Tata: ಜನ ಶೋರೂಂ ಮುಂದೆ ಕ್ಯೂ ನಿಲ್ಲುವರು.. ಈ ನವೆಂಬರ್‌ನಲ್ಲಿ ಟಾಟಾದಿಂದ 3 ಹೊಸ ಕಾರುಗಳು ಮಾರಾಟಕ್ಕೆ!

ಟಾಟಾ ಮೋಟಾರ್ಸ್ (Tata Motors), ಜನಪ್ರಿಯ ಸ್ವದೇಶಿ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯವಾಗಿ ಟಿಯಾಗೊ, ಟಿಗೂರ್, ಅಲ್ಟೋಜ್, ಪಂಚ್ ಹಾಗೂ ಕರ್ವ್ ಸೇರಿದಂತೆ ವಿವಿಧ ಕಾರುಗಳ ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಈ ನವೆಂಬರ್‌ನಲ್ಲಿ 3 ಹೊಚ್ಚ ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಕಂಪನಿಯು ತಯಾರಿ ಮಾಡಿಕೊಳ್ಳುತ್ತಿದೆ. ಸಿಯೆರಾದೊಂದಿಗೆ ಪೆಟ್ರೋಲ್ ಚಾಲಿತ ಸಫಾರಿ ಹಾಗೂ ಹ್ಯಾರಿಯರ್ ಎಸ್‌ಯುವಿಗಳನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಿದೆ ಎಂದು ವರದಿಯಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಟಾಟಾ ಸಿಯೆರಾ (Tata Sierra):

ಈ ಕಾರನ್ನು ನವೆಂಬರ್ 25 ರಂದು ಪರಿಚಯಿಸಲಾಗುತ್ತದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿರಲಿದೆ. ಐಸಿಇ (ಪೆಟ್ರೋಲ್/ ಡೀಸೆಲ್) ಹಾಗೂ ಎಲೆಕ್ಟ್ರಿಕ್ ಚಾಲಿತ ಪವರ್‌ಟ್ರೈನ್ ಆಯ್ಕೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಾಗಲಿದೆ. ಕನಿಷ್ಠ ರೂ.11 ಲಕ್ಷ ಹಾಗೂ ಗರಿಷ್ಠ ರೂ.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರುವ ನಿರೀಕ್ಷೆಯಿದೆ. 5 ಆಸನಗಳನ್ನು ಹೊಂದಿರಲಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.

New 3 Tata Cars Launch in November 2025 Sierra Petrol Safari And Harrier Details

ಇದರ 'ಐಸಿಇ' ಮಾಡೆಲ್ 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಟರ್ಬೊ ಡೀಸೆಲ್ ಎಂಜಿನ್‌ನ್ನು ಒಳಗೊಂಡಿರಲಿದೆ. 20 ಕಿ.ಮೀವರೆಗೆ ಮೈಲೇಜ್ ನೀಡುವ ಸಾಧ್ಯತೆಯಿದೆ. ಅದೇ ರೀತಿಯಲ್ಲಿ 'ಎಲೆಕ್ಟ್ರಿಕ್' ಮಾಡೆಲ್ 65 ಹಾಗೂ 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆಯಿರಲಿದೆ. ಸಂಪೂರ್ಣ ಚಾರ್ಜ್‌ನಲ್ಲಿ 627 ಕಿ.ಮೀ ರೇಂಜ್ (ಮೈಲೇಜ್) ಕೊಡಬಹುದು ಎನ್ನಲಾಗಿದೆ.

ನೂತನ 'ಸಿಯೆರಾ' ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿರಲಿದೆ. ವಿಶೇಷವಾಗಿ ದೊಡ್ಡ ಗಾತ್ರದ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿರುವ ನಿರೀಕ್ಷೆಯಿದೆ.

New 3 Tata Cars Launch in November 2025 Sierra Petrol Safari And Harrier Details

ಟಾಟಾ ಸಫಾರಿ (Tata Safari):

ಪೆಟ್ರೋಲ್ ರೂಪದ 'ಟಾಟಾ ಸಫಾರಿ' ಕೂಡ ಇದೇ ನವೆಂಬರ್‌ನಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಆದರೆ, ಈ ಕುರಿತಂತೆ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ. ಇದು 1.5-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿರಲಿದೆ. 168 ಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 280 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಲಿದೆ ಎನ್ನಲಾಗಿದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿರುವ ನಿರೀಕ್ಷೆಯಿದೆ.

ಪ್ರಸ್ತುತ ಖರೀದಿ ದೊರೆಯುವ 'ಸಫಾರಿ' ಎಸ್‌ಯುವಿ, ರೂ.14.66 ಲಕ್ಷದಿಂದ ರೂ.25.96 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಕೇವಲ 2-ಲೀಟರ್ ಡೀಸೆಲ್ ಎಂಜಿನ್‌ ಆಯ್ಕೆಯಲ್ಲಿಯೂ ಸಿಗಲಿದ್ದು, 14 ರಿಂದ 16 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 6/ 7 ಆಸನಗಳನ್ನು ಹೊಂದಿದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 7 ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

New 3 Tata Cars Launch in November 2025 Sierra Petrol Safari And Harrier Details

ಟಾಟಾ ಹ್ಯಾರಿಯರ್ (Tata Harrier):

ಇದು ಕೂಡ ಈ ನವೆಂಬರ್‌ನಲ್ಲಿ ಪೆಟ್ರೋಲ್ ಚಾಲಿತ ಆಯ್ಕೆಯಲ್ಲಿ ಮಾರಾಟಕ್ಕೆ ಬರುವ ಎಲ್ಲ ಲಕ್ಷಣಗಳಿವೆ. ಆದರೆ, ಈ ಬಗ್ಗೆ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ. ನೂತನ 'ಹ್ಯಾರಿಯರ್' ಎಸ್‌ಯುವಿಯು 1.5-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿರಲಿದೆ. 168 ಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 280 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕಲಿದೆ ಎಂದು ಹೇಳಲಾಗಿದೆ. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದುಕೊಂಡಿರುವ ಸಾಧ್ಯತೆಯಿದೆ.

ಸದ್ಯ ಗ್ರಾಹಕರ ಖರೀದಿಗೆ ಲಭ್ಯವಿರುವ 'ಹ್ಯಾರಿಯರ್' ರೂ.14 ಲಕ್ಷದಿಂದ ರೂ.25.25 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 2-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 16.8 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಪಡೆದಿದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 7-ಏರ್‌ಬ್ಯಾಗ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

More from DriveSpark

Article Published On: Wednesday, October 29, 2025, 13:27 [IST]
English summary
New 3 tata cars launch in november 2025 sierra petrol safari and harrier details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+