೆನ್ಸ್ ಕ್ಲಾವಿಸ್'ನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ನಾವಿಲ್ಲಿ, ಈ ಎಂಪಿವಿಯ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ದೇಶೀಯವಾಗಿ 'ಕಿಯಾ ಕ್ಯಾರೆನ್ಸ್ ಕ್ಲಾವಿಸ್' ಎಂಪಿವಿ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗಲಿದೆ. ಇದರ ಹೆಚ್‌ಟಿಇ (ಪೆಟ್ರೋಲ್) ರೂಪಾಂತರ, ರೂ.14.30 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ರೂ.6 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಮನೆಗೆ ತಂದರೆ, ರೂ.8.30 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಗಳಿಗೆ ಮಾಸಿಕ ರೂ.17,000 ವರೆಗೆ ಇಎಂಐ ಕಟ್ಟಬೇಕು.

New 2025 Kia Carens Clavis On Road Price And Emi Details

ಈ ಕಾರಿನ ಹೆಚ್‌ಟಿಕೆ (ಡೀಸೆಲ್) ರೂಪಾಂತರ, ರೂ.19.25 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.6 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಖರೀದಿ ಮಾಡಿದರೆ, ರೂ.13.25 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.27,000 ವರೆಗೆ ಇಎಂಐ ಪಾವತಿಸಬೇಕು.

ಮತ್ತೊಂದು ಹೆಚ್‌ಟಿಕೆ (ಪೆಟ್ರೋಲ್) ರೂಪಾಂತರ, ರೂ.16.75 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ಇದನ್ನು ರೂ.6 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.10.75 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಗಳಿಗೆ ಮಾಸಿಕ ರೂ.22,000 ವರೆಗೆ ಇಎಂಐ ಕಟ್ಟಬೇಕು.

New 2025 Kia Carens Clavis On Road Price And Emi Details

ಇನ್ನೊಂದು ಹೆಚ್‌ಟಿಎಕ್ಸ್ (ಪೆಟ್ರೋಲ್) ರೂಪಾಂತರ, ರೂ.22.75 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.6 ಲಕ್ಷ ಡೌನ್-ಪೇಮೆಂಟ್ ಕಟ್ಟಿ ತೆಗೆದುಕೊಂಡರೆ, ರೂ.16.75 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.34,000 ವರೆಗೆ ಇಎಂಐ ಪಾವತಿ ಮಾಡಬೇಕು.

ಕಿಯಾ ಕ್ಯಾರೆನ್ಸ್ ಕ್ಲಾವಿಸ್ ವಿಶೇಷತೆಗಳೇನು:

ಈ ಎಂಪಿವಿ ಎಂಪಿವಿ ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ತ್ರೈ-ಅಂಗುಲರ್ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ 17-ಇಂಚಿರುವ ಡೈಮಂಡ್-ಕಟ್ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಇಂಪೀರಿಯಲ್ ಬ್ಲೂ, ಗ್ಲೇಸಿಯರ್ ವೈಟ್ ಪರ್ಲ್, ಗ್ರಾವಿಟಿ ಗ್ರೇ, ಸ್ಪಾರ್ಕ್ಲಿಂಗ್ ಸಿಲ್ವರ್ ಹಾಗೂ ಅರೋರಾ ಬ್ಲ್ಯಾಕ್ ಪರ್ಲ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 6 ಹಾಗೂ 7 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ.

New 2025 Kia Carens Clavis On Road Price And Emi Details

ಇದು 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 15.34 ರಿಂದ 19.54 ಕಿ.ಮೀವರೆಗೆ ಮೈಲೇಜ್ ನೀಡಬಲ್ಲದು. ದೂರದ ಊರುಗಳಿಗೆ ಹೋಗಲು ಸಾಧ್ಯವಾಗುವಂತೆ 45 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.

ಹೊಸ ಕ್ಯಾರೆನ್ಸ್ ಕ್ಲಾವಿಸ್ ಎಂಪಿವಿ 10.25-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, 64-ಕಲರ್ ಆಂಬಿಯೆಂಟ್ ಲೈಟಿಂಗ್ ಮತ್ತು 9-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಹಾಗೂ ಆಲ್ ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

ನಿಮ್ಮ ಗಮನಕ್ಕೆ.. ಈ ಕಾರಿನ ಕೆಲವು ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಇಎಂಐ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

More from DriveSpark

Article Published On: Thursday, July 31, 2025, 15:22 [IST]
English summary
New 2025 kia carens clavis on road price and emi details
Read more on kia motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+