ಯಾರು ಊಹಿಸಿರಲಿಲ್ಲ: ಎಂಜಿ - ಜಿಂದಾಲ್ ರಣತಂತ್ರ.. 4.99 ಲಕ್ಷಕ್ಕೆ ಹೊಸ ಕಾಮೆಟ್ ಇವಿ ಬಿಡುಗಡೆ, ಹೇಗಿದೆ?
ಭಾರತದ ಕಾರು ಮಾರುಕಟ್ಟೆಯು ವ್ಯಾಪಕವಾಗಿ ಬೆಳೆಯುತ್ತಿದೆ. ಅದರಲ್ಲೂ ಎಂಜಿ ಮೋಟಾರ್ & ಜಿಂದಾಲ್ ಕಂಪನಿಗಳು ವ್ಯಾಪಾರ ಪಾಲುದಾರಿಕೆ ಹೊಂದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ.. ಇವೆರೆಡು ಕಂಪನಿಗಳ ಒಪ್ಪಂದದ ಭಾಗವಾಗಿ ಕೆಲವೊಂದು ನವೀಕರಣಗಳನ್ನು ಪಡೆದುಕೊಂಡಿರುವ 2025ರ 'ಕಾಮೆಟ್' ಎಲೆಕ್ಟ್ರಿಕ್ ಕಾರನ್ನು ಬಿಡುಗಡೆಗೊಳಿಸಲಾಗಿದೆ. ಇದು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಅತಿ ಕಡಿಮೆ ಬೆಲೆಗೂ ಮಾರಾಟಕ್ಕೆ ಬಂದಿದೆ. ಬನ್ನಿ.. ಈ ನೂತನ ಕಾರಿನ ದರ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.
ನೂತನ ಎಂಜಿ ಕಾಮೆಟ್ ಇವಿ (MG Comet EV) ರೂ.4.99 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ಬೆಲೆಯಲ್ಲಿ ಬಿಡುಗಡೆಗೊಂಡಿದೆ. ಈ ಕಾರನ್ನು ಕಂಪನಿಯು ಬಾಸ್ (BaaS) ಯೋಜನೆಯಡಿ ಮಾರಾಟಗೊಳಿಸಲು ತೀರ್ಮಾನಿಸಿದೆ. ಇದರರ್ಥ ಪ್ರತಿ ಕಿಲೋಮೀಟರ್‌ಗೆ ನಿಗದಿಪಡಿಸಿದ ಬಾಡಿಗೆಯನ್ನು ಪಾವತಿ ಮಾಡಬೇಕು.

ಹೊಸ ಎಂಜಿ ಕಾಮೆಟ್ ಇವಿಯು ಎಕ್ಸಿಕ್ಯುಟಿವ್, ಎಕ್ಸೈಟ್, ಎಕ್ಸೈಟ್ ಫಾಸ್ಟ್ ಚಾರ್ಜರ್, ಎಕ್ಸ್‌ಕ್ಲೂಸಿವ್ ಹಾಗೂ ಎಕ್ಸ್‌ಕ್ಲೂಸಿವ್ ಫಾಸ್ಟ್ ಚಾರ್ಜರ್ ಎಂಬ 5 ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ದೊರೆಯುತ್ತದೆ. ಇದರ ಎಕ್ಸೈಟ್ & ಎಕ್ಸೈಟ್ ಫಾಸ್ಟ್ ಚಾರ್ಜರ್ ರೂಪಾಂತರಗಳು, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ ಹಾಗೂ ಎಲೆಕ್ಟ್ರಿಕಲಿ ಫೋಲ್ಡಿಂಗ್ ಔಟ್‌ಸೈಡ್ ರೇರ್ ವ್ಯೂ ಮಿರರ್‌ಗಳನ್ನು ಹೊಂದಿವೆ.
ಈ ಕಾರಿನ ಎಕ್ಸ್‌ಕ್ಲೂಸಿವ್ & ಎಕ್ಸ್‌ಕ್ಲೂಸಿವ್ ಫಾಸ್ಟ್ ಚಾರ್ಜರ್ ರೂಪಾಂತರಗಳು, ಹೊಸದಾಗಿರುವ ಲೆದರೆಟ್ ಸೀಟ್‌ಗಳು ಹಾಗೂ 4-ಸ್ಪೀಕರ್ ಆಡಿಯೊ ಸಿಸ್ಟಮ್‌ಗಳನ್ನು ಪಡೆದಿವೆ. ಜೊತೆಗೆ ಇವೆಲ್ಲ ರೂಪಾಂತರಗಳು ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ 10.25-ಇಂಚಿನ ಸ್ಕ್ರೀನ್, 55ಕ್ಕೂ ಹೆಚ್ಚು ಕನೆಕ್ಟ್ಡ್ ಕಾರ್ ಟೆಕ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿವೆ.
2025ರ ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರಿನ ಪವರ್‌ಟ್ರೇನ್ ಆಯ್ಕೆಯಲ್ಲಿ ಕೂಡ ಯಾವುದೇ ಮಾರ್ಪಾಡನ್ನು ಮಾಡಿಲ್ಲ. ಈ ಹ್ಯಾಚ್‌ಬ್ಯಾಕ್ 17.3 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಿಂಗಲ್ ಚಾರ್ಜ್‌ನಲ್ಲಿ 230 ಕಿಲೋಮೀಟರ್ ಕ್ರಮಿಸುತ್ತದೆ. ಇದರಲ್ಲಿ ಉಪಯೋಗಿಸಿರುವ ಎಲೆಕ್ಟ್ರಿಕ್ ಮೋಟಾರ್, 42 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 110 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.
ನೂತನ ಎಂಜಿ ಕಾಮೆಟ್ ಇವಿ, 2 ಡೋರ್‌ಗಳನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಲು 4 ಸೀಟ್‌ಗಳನ್ನು ಪಡೆದಿದೆ. ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ ಮತ್ತು ರೇರ್ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಇನ್ನು, ಹೊಸ ಎಂಜಿ ಕಾಮೆಟ್ ಇವಿಯ ಬುಕ್ಕಿಂಗ್ ಶುರುವಾಗಿದೆ. ಆಸಕ್ತ ಗ್ರಾಹಕರು ರೂ.11,000 ಮುಂಗಡ ಹಣವನ್ನು ಪಾವತಿಸುವುದರೊಂದಿಗೆ ಅಧಿಕೃತ ವೆಬ್‌ಸೈಟ್ ಅಥವಾ ಕಂಪನಿಯ ಡೀಲರ್‌ಶಿಪ್‌ಗೆ ಭೇಟಿ ನೀಡಿ, ಆರ್ಡರ್ ಮಾಡಬಹುದು. ಅತಿ ಶೀಘ್ರದಲ್ಲೇ ಈ ಕಾರಿನ ವಿತರಣೆಗಳು ಸಹ ಪ್ರಾರಂಭವಾಗುವ ನಿರೀಕ್ಷೆಯಿದೆ. ನೂತನ ಕಾಮೆಟ್ ಎಲೆಕ್ಟ್ರಿಕ್ ಕಾರಿಗೆ ಟಾಟಾ ಟಿಯಾಗೊ ಇವಿ & ಸಿಟ್ರನ್ ಇಸಿ3 ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








