Renault: 20 Km ಮೈಲೇಜ್.. 6.29 ಲಕ್ಷ.. ಹೊಸ ರೆನಾಲ್ಟ್ ಕೈಗರ್ ಫೇಸ್‌ಲಿಫ್ಟ್ ಬಿಡುಗಡೆ, ನಿರೀಕ್ಷೆಗೂ ಮೀರಿದ ವೈಶಿಷ್ಟ್ಯಗಳು!

ಬಹುನಿರೀಕ್ಷಿತ 2025ರ ರೆನಾಲ್ಟ್ ಕೈಗರ್ ಫೇಸ್‌ಲಿಫ್ಟ್ (Renault Kiger Facelift) ಭಾನುವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಇದೊಂದು ಎಸ್‌ಯುವಿಯಾಗಿದೆ. ಹಳೆಯ ಕೈಗರ್‌ಗೆ ಹೋಲಿಕೆ ಮಾಡಿದರೆ, ಹೊಸ ಕಾರು ವಿನ್ಯಾಸ ಹಾಗೂ ವೈಶಿಷ್ಟ್ಯಗಳಲ್ಲಿ ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿದೆ. ಅತ್ಯಂತ ಕಡಿಮೆ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ. ಬನ್ನಿ, ನೂತನ ಎಸ್‌ಯುವಿಯ ದರ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಹೊಚ್ಚ ಹೊಸ ರೆನಾಲ್ಟ್ ಕೈಗರ್ ಫೇಸ್‌ಲಿಫ್ಟ್ ಎಸ್‌ಯುವಿ, ರೂ.6.29 ಲಕ್ಷದಿಂದ ರೂ.11.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅಥೆಂಟಿಕ್, ಎವೊಲ್ಯೂಷನ್, ಟೆಕ್ನೋ, ಎಮೊಷನ್, ಎಮೊಷನ್ ಟರ್ಬೊ, ಟೆಕ್ನೋ ಟರ್ಬೊ ಸಿವಿಟಿ ಹಾಗೂ ಎಮೊಷನ್ ಸಿವಿಟಿ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿದೆ.

New 2025 Renault Kiger Facelift Launched In India Rs 6 29 Lakh Starting Price Details

ಈ ಕಾರು ಆಕರ್ಷಕವಾದ ವಿನ್ಯಾಸವನ್ನು ಪಡೆದಿದ್ದು, ನೋಡುಗರ ಸೆಳೆಯುವಂತಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, 2ಡಿ 'ರೆನಾಲ್ಟ್' ಡೈಮಂಡ್ ಲೋಗೋ, ಮರುವಿನ್ಯಾಸಗೊಳಿಸಲಾದ ಬಂಪರ್, ಏರ್ ಡ್ಯಾಮ್‌ಗಾಗಿ ಸ್ಯಾಟಿನ್ ಕ್ರೋಮ್ ಸರೌಂಡ್, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಡುಯಲ್ ಟೋನ್ ಅಲಾಯ್ ವೀಲ್‌ಗಳು ಹಾಗೂ ಎಲ್ಇಡಿ ಟೈಲ್ ಲೈಟ್‌ಗಳನ್ನು ಪಡೆದಿದೆ.

ಇದು 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಮತ್ತು ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 405 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

New 2025 Renault Kiger Facelift Launched In India Rs 6 29 Lakh Starting Price Details

ನೂತನ ರೆನಾಲ್ಟ್ ಕೈಗರ್ ಫೇಸ್‌ಲಿಫ್ಟ್ ಎಸ್‌ಯುವಿ, ಹಿಂದಿನ ಮಾಡೆಲ್‌ನಂತೆಯೇ ವಿಶಾಲ ಗಾತ್ರದಲ್ಲಿದೆ. 3,991 ಎಂಎಂ ಉದ್ದ, 1,750 ಅಗಲ ಮತ್ತು 1,605 ಎಂಎಂ ಎತ್ತರವಿದೆ. ಜೊತೆಗೆ 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,500 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ಹೊಸ ಕೈಗರ್ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1.0 ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 72 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 96 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಮತ್ತೊಂದು 1.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್, 100 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 160 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್ ಹಾಗೂ ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. ಈ ಕಾರು 19.83 ರಿಂದ 20.38 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಹೆಚ್ಚುವರಿಯಾಗಿ ಹಣ ಪಾವತಿಸಿದರೆ, ಡೀಲರ್‌ಶಿಪ್ ಫಿಟೆಡ್ ಸಿಎನ್‌ಜಿ ಕಿಟ್ ಆಯ್ಕೆಯೊಂದಿಗೂ ಸಿಗುತ್ತದೆ.

ಈ ಕಾರಿನ ಒಳಭಾಗವು ತುಂಬಾ ಅದ್ಭುತವಾಗಿದೆ. ವೈಟ್ & ಬ್ಲ್ಯಾಕ್ ಡುಯಲ್-ಟೋನ್ ಕ್ಯಾಬಿನ್ ಥೀಮ್‌ನ್ನು ಪಡೆದಿದೆ. ಸೀಟ್‌ಗಳು ನವೀನವಾಗಿವೆ. ಡ್ಯಾಶ್‌ಬೋರ್ಡ್‌ ಸಹ ಚೆನ್ನಾಗಿದೆ. 8-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7-ಇಂಚಿರುವ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ರೇರ್ ಎಸಿ ವೆಂಟ್‌ಗಳು, ಆಟೋ ಕ್ಲೇಮೇಟ್ ಕಂಟ್ರೋಲ್ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ನೂತನ ರೆನಾಲ್ಟ್ ಕೈಗರ್ ಫೇಸ್‌ಲಿಫ್ಟ್ ಎಸ್‌ಯುವಿಯು ಸುರಕ್ಷತೆಗೂ ಹೆಸರುವಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ರೇರ್ ಪಾರ್ಕಿಂಗ್ ಸೆನ್ಸರ್‌ಗಳು, ಟ್ರಾಕ್ಷನ್ ಕಂಟ್ರೋಲ್, ಹಿಲ್ ಸ್ಟಾರ್ಟ್ ಅಸಿಸ್ಟ್ ಹಾಗೂ ಮಲ್ಟಿ-ವ್ಯೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

More from DriveSpark

Article Published On: Sunday, August 24, 2025, 19:56 [IST]
English summary
New 2025 renault kiger facelift launched in india rs 6 29 lakh starting price details
Read more on renault india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+